ಕೊರಟಗೆರೆ: ಸಾಲದ ಬಾಧೆ ತಾಳಲಾರದೇ ರೈತ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಕಬ್ಬಿಗೆರೆ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.
ರಾಜಣ್ಣ (38) ಮೃತಪಟ್ಟ ರೈತ. ಜಮೀನಿನಲ್ಲಿ ಬೋರ್‌ವೆಲ್ ಕೊರೆಸಲು ರೈತ ರಾಜಣ್ಣ ಹಲವು ಖಾಸಗಿ ಫೈನಾನ್ಸ್‌ಗಳಲ್ಲಿ 12 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದು, ಜಮೀನಿನಲ್ಲಿ 5ಕ್ಕೂ ಹೆಚ್ಚು ಕೊಳವೆ ಬಾವಿಗಳನ್ನು ಕೊರೆಸಿದ್ದು ನೀರು ಸಿಗದ ಕಾರಣ ಮನನೊಂದಿದ್ದರು ಎಂದು ಹೇಳಲಾಗಿದೆ.
ಇದನ್ನೂ ಓದಿ: Female Foeticide: ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಗರ್ಭಪಾತ ಮಾಡುವಾಗಲೇ ದಾಳಿ, ಮೂವರ ಅರೆಸ್ಟ್!
ತನ್ನ ಸ್ನೇಹಿತರ ಬಳಿಯೂ ಸಾಲ ಪಡೆದಿದ್ದು, ಕಳೆದ ಭಾನುವಾರ ತಡರಾತ್ರಿ ತನ್ನ ಜಮೀನಿನಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಪೊಲೀಸ್ ಆಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಕೈಗಳನ್ನು ಕಟ್ಟಿಹಾಕಿ ಸಿಗರೇಟ್‌ನಿಂದ ಗಂಡನ ಗುಪ್ತಾಂಗ ಸುಟ್ಟ ಹೆಂಡತಿ! ಭೀಕರ ವಿಡಿಯೊ ಇಲ್ಲಿದೆ!
ಎರಡು ವರ್ಷದಿಂದ ಮಳೆ ಇಲ್ಲದೆ ಬೆಳೆಗಳೆಲ್ಲವೂ ನಾಶವಾಗಿ ರೈತ ಮಾಡಿರುವ ಸಾಲ ತೀರಿಸಲಾಗದೆ ನೇಣು ಹಾಕಿಕೊಳ್ಳುತ್ತಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ನಡೆಯುತ್ತಿವೆ. ಹಣದ ವಸೂಲಿಗೆ ಬರುತ್ತಿರುವ ಮೈಕ್ರೋ ಫೈನಾನ್ಸ್ ಹಾಗೂ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕಬೇಕು. ಮಳೆ ಇಲ್ಲದೆ ಬೆಳೆ ಇಲ್ಲದೆ ರೈತ ಎಲ್ಲಿಂದ ಸಾಲವನ್ನು ಕಟ್ಟುತ್ತಾನೆ? ಈ ಘಟನೆಗಳ ಬಗ್ಗೆ ಕೊಡಲೇ ಸರ್ಕಾರ ಗಮನ ಹರಿಸಬೇಕು. ರೈತರ ಪ್ರಾಣವನ್ನು ಉಳಿಸಬೇಕು ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಸಿದ್ದರಾಜು ಆಗ್ರಹಿಸಿದ್ದಾರೆ.