Site icon Vistara News

Self employment: ಸ್ವಯಂ ಉದ್ಯೋಗಿ ಬ್ರಾಹ್ಮಣರಿಗೆ 5 ಲಕ್ಷ ರೂ.ವರೆಗೆ ಸಹಾಯಧನ: ಕೃಷ್ಣ ಬೈರೇಗೌಡ

Self employment Govt subsidy and Krishna ByreGowda

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ (Brahmin family) ಶ್ರೇಯೋಭಿವೃದ್ಧಿಗಾಗಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನೀಡುವ ಸ್ವಾವಲಂಬಿ ಮತ್ತು ಸಾಂದೀಪಿನಿ ಶಿಷ್ಯ ವೇತನದ ಯೋಜನೆಗಳ ಉಪಯೋಗವನ್ನು ಅರ್ಹರು ಪಡೆದುಕೊಳ್ಳಬೇಕು. ಸ್ವಯಂ ಉದ್ಯೋಗಿ (Self employment) ಬ್ರಾಹ್ಮಣರಿಗೆ ಸಹಾಯಧನ (Subsidy to Brahmins) ನೀಡಲಾಗುತ್ತದೆ ಎಂದು ಸಚಿವ ಕೃಷ್ಣ ಬೈರೇಗೌಡ (Krishna ByreGowda) ತಿಳಿಸಿದರು.

ತಮ್ಮ ಕಚೇರಿಯಲ್ಲಿ ನಿಗಮದ ಡಿಬಿಟಿ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, “ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳು ಸ್ವಯಂ ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆಗಾಗಿ ಬ್ಯಾಂಕ್‌ನಿಂದ ಸಾಲ ಪಡೆದಿದ್ದಲ್ಲಿ, ಸಾಲದ ಪೈಕಿ ಶೇ. 20ರಷ್ಟು ಹಣವನ್ನು ಸರ್ಕಾರ “ಸ್ವಾವಲಂಬಿ” ಯೋಜನೆ ಅಡಿಯಲ್ಲಿ ಸಹಾಯಧನ ನೀಡಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: CM Siddaramaiah: ಕುರುಬ ಎನ್ನುವ ಕಾರಣಕ್ಕೆ ರಾಯಣ್ಣನ ಗೌರವಿಸಬೇಡಿ: ಸಿಎಂ ಸಿದ್ದರಾಮಯ್ಯ

5 ಲಕ್ಷ ರೂ. ವರೆಗೂ ಸಹಾಯಧನ

ಗರಿಷ್ಠ 5 ಲಕ್ಷ ರೂ. ವರೆಗೆ ಸಹಾಯಧನ ನೀಡಲಾಗುವುದು. ವ್ಯಾಪಾರ, ಅಂಗಡಿ, ಹೈನುಗಾರಿಕೆ, ಹೊಲಿಗೆ ವೃತ್ತಿ, ಆಟಿಕೆ ತಯಾರಿಕೆ, ಮೊಬೈಲ್ ಅಂಗಡಿ, ಗುಡಿ ಕೈಗಾರಿಕೆ ಸೇರಿದಂತೆ ಹೆಚ್ಚಿನ ಘಟಕ ವೆಚ್ಚವಿರುವ ಆದಾಯ ಬರುವಂತಹ ಲಾಭದಾಯಕ ಉದ್ಯಮಗಳನ್ನು ಸ್ಥಾಪಿಸಲು ರಾಷ್ತ್ರೀಕೃತ ಬ್ಯಾಂಕ್‌ಗಳಿ‌ಂದ ಸಾಲ ಪಡೆದವರು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಜನವರಿ 31ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಇದ್ದು, ಅರ್ಹರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಸಾಂದೀಪಿನಿ ಶಿಷ್ಯ ವೇತನ

ಮೆಟ್ರಿಕ್ ನಂತರದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಓದುತ್ತಿರುವ ಬ್ರಾಹ್ಮಣ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ 15,000 ರೂ. ವರೆಗೆ “ಸಾಂದೀಪಿನಿ” ಯೋಜನೆ ಅಡಿ ಶಿಷ್ಯ ವೇತನ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು.

ಇದನ್ನೂ ಓದಿ: Jagadish Shettar: ಕಾಂಗ್ರೆಸ್ ಸಮುದ್ರವಿದ್ದಂತೆ, ಯಾರೇ ಹೋದರೂ ನಷ್ಟವಾಗದು: ಶೆಟ್ಟರ್‌ಗೆ ಡಿಕೆಶಿ ತಿರುಗೇಟು

ಯುಜಿ/ಪಿಜಿ ಸೇರಿದಂತೆ ವಿವಿಧ ಕೋರ್ಸ್‌ಗಳಿಗೆ ಸಿಇಟಿ ಪ್ರವೇಶ ಪರೀಕ್ಷೆ ಮೂಲಕ ತೇರ್ಗಡೆಯಾದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ, ದಾಖಲಾತಿ ಶುಲ್ಕದ ಮೊತ್ತದ 2/3 ಭಾಗ ಹಾಗೂ ಗರಿಷ್ಠ ರೂ. 1 ಲಕ್ಷದ ವರೆಗೆ ಬ್ರಾಹ್ಮಣ ಅಭಿವೃದ್ಧಿ ನಿಗಮದ ಮೂಲಕ ಸರ್ಕಾರ ಪಾವತಿಸಲಿದೆ. ಸದರಿ ಯೋಜನೆಗೆ ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನವಾಗಿರಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

Exit mobile version