Site icon Vistara News

Self Harming : ವರ್ಷದ ಮೊದಲ ದಿನವೇ ಬಿಬಿಎ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

BBA student Suicide

ಬೆಂಗಳೂರು: ಹೊಸ ವರ್ಷ (New Year Celebration) ಎಂದರೆ ಎಲ್ಲರೂ ಹೊಸ ಹೊಸ ಕನಸುಗಳನ್ನು ಹೊತ್ತು ಹೊಸ ಬದುಕಿಗೆ ಅಡಿ ಇಡುವ ದಿನ. ಆದರೆ‌ ಇಲ್ಲೊಬ್ಬಳು ಹುಡುಗಿ ತನ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಳ್ಳುವ ಮೂಲಕ ತನ್ನ ಎಲ್ಲ ಕನಸುಗಳನ್ನು ಕೊಂದು ಹಾಕಿದ್ದಾಳೆ.

ಬೆಂಗಳೂರಿನ ಸುಧಾಮ ನಗರದಲ್ಲಿ (Bangalore News) ಈ ಘಟನೆ ನಡೆದಿದ್ದು, ವರ್ಷಿಣಿ (21) ಆತ್ಮಹತ್ಯೆಗೆ ಶರಣಾಗಿರುವ ಯುವತಿ. ಈಕೆ ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿದ್ದ ಯುವತಿ ಖಾಸಗಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಾಳೆ. ಆಕೆ ಜೀವನದಲ್ಲಿ ನೊಂದು ಈ ಕೃತ್ಯಕ್ಕೆ ಮುಂದಾಗಿದ್ದಳು ಎಂದು ಹೇಳಲಾಗಿದೆ. ಆದರೆ, ನಿಜವಾದ ಕಾರಣ ಎಂದು ತಿಳಿದುಬಂದಿಲ್ಲ. ಯುವತಿಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆಕೆಯ ಮನೆಯಲ್ಲಿ ಡೆತ್‌ ನೋಟ್‌ ಪತ್ತೆಯಾಗಿದೆಯಾ ಎನ್ನುವುದು ತಿಳಿದುಬಂದಿಲ್ಲ.

ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು ಬಿಇಒ ಕಚೇರಿ ಸಿಬ್ಬಂದಿ ನೇಣಿಗೆ ಶರಣು

ಚಿಕ್ಕಮಗಳೂರಿನ ಬಿಇಓ ಕಚೇರಿಯಲ್ಲೇ ಸಿಬ್ಬಂದಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಮೂಡಿಗೆರೆ ತಾಲೂಕಿನ ಬಿಇಓ ಕಚೇರಿಯಲ್ಲಿ ಕಚೇರಿ ವ್ಯವಸ್ಥಾಪಕರಾಗಿರುವ ನಿಂಗಾನಾಯಕ್ ಆತ್ಮಹತ್ಯೆಗೆ ಶರಣಾದವರು. ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಎಲೆಕ್ಷನ್‌ನಲ್ಲಿ ಸೋಲು; ಕರ್ನಾಟಕ ವಿವಿ ಸೂಪರಿಂಟೆಂಡೆಂಟ್ ಸೂಸೈಡ್‌

ಧಾರವಾಡ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಲೆಕ್ಕಪತ್ರ ವಿಭಾಗದ ಸೂಪರಿಂಟೆಂಡೆಂಟ್ ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ಚಂದ್ರಕಾಂತ ಸಾವಳಗಿ (55) ಮೃತ ದುರ್ದೈವಿ.

ಕಳೆದ ಶನಿವಾರ ನಡೆದ ಕವಿವಿ ನೌಕರರ ಸಹಕಾರ ಸಂಘದ ಚುನಾವಣೆಯಲ್ಲೂ ಚಂದ್ರಕಾಂತ ಸಾವಳಗಿ ಸ್ಪರ್ಧಿಸಿದ್ದರು. ಆದರೆ ಚುನಾವಣೆಯಲ್ಲಿ ಸೋಲನುಭವಿಸಿದ್ದ ಸಾವಳಗಿ ಮನನೊಂದು ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಧಾರವಾಡದ ಮುರುಘಾಮಠ ಬಳಿ ಇರುವ ನಿವಾಸದಲ್ಲೇ ನೇಣಿಗೆ ಶರಣಾಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ಕಾರಣಕ್ಕೆ ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಶಹರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version