ಶಿವಮೊಗ್ಗ: ಆನ್‌ಲೈನ್‌ನಲ್ಲಿ ಹಣ ಹೂಡಿಕೆ ಮಾಡಿ ಮೋಸ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭದ್ರಾವತಿ ನಗರದ ಕಾಗದ ನಗರ ಬಡಾವಣೆಯ 6ನೇ ವಾರ್ಡ್‌ನಲ್ಲಿ ನಡೆದಿದೆ. ಒನ್ ಟು ಡಬಲ್ ಆಗುತ್ತದೆಂದು ನಂಬಿ ಆನ್‌ಲೈನ್‌ನಲ್ಲಿ 91 ಸಾವಿರ ರೂ.ಗಳನ್ನು ಯುವಕ ಹೂಡಿಕೆ ಮಾಡಿದ್ದ. ಅದರೆ, ಮೋಸ ಹೋದ ಹಿನ್ನೆಲೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಪ್ರದೀಪ್ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಖಾಸಗಿ ಕಂಪನಿಯಲ್ಲಿ ಪ್ರದೀಪ್ ಕೆಲಸ ಮಾಡುತ್ತಿದ್ದ. ಸಾಲ ಮಾಡಿ ಆನ್‌ಲೈನ್ ಆ್ಯಪ್ ಮೂಲಕ ಯುವಕ ಹಣ ಹೂಡಿಕೆ ಮಾಡಿದ್ದ. ಆದರೆ. ಅದರಲ್ಲಿ ಮೋಸ ಹೋಗಿದ್ದರಿಂದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಇದನ್ನೂ ಓದಿ | Lorry Accident: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; 16 ಕಾರ್ಮಿಕರಿಗೆ ಗಂಭೀರ ಗಾಯ
ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ
ಬೆಂಗಳೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ ಮಾಡಿರುವ ಘಟನೆ (Murder Case) ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ 80 ಫೀಟ್ ರಸ್ತೆಯಲ್ಲಿ ನಡೆದಿದೆ. ಪುಷ್ಪರಾಜ್ (27) ಹತ್ಯೆಯಾದ ಯುವಕ. ಕುಡಿದ ಮತ್ತಿನಲ್ಲಿ ಆರೋಪಿಗಳು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಮೃತ ಪುಷ್ಪರಾಜ್ ಟೈಲ್ಸ್ ಹಾಕುವ ಕೆಲಸ ಮಾಡಿಕೊಂಡಿದ್ದ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಶುಕ್ರವಾರ ರಾತ್ರಿ ಖಾಲಿ ಜಾಗದ ಶೆಡ್‌ನಲ್ಲಿ ಸ್ನೇಹಿತರು ಪಾರ್ಟಿ ಮಾಡಿದ್ದರು. ಈ ವೇಳೆ ಜಗಳ ನಡೆದಿದ್ದು, ಪುಷ್ಪ ರಾಜ್ ಕೊಲೆಯಾಗಿದೆ. ಘಟನೆ ಬಳಿಕ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಇಂದು ಸಂಜೆ 4.30ಕ್ಕೆ ಮೃತದೇಹ ಇರುವುದು ಪತ್ತೆಯಾಗಿದೆ. ಸದ್ಯ ಸ್ಥಳಕ್ಕೆ ಸಂಪಿಗೆಹಳ್ಳಿ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | Murder case : ಬಾಳೆತೋಟದಲ್ಲಿತ್ತು ದಲಿತ ಮಹಿಳೆ ಶವ; ಕಾಲ್ಕಿತ್ತ ಮಾಲೀಕ, ಅತ್ಯಾಚಾರ ಶಂಕೆ
ಚಿಕ್ಕೋಡಿಯಲ್ಲಿ ವ್ಯಕ್ತಿ ಕಾಲಿನ ಮೇಲೆ ಹರಿದ ಬಸ್
ಚಿಕ್ಕೋಡಿ: ವೇಗವಾಗಿ ಬಂದ ಬಸ್‌ವೊಂದು ವ್ಯಕ್ತಿಗೆ ಹೊಡೆದು ಕಾಲಿನ ಮೇಲೆ ಹರಿದಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೆಳಗಾವಿ ತಾಲ್ಲೂಕಿನ ಕಗಬರಗಿ ಗ್ರಾಮದ 40 ವರ್ಷದ ಸದಾಶಿವ ಯಡವಳ್ಳಿ ಎಂಬುವವರ ಮೇಲೆ ಬಸ್ ಹರಿದಿದೆ. ಬಸ್‌ಗಾಗಿ ಕಾಯುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಇದನ್ನೂ ಓದಿ: Accident Case:ಕೇತೇನಹಳ್ಳಿ ಫಾಲ್ಸ್‌ನಿಂದ ಬರುವಾಗ ಕಾಲು ಜಾರಿ ಬಿದ್ದ ಮಹಿಳಾ ಟೆಕ್ಕಿ; 2 ಕಿಮೀ ಹೊತ್ತು ತಂದ ಯುವಕರು
ಗಾಯಾಳು ಸದಾಶಿವ ಅವರನ್ನು ಕೂಡಲೇ ಚಿಕ್ಕೋಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.