ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ಜಮ್ಮು-ಕಾಶ್ಮೀರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವುದು ನಗರ ಹೊರವಲಯದ ಯಲಹಂಕದಲ್ಲಿ ನಡೆದಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತನ್ವೀರ್ ಮೃತ ವಿದ್ಯಾರ್ಥಿ. ಪ್ರತಿಷ್ಠಿತ ರೇವಾ ಯೂನಿವರ್ಸಿಟಿಯಲ್ಲಿ ಬಿಎಸ್ಸಿ ದ್ವಿತೀಯ ವರ್ಷ ವ್ಯಾಸಂಗ ಮಾಡುತ್ತಿದ್ದ ತನ್ವೀರ್, ಭಾನುವಾರ ಇದ್ದಕ್ಕಿದ್ದಂತೆ ಪಿ.ಜಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಿ.ಜಿಯಲ್ಲಿನ ಕೆಲ ವಿದ್ಯಾರ್ಥಿಗಳು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು, ತನ್ವೀರ್‌ನ ಪೋಷಕರಿಗೆ ಮಾಹಿತಿ ನೀಡಲಾಗಿದೆ. ಹೀಗಾಗಿ ಪೋಷಕರು ಕಾಶ್ಮೀರದಿಂದ ಬರುತ್ತಿದ್ದಾರೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Bomb threat : ಏರ್ಪೋರ್ಟ್ ಬ್ಯಾಗ್ ಚೆಕಿಂಗ್ ವೇಳೆ ತಮಾಷೆಗೆ ‘ಬಾಂಬ್ ಇದೆ’ ಅಂದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು!
ನಿರ್ಮಾಣ ಹಂತದ ಶಾಲಾ ಕಟ್ಟಡ ಧ್ವಂಸ ಮಾಡಿದ ಕಿಡಿಗೇಡಿಗಳು
ದಾವಣಗೆರೆ: ನಿರ್ಮಾಣ ಹಂತದ ಶಾಲಾ ಕಟ್ಟಡವನ್ನು ಕಿಡಿಗೇಡಿಗಳು ಧ್ವಂಸ (Building Collapsed) ಮಾಡಿದ್ದಾರೆ. ಶಾಲಾಭಿವೃದ್ಧಿ ಮಂಡಳಿ ನಾನಾ ಕಡೆಗಳಲ್ಲಿ ಅಲೆದಾಡಿ ಅನುದಾನ ತಂದು ಕೊಠಡಿ ಕಟ್ಟಡ ಕೆಲಸವನ್ನು ಆರಂಭಿಸಿದ್ದರು.
ಪ್ಲೆಂಚ್‌ನಿಂದ ಒಂದು ಪಿಟ್ ಮೇಲೆ ಎದ್ದಿದ್ದ ಗೋಡೆ ಕೆಡವಿ ಕುಕೃತ್ಯ ಮೆರೆದಿದ್ದಾರೆ. ದಾವಣಣೆರೆಯ ಹರಿಹರ ನಗರದ ಹಳ್ಳದಕೆರೆ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿಯನ್ನು ಕೆಡವಿದ್ದಾರೆ.
ನಿರ್ಮಾಣ ಹಂತದ ಕೊಠಡಿ ಸೇರಿದಂತೆ ಅಂತಿಮ ಹಂತಕ್ಕೆ ತಲುಪಿದ್ದ ಹೈಟೆಕ್ ಶೌಚಾಲಯ ಧ್ವಂಸ ಮಾಡಿದ್ದಾರೆ. 150ಕ್ಕೂ ಅಧಿಕ ವಿದ್ಯಾರ್ಥಿಗಳು ಕಲಿಯುತ್ತಿರುವ ಸರ್ಕಾರಿ ಶಾಲೆ ಇದಾಗಿದ್ದು, ಸಮಿತಿ ಕಷ್ಟಪಟ್ಟು ಅನುದಾನ ತಂದು ಕಟ್ಟಡ ಕಾಮಗಾರಿ ಅರಂಭಿಸಿದ್ದರು. ಕಿಡಿಗೇಡಿಗಳ ಕೃತ್ಯದಿಂದ ಶಾಲಾಭಿವೃದ್ಧಿ ಸಮಿತಿ ಮತ್ತು ವಿದ್ಯಾರ್ಥಿಗಳು ಬೇಸರಗೊಂಡಿದ್ದಾರೆ.
ಇದನ್ನೂ ಓದಿ: Murder Case : ಮಧ್ಯರಾತ್ರಿಲಿ ವೃದ್ಧೆಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು; ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ
ಘಟನಾ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಬಿಗಿ ಭದ್ರತೆಯಲ್ಲಿ ಶಾಲಾ ಕಟ್ಟಡ ಕಾಮಗಾರಿ ಮುಂದುವರಿಸುವ ತೀರ್ಮಾನಕ್ಕೆ ಬಂದಿದ್ದಾರೆ. ಸರ್ಕಾರಿ ಶಾಲಾ ಕೊಠಡಿ ಶೌಚಾಲಯ ಪುನರ್ ನಿರ್ಮಾಣ ಮಾಡುವಂತೆ ಆಗ್ರಹಿಸಿದ್ದಾರೆ.