Site icon Vistara News

Self Harming: ಲಿವಿಂಗ್ ಟುಗೆದರ್‌ನಲ್ಲಿದ್ದ ಜೋಡಿ ವಿಷ ಸೇವಿಸಿ ಆತ್ಮಹತ್ಯೆ

self harming

ಆನೇಕಲ್: ಸಹಜೀವನ ನಡೆಸುತ್ತಿದ್ದ ಜೋಡಿ ವಿಷ ಸೇವಿಸಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯ ಬನ್ನೇರುಘಟ್ಟದ ಜನತಾ ಕಾಲೋನಿಯಲ್ಲಿ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ಜೋಡಿ, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಪ್ರಭು(38), ಲಕ್ಕಮ್ಮ(30) ಮೃತರು. ಪ್ರಭು ಡ್ರೈವರ್ ಕೆಲಸ ಮಾಡುತ್ತಿದ್ದ. ಲಕ್ಕಮ್ಮ ಗಾರ್ಮೆಂಟ್ಸ್ ಕೆಲಸ ಮಾಡುತ್ತಿದ್ದರು. ಕಳೆದ ಕೆಲ ವರ್ಷಗಳ ಹಿಂದೆ ಒಬ್ಬರಿಗೊಬ್ಬರು ಪರಿಚಿಯವಾಗಿತ್ತು. ಹೀಗಾಗಿ ಇಬ್ಬರು ಒಂದೇ ಮನೆಯಲ್ಲಿ ಸಹಜೀವನ ನಡೆಸುತ್ತಿದ್ದರು. ಇವರು ವಿಶ್ವನಾಥ್ ಎಂಬುವರ ಮನೆಯಲ್ಲಿ ಬಾಡಿಗೆಗೆ ಇದ್ದರು.

ಮನೆಯಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿ ಸ್ಥಳೀಯರು ತೆರಳಿ ನೋಡಿದಾಗ, ಜೋಡಿ ಆತ್ಮಹತ್ಯೆಗೆ ಶರಣಾಗಿರುವುದು ತಿಳಿದುಬಂದಿದೆ. ಇಬ್ಬರು ಮೃತಪಟ್ಟು ಮೂರ್ನಾಲ್ಕು ದಿನ ಕಳೆದಿದ್ದರಿಂದ ಕೊಳೆತ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ | Uttarkashi Trekking Tragedy: ಉತ್ತರಕಾಶಿಯಲ್ಲಿ ಪ್ರತಿಕೂಲ ಹವಾಮಾನ; ಚಾರಣಕ್ಕೆ ತೆರಳಿದ್ದ ಕರ್ನಾಟಕದ ನಾಲ್ವರ ಸಾವು

ಅಪ್ಪ-ಅಮ್ಮನ ಜಗಳ ಬಿಡಿಸಲು ಹೋದ ಇನ್‌ಫೋಸಿಸ್‌ ಎಂಜಿನಿಯರ್ ತಂದೆಯ ಇರಿತಕ್ಕೆ ಬಲಿ

murder case infosys engineer

ಬೆಂಗಳೂರು: ಗಂಡ- ಹೆಂಡತಿ ಜಗಳ (couple fight) ಆಕಸ್ಮಿಕವಾಗಿ ಮಗನ ಕೊಲೆಯಲ್ಲಿ (Murder Case) ಅಂತ್ಯವಾದ ದಾರುಣ ಘಟನೆ ಜರಗನಹಳ್ಳಿಯಲ್ಲಿ ನಡೆದಿದೆ. ಇನ್‌ಫೋಸಿಸ್‌ (Infosys) ಕಂಪನಿಯಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ (Software engineer) ಮಗ, ತಂದೆ- ತಾಯಿಯ ಜಗಳ ಬಿಡಿಸಲು ಹೋಗಿ ಕೊಲೆಯಾಗಿದ್ದಾನೆ.

ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಜರಗನಹಳ್ಳಿಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ದುರ್ಘಟನೆ ನಡೆದಿದೆ. ಯಶವಂತ್ (23) ತಂದೆಯಿಂದಲೇ ಕೊಲೆಯಾದ ಪುತ್ರ. ಸರ್ಜಾಪುರ ಸಮೀಪದ ಮ್ಯಾಟ್ರಿಕ್ಸ್ ಎಂಬ ಕಂಪನಿಯಲ್ಲಿ ಯಶವಂತ್‌ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ.

ಮೃತನ ಅಜ್ಜಿ ಕಾಯಿಲೆ ಬಿದ್ದು ಹಾಸಿಗೆ ಹಿಡಿದಿದ್ದು, ಆಕೆಯನ್ನು ನೋಡಿಕೊಳ್ಳುವ ವಿಚಾರಕ್ಕೆ ಆಗಾಗ ಜಗಳ ಆಗುತ್ತಿತ್ತು. ಬೆಳಗ್ಗೆಯೂ ಇದೇ ವಿಚಾರಕ್ಕಾಗಿ ಅಪ್ಪ ಅಮ್ಮನ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಜಗಳ ಬಿಡಿಸಲು ಹೋದ ಮಗನನ್ನು ಹೆದರಿಸಲು ತಂದೆ ಅಡುಗೆ ಮನೆಯಿಂದ ಚಾಕು ತಂದು ಇರಿಯಲು ಹೋಗಿದ್ದಾನೆ. ಚಾಕು ಯುವಕನ ಎದೆಗೆ ಆಳವಾಗಿ ನಾಟಿ ಪ್ರಾಣ ಹೋಗಿದೆ ಎಂದು ತಿಳಿದುಬಂದಿದೆ.

“ಯಶವಂತ ಉತ್ತಮ ವ್ಯಕ್ತಿತ್ವ ಹೊಂದಿದ್ದ ಹುಡುಗ. ಇನ್ಫೋಸಿಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಎಂಜಿನಿಯರ್ ವೃತ್ತಿ ಮಾಡುತ್ತ, ತಂದೆ ಮಾಡಿದ್ದ ಸಾಲ ಸಹ ತೀರಿಸುತ್ತಿದ್ದ. ನೇತ್ರದಾನ ಸಹ ಮಾಡಿದ್ದ. ಆತನ ಆಸೆಯಂತೆ ಕುಟುಂಬಸ್ಥರು‌ ಯಶವಂತನ ಕಣ್ಣುಗಳನ್ನು ದಾನ ಮಾಡಿದ್ದಾರೆ” ಎಂದು ಸಂಬಂಧಿ ರಾಕೇಶ್ ಮಾಹಿತಿ ನೀಡಿದ್ದಾರೆ.

ಸದ್ಯ ಆರೋಪಿ ತಂದೆ ಬಸವರಾಜುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. “ಪುಟ್ಟೇನಹಹಳ್ಳಿ ಠಾಣಾ ವ್ಯಾಪ್ತಿಯ ಜರಗನಹಳ್ಳಿಯಲ್ಲಿ 23 ವರ್ಷದ ಯುವಕನ ಕೊಲೆಯಾಗಿದೆ. ಗಂಡ ಹೆಂಡತಿ ಹೊಡೆದಾಡುತ್ತಿದ್ದಾಗ ಬಿಡಿಸಲು ಹೋಗಿದ್ದಾನೆ. ಈ ವೇಳೆ ತಂದೆ ಚಾಕು ತಂದು ಹೆದರಿಸಲು ಹೋಗಿದ್ದ. ಯುವಕ ಆಸ್ಪತ್ರೆ ಮಾರ್ಗ‌ಮಧ್ಯೆ ಸಾವನ್ನಪ್ಪಿದ್ದಾನೆ” ಎಂದು ದಕ್ಷಿಣ ವಿಭಾಗ ಡಿಸಿಪಿ ಲೊಕೇಶ್ ಜಗಲಾಸರ್ ಹೇಳಿಕೆ ನೀಡಿದ್ದಾರೆ.

Exit mobile version