ಬೆಂಗಳೂರು: ಇಂದಿನಿಂದ (ಮಾರ್ಚ್ 9) ರಾಜ್ಯಾದ್ಯಂತ ಪಿಯು ಪರೀಕ್ಷೆ ನಡೆಯಲಿದ್ದು, ಪಿಯು ಬೋರ್ಡ್ನಿಂದ ಸಕಲ ಸಿದ್ಧತೆ ಮಾಡಲಾಗಿದೆ. ಸುಮಾರು 7.27 ಲಕ್ಷ ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
5,716 ಕಾಲೇಜುಗಳಿಂದ 7.27 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಸಜ್ಜಾಗಿದ್ದಾರೆ. ರಾಜ್ಯದಲ್ಲಿ 1,109 ಪರೀಕ್ಷಾ ಕೇಂದ್ರಗಳನ್ನ ಗುರುತಿಸಲಾಗಿದೆ. ಯಾವುದೇ ಲೋಪ ದೋಷ ಆಗದಂತೆ ಎಚ್ಚರಿಕೆ ವಹಿಸಲಾಗಿದ್ದು, ಊಹಾಪೋಹ, ವದಂತಿಗಳಿಗೆ ಕಿವಿಗೊಡದಂತೆ ಶಿಕ್ಷಣ ಇಲಾಖೆ ಮನವಿ ಮಾಡಿದೆ.
ಪರೀಕ್ಷೆಗೆ ಭದ್ರತಾ ಕ್ರಮಗಳು
- ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
- ಸಿಸಿ ಕ್ಯಾಮೆರಾ ಕಣ್ಗಾವಲು, ಪರೀಕ್ಷಾ ಕೇಂದ್ರದ ಸುತ್ತಲಿನ ಜೆರಾಕ್ಸ್ ಕೇಂದ್ರಗಳು ಪರೀಕ್ಷೆ ಅವಧಿಯಲ್ಲಿ ಬಂದ್
- ಸೈಬರ್ ಸೆಂಟರ್, ಟ್ಯೂಷನ್ ಕೇಂದ್ರಗಳು, ಕಂಪ್ಯೂಟರ್, ಗೇಮ್ಸ್ ಕೇಂದ್ರಗಳ ಮೇಲೆ ವಿಶೇಷ ನಿಗಾ
- ಈ ಹಿಂದೆ ಪರೀಕ್ಷಾ ಅಕ್ರಮಗಳಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಗಳು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ
- ಶಂಕಿತ ವ್ಯಕ್ತಿಗಳ ಮೇಲೆ ವಿಶೇಷ ನಿಗಾ
- ಹಿಂದಿನ ವರ್ಷಗಳಲ್ಲಿ ಪರೀಕ್ಷಾ ಅಕ್ರಮ ವರದಿಯಾಗಿರುವ ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚಿನ ನಿಗಾ
- ಮೊಬೈಲ್ ಫೋನ್, ಸ್ಮಾರ್ಟ್ವಾಚ್, ಇಯರ್ಫೋನ್ ಸೇರಿದಂತೆ ಎಲ್ಲ ರೀತಿಯ ಎಲೆಕ್ಟ್ರಾನಿಕ್ಸ್ ಸಾಧನಗಳ ನಿಷೇಧ
- ವಿದ್ಯಾರ್ಥಿಗಳು ಸಮಯ ನೋಡಿಕೊಳ್ಳಲು ಗೋಡೆ ಗಡಿಯಾರದ ವ್ಯವಸ್ಥೆ
- ವದಂತಿಗಳನ್ನು ಹಬ್ಬಿಸುವ ಕಿಡಿಗೇಡಿಗಳ ಮೇಲೆ ಸೈಬರ್ ಅಧಿಕಾರಿಗಳು, ಸ್ಥಳೀಯ ಪೊಲೀಸರು ಹಾಗೂ ಇನ್ನಿತರ ತಂಡಗಳು ವಿಶೇಷ ನಿಗಾ
- ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳ ಸಾಗಣೆ, ಸಂಗ್ರಹಣೆ, ಮೌಲ್ಯಮಾಪನ ಕೇಂದ್ರಗಳಲ್ಲಿ 24/7 ಪೊಲೀಸ್ ಭದ್ರತೆ
- ಪರೀಕ್ಷಾ ಕೇಂದ್ರಗಳಲ್ಲಿ ಭದ್ರತಾ ಕಾರ್ಯ ಮತ್ತು ಪರೀಕ್ಷಾ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುವ ಅಧಿಕಾರಿ ಮತ್ತು ಸಿಬ್ಬಂದಿಗೆ ಮೊಬೈಲ್ ಫೋನ್ ಬಳಕೆ ನಿಷೇಧ
- ಪರೀಕ್ಷಾ ಕೇಂದ್ರದ ಅಧೀಕ್ಷಕರು ಮಾತ್ರ ಕ್ಯಾಮೆರಾ ಸೌಲಭ್ಯ ಇಲ್ಲದ ಬೇಸಿಕ್ ಮೊಬೈಲ್ ಫೋನ್ ಬಳಕೆಗೆ ಅನುಮತಿ
ಇದನ್ನೂ ಓದಿ: SSC CHSL 2022 | ದ್ವಿತೀಯ ಪಿಯುಸಿ ಓದಿದವರಿಗೆ ಕೇಂದ್ರ ಸರ್ಕಾರಿ ಜಾಬ್