ಬೆಂಗಳೂರು: ಸಾಮಾಜಿಕ ಉದ್ಯಮವಾಗಿರುವ ಸೆಲ್ಕೋ ಸಂಸ್ಥೆಯು (Selco India) ಕೊಡಮಾಡುವ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿಯನ್ನು ಸೌರವಿದ್ಯುತ್ ಪ್ರವರ್ತಕ ಅಮೆರಿಕಾದ ರಿಚರ್ಡ್ ಹ್ಯಾನ್ಸೆನ್ ಅವರಿಗೆ ಬೆಂಗಳೂರಿನ ವೈಯಾಲಿ ಕಾವಲ್‌ನಲ್ಲಿರುವ ಚೌಡಯ್ಯ ಸ್ಮಾರಕ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರು, ರಿಚರ್ಡ್ ಹ್ಯಾನ್ಸೆನ್ ಅವರಿಗೆ ಅಂತಾರಾಷ್ಟ್ರೀಯ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಿದರು.
ಇದನ್ನೂ ಓದಿ: Neeraj Chopra: 2 ತಿಂಗಳು ವಿದೇಶದಲ್ಲಿ ಕಠಿಣ ತರಬೇತಿ ಪಡೆಯಲಿದ್ದಾರೆ ನೀರಜ್ ಚೋಪ್ರಾ
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೂಲಕ ಬೆಸೆದು ಪ್ರಸರಿಸುವಲ್ಲಿ ಮಹತ್ವದ ಪಾತ್ರ ವಹಿಸಿರುವ ಅಮೆರಿಕಾದ ರಿಚರ್ಡ್ ಹ್ಯಾನ್ಸೆನ್ ಅವರಿಗೆ ಸೆಲ್ಕೋ ಸಂಸ್ಥೆಯು ಪ್ರತಿಷ್ಠಿತ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಇದನ್ನೂ ಓದಿ: Gold Rate Today: ಚಿನ್ನ ಕೊಳ್ಳಲು ಇಂದೇ ಸಕಾಲ, ಬಂಗಾರದ ಬೆಲೆಯಲ್ಲಿ ಇಳಿಕೆ
ಕಾರ್ಯಕ್ರಮದಲ್ಲಿ ಸೆಲ್ಕೋ ಫೌಂಡೇಷನ್‌ನ ಸಹ ನಿರ್ದೇಶಕಿ ರಚಿತಾ ಮಿಶ್ರಾ, ಮುಖ್ಯ ಹಣಕಾಸು ಅಧಿಕಾರಿ ವಿ.ಕೆ. ಜೋಬಿ, ಕ್ರೆಡೆಲ್‌ನ ವ್ಯವಸ್ಥಾಪಕ ನಿರ್ದೇಶಕ ರುದ್ರಪ್ಪಯ್ಯ, ಸೆಲ್ಕೋ ಫೌಂಡೇಷನ್‌ನ ಸಿಇಒ ಡಾ. ಹರೀಶ್ ಹಂದೆ, ಸೆಲ್ಕೋ ಇಂಡಿಯಾದ ನಿರ್ದೇಶಕರಾದ ಎಲಿನಾ ಕ್ಯಾಸಲೋರಿ, ಥಾಮಸ್ ಪುಲ್ಲೆಂಕೇವ್, ಸಿಇಒ ಮೋಹನ್ ಭಾಸ್ಕರ್ ಹೆಗಡೆ ಹಾಗೂ ಇತರರು ಉಪಸ್ಥಿತರಿದ್ದರು.