Self Harming: ಇಬ್ಬರು ಪುಟ್ಟ ಮಕ್ಕಳ ಜತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ - Vistara News

ಕರ್ನಾಟಕ

Self Harming: ಇಬ್ಬರು ಪುಟ್ಟ ಮಕ್ಕಳ ಜತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

Self Harming: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಮದಲ್ಲಿ ಘಟನೆ ನಡೆದಿದೆ. ಇಬ್ಬರು ಪುಟ್ಟ ಮಕ್ಕಳ ಜತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

VISTARANEWS.COM


on

Self Harming
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಇಬ್ಬರು ಪುಟ್ಟ ಮಕ್ಕಳ ಜತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಮದಲ್ಲಿ ನಡೆದಿದೆ. ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ ವಾಣಿ (32), ಮಕ್ಕಳಾದ ಸಮರ್ಥ(12), ಸಂಪದ (6) ಮೃತರು.

ಗುರುವಾರ ರಾತ್ರಿ ಘಟನೆ ನಡೆದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾವಿಯಿಂದ ಮೃತದೇಹಗಳನ್ನು ಹೊರತೆಗೆದು ನಗರ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ | Theft Case : ಬೆಂಗಳೂರಿನಲ್ಲಿ ಪ್ರೇಯಸಿಗಾಗಿ ಕಳ್ಳತನಕ್ಕೆ ಇಳಿದ ಪ್ರಿಯತಮ! ಮದುವೆಯಾಗಲು ಹೊರಟವರು ಜೈಲುಪಾಲು

ಚಲಿಸುತ್ತಿದ್ದ ಸ್ಕೂಟರ್‌ ಮೇಲೆ ತುಂಡಾಗಿ ಬಿದ್ದ ವಿದ್ಯುತ್‌ ತಂತಿ; ಸವಾರನ ಕುತ್ತಿಗೆಗೆ ತಂತಿ ಸಿಲುಕಿ ಗಂಭೀರ

Road Accident
ಸವಾರ ಶಶಿಧರ ಶೆಟ್ಟಿ

ಉಡುಪಿ: ಚಲಿಸುತ್ತಿದ್ದ ಸ್ಕೂಟರ್ (Road Accident) ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಸವಾರನ ಕುತ್ತಿಗೆ ಸಿಲುಕಿದ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲದಲ್ಲಿ ಮೆಸ್ಕಾಂ ಅವಾಂತರಕ್ಕೆ ಕುಟುಂಬವೊಂದು ಸಂಕಷ್ಟವನ್ನು ಎದುರಿಸುತ್ತಿದೆ.

ಸವಾರ ಶಶಿಧರ ಶೆಟ್ಟಿ ಎಂಬುವವರು ಗಂಭೀರ ಗಾಯಗೊಂಡಿದ್ದಾರೆ. ಶಶಿಧರ ಮಣಿಪಾಲ ಇಂಡಸ್ಟ್ರಿಯಲ್ ಏರಿಯಾದ ಮಣಿಪಾಲ ಸಂಸ್ಥೆಯ ಯುನಿಟ್ 5 ಉದ್ಯೋಗಿಯಾಗಿದ್ದಾರೆ. ಕುಂಜಾರುಗಿರಿ ನಿವಾಸಿಯಾಗಿರುವ ಶಶಿಧರ ಶೆಟ್ಟಿ ಅವರು ಪತ್ನಿ, ಮಗುವಿನೊಂದಿಗೆ ಸ್ಕೂಟರ್‌ನಲ್ಲಿ ಬರುತ್ತಿದ್ದರು. ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದರು.

ಅಲೆವೂರಿನಿಂದ ಮಣಿಪಾಲದತ್ತ ಬರುವಾಗ ಇಂಡಸ್ಟ್ರಿಯಲ್ ಏರಿಯ ಬಸ್ ನಿಲ್ದಾಣದ ಬಳಿ ಏಕಾಏಕಿ ಬಂದ ಗಾಳಿ ಸಹಿತ ಮಳೆಗೆ ವಿದ್ಯುತ್‌ ತಂತಿ ತುಂಡಾಗಿದೆ. ಅದೇ ರಸ್ತೆಯಲ್ಲಿ ಬರುತ್ತಿದ್ದ ಶಶಿಧರ ಶೆಟ್ಟಿ ಅವರ ಕುತ್ತಿಗೆ ತಂತಿ ಸುತ್ತುವರಿದ ಪರಿಣಾಮ ಮಗು, ಪತ್ನಿ ಸಮೇತ ಕೆಳಗೆ ಬಿದ್ದಿದ್ದರು.

ಇದನ್ನೂ ಓದಿ: Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

ಕೂಡಲೇ ಸ್ಥಳೀಯರ ಸಹಾಯದೊಂದಿಗೆ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಜುಲೈ 22 ರಂದು ಘಟನೆ ನಡೆದಿದ್ದು, 15 ದಿನ ಕಳೆದರೂ ಇನ್ನು ಆಸ್ಪತ್ರೆಯಲ್ಲಿ ಶಶಿಧರ್‌ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಸದ್ಯ ಕುತ್ತಿಗೆ ಕೆಳಭಾಗದಲ್ಲಿ ಸ್ಪರ್ಶ ಜ್ಞಾನವಿಲ್ಲ. ಇತ್ತ ಮೆಸ್ಕಾಂ ಸೂಕ್ತ ಪರಿಹಾರ ನೀಡಲು ನಿರಾಕರಿಸುತ್ತಿದೆ. ಹೀಗಾಗಿ ಕ್ರೌಡ್ ಫಂಡಿಂಗ್ ಮೂಲಕ ಶಶಿಧರ್‌ ಕುಟುಂಬ ಚಿಕಿತ್ಸೆಗೆ ಪ್ರಯತ್ನಿಸುತ್ತಿದೆ. ಸಂಪೂರ್ಣ ಚಿಕಿತ್ಸೆಗೆ ಸುಮಾರು 15 ಲಕ್ಷ ರೂಪಾಯಿ ಅಗತ್ಯತೆ ಇದೆ. ಸರಕಾರದ, ಮೆಸ್ಕಾಂ ಇಲಾಖೆ ಸಹಾಯದ ನಿರೀಕ್ಷೆಯಲ್ಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Tirupati laddu Row : ತಿರುಪತಿ ಲಡ್ಡು ಬಳಿಕ ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೊಳಪಡಿಸಿ; ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹ

Tirupati laddu Row : ತಿರುಮಲ ತಿರುಪತಿಯಲ್ಲಿ ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಬಳಸಿದ ಕಾರಣ ರಾಜ್ಯದಲ್ಲಿನ ಪವಿತ್ರ ಕ್ಷೇತ್ರಗಳ ಪ್ರಸಾದವನ್ನು ತಕ್ಷಣ ಪರೀಕ್ಷೆಗೆ ಒಳಪಡಿಸುವುದು ಒಳಿತು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ

VISTARANEWS.COM


on

By

Also test the prasadam of the holy places of the state Pralhad Joshi urges state government
Koo

ನವದೆಹಲಿ: ತಿರುಪತಿ ಪ್ರಕರಣದ (Tirupati laddu Row) ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೆ ಒಳಪಡಿಸಲು ರಾಜ್ಯ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ. ನವದೆಹಲಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿ, ತಿರುಪತಿ ಪ್ರಸಾದದ ವಿಚಾರವಾಗಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸುವಂತೆ ಆಗ್ರಹಿಸಿದರು.

ತಿರುಮಲ ತಿರುಪತಿಯಲ್ಲಿ ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಬಳಸಿದ ಕಾರಣ ರಾಜ್ಯದಲ್ಲಿನ ಪವಿತ್ರ ಕ್ಷೇತ್ರಗಳ ಪ್ರಸಾದವನ್ನು ತಕ್ಷಣ ಪರೀಕ್ಷೆಗೆ ಒಳಪಡಿಸುವುದು ಒಳಿತು ಎಂದು ಸಚಿವರು ಅಭಿಪ್ರಾಯಿಸಿದರು. ಹಿಂದೂಗಳ ಪವಿತ್ರ ಕ್ಷೇತ್ರವಾದ ತಿರುಮಲ ತಿರುಪತಿಯಲ್ಲಿ ಪ್ರಸಾದಕ್ಕೆ ಜಾನುವಾರುಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಬಳಸುತ್ತಿದ್ದರು!? ಎಂಬ ಸಂಗತಿ ಹಿಂದೂ ಸಮಾಜವನ್ನು ಚಿಂತೆಗೀಡು ಮಾಡಿದೆ ಎಂದು ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಅಧಿಕಾರ ಅವಧಿಯಲ್ಲಿ ಈ ರೀತಿ ಹಲವು ಹಿಂದೂ ವಿರೋಧಿ ಕ್ರಮಗಳಿಗೆ ಬೆಂಬಲವಾಗಿ ನಿಂತಿರುವುದು ಅಕ್ಷಮ್ಯ ಎಂದು ಪ್ರತಿಕ್ರಿಯಿಸಿದ್ದಾರೆ. ಅಷ್ಟೇ ಅಲ್ಲ, ತಿರುಮಲ ತಿರುಪತಿಯ ಟ್ರಸ್ಟ್ ನಲ್ಲಿ ಜಗನ್ ರೆಡ್ಡಿ ಅವರು ಹಿಂದೂಯೇತರರನ್ನೂ ಟ್ರಸ್ಟ್ ಸದಸ್ಯರನ್ನಾಗಿ ಮಾಡಿದ್ದರು ಎಂದು ಜೋಶಿ ಆರೋಪಿಸಿದ್ದಾರೆ. ಆಂಧ್ರಪ್ರದೇಶದಲ್ಲಿ ಮತ್ತೆ ಈ ರೀತಿಯ ವಿಚಾರಗಳು ಮರುಕಳಿಸಬಾರದು. ಆ ನಿಟ್ಟಿನಲ್ಲಿ ನೂತನ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಸದಾ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

ಕರ್ನಾಟಕದಲ್ಲೂ ಎಚ್ಚರ ವಹಿಸಿ: ಆಂಧ್ರಪ್ರದೇಶ ಪ್ರಕರಣದಿಂದ ಕರ್ನಾಟಕ ಸಹ ಎಚ್ಚೆತ್ತುಕೊಳ್ಳಬೇಕು. ಎಲ್ಲಾ ಪವಿತ್ರ ಕ್ಷೇತ್ರಗಳ ಪ್ರಸಾದಗಳನ್ನ ತ್ವರಿತವಾಗಿ ಪರೀಕ್ಷೆಗೆ ಒಳಪಡಿಸಬೇಕು ಎಂದು ಸಚಿವ ಜೋಶಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಧಾರ್ಮಿಕ ಟ್ರಸ್ಟ್ ಗೆ ಬೇಡ ಹಿಂದೂಯೇತರರ ನೇಮಕ: ಹಿಂದೂ ಧಾರ್ಮಿಕ ಟ್ರಸ್ಟ್ ಗಳಲ್ಲಿ ಹಿಂದೂಯೇತರರನ್ನು ನೇಮಕ ಮಾಡಬಾರದು ಎಂದೂ ಸಚಿವ ಪ್ರಲ್ಹಾದ ಜೋಶಿ ಸರ್ಕಾರಕ್ಕೆ ಆಗ್ರಹಿದ್ದಾರೆ.

ಲಡ್ಡು ಪ್ರಸಾದಕ್ಕೆ ಪ್ರಾಣಿಯ ಕೊಬ್ಬು ಬಳಕೆ- ತನಿಖೆಗೆ ಸಿಟಿ ರವಿ ಆಗ್ರಹ

ತಿರುಪತಿ ತಿಮ್ಮಪ್ಪನ ಪ್ರಸಾದಕ್ಕೆ ಪ್ರಾಣಿ ಕೊಬ್ಬು ಬಳಕೆ ಆರೋಪದ ಕುರಿತು ಚಿಕ್ಕಮಗಳೂರಿನಲ್ಲಿ ಮಾಜಿ ಸಚಿವ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ. ತಿರುಪತಿ ಕೋಟ್ಯಾಂತರ ಭಕ್ತರ ಶ್ರದ್ಧೆಯ ಧಾರ್ಮಿಕ ಸ್ಥಳವಾಗಿದೆ. ಸಾವಿರಾರು ವರ್ಷಗಳಿಂದ ಬಾಲಾಜಿ ಜತೆ ಅವಿನಾಭಾವ ಸಂಬಂಧವಿದೆ. ವಾರಕ್ಕೊಮ್ಮೆ ಬಾಲಾಜಿ ದರ್ಶನಕ್ಕೆ ಹೋಗುವವರು ಇದ್ದಾರೆ. ತಿರುಪತಿ ಲಡ್ಡು ಪ್ರಸಾದಕ್ಕೆ ಇರುವ ಭಾವನೆಯೇ ಬೇರೆ.

ಅದು ಕೋಟ್ಯಾಂತರ ಭಕ್ತರಿಗೆ ಕೇವಲ ಸಿಹಿ ಅಲ್ಲ ಭಕ್ತಿಯ ಪ್ರಸಾದವಾಗಿದೆ. ಇಂತಹ ಪ್ರಸಾದ ತಯಾರಿಸುವಾಗ ಧಾರ್ಮಿಕ ಸ್ಯಾಂಟಿಟಿ ಕಾಪಾಡಿಕೊಳ್ಳಬೇಕು. ಕರ್ನಾಟಕದಿಂದಲೇ ನಂದಿನಿ ತುಪ್ಪ ಅಲ್ಲಿಗೆ ಸರಬರಾಜಾಗುವುದನ್ನ ಕೇಳಿದ್ದೇನೆ. ಪ್ರಸಾದಕ್ಕೆ ಪ್ರಾಣಿಯ ಕೊಬ್ಬು ಬಳಕೆ ಎಂಬ ಮಾತು ಆಶ್ಚರ್ಯ-ಆಘಾತ ಎರಡೂ ಆಗಿದೆ. ಧಾರ್ಮಿಕ ಶ್ರದ್ಧಾ ಕೇಂದ್ರದಲ್ಲಿ ಈ ರೀತಿ ಮಾಡುವ ಯೋಚನೆಯಾದರೂ ಯಾರಿಗೆ ಬರುತ್ತೆ. ಯಾರಿಗೆ ಗುತ್ತಿಗೆ ನೀಡಿದ್ದರು ಎಲ್ಲವನ್ನು ಗಂಭೀರವಾಗಿ ತನಿಖೆ ನಡೆಸಬೇಕು. ಇದು ನಮ್ಮ ಭಾವನೆ, ನಂಬಿಕೆ, ಶ್ರದ್ಧೆಯ ಪ್ರಶ್ನೆ, ಅದಕ್ಕೆ ಧಕ್ಕೆಯಾಗುತ್ತೆ. ಸಮಗ್ರ ತನಿಖೆಯಾದರೆ ಭಕ್ತರ ಮನಸ್ಸಿಗೆ ಸ್ಪಷ್ಟತೆ ಬರಲಿದೆ ಎಂದರು.

ತಿರುಪತಿಗೆ 350 ಮೆಟ್ರಿಕ್ ಟನ್ ತುಪ್ಪ ರವಾನೆ

ತಿರುಪತಿ ಪ್ರಸಾದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಆರೋಪ ವಿಚಾರವಾಗಿ ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್ ಪ್ರತಿಕ್ರಿಯಿಸಿದ್ದಾರೆ. ಮೊದಲಿಗೆ ಸಿಎಂ ಚಂದ್ರಬಾಬು ನಾಯ್ಡು ಮಾಡಿರುವ ಆರೋಪಕ್ಕೂ, ‌ನಮ್ಮ ನಂದಿನಿಗೂ ಯಾವುದೇ ಸಂಬಂಧವಿಲ್ಲ. ಕಳೆದ ಕೆಲ ದಿನಗಳ ಹಿಂದೆ ಟಿಟಿಡಿ ಪ್ರೆಸ್ ಮೀಟ್ ಮಾಡಿದೆ. ನಂದಿನಿ ಹಾಲು ಹೊರಗಿಟ್ಟು ಬೇರೆ ಬೇರೆ ತುಪ್ಪ ತೆಗೆದುಕೊಂಡಿದ್ದಾರೆ. ಇದರ ಉದ್ದೇಶ ಏನು ಅಂತ ಟಿಟಿಡಿ ಅವರು ಕೇಳಿದ್ದಾರೆ. ಹಿಂದೆ ನಂದಿನಿ ತುಪ್ಪ ಏಕೆ ಬೇಡ ಅಂತ ಹೇಳಿದ್ದರು ಅನ್ನೋದು ನಮ್ಮಗೆ ಗೊತ್ತಿಲ್ಲ.

ಈಗ ಮತ್ತೆ ನಂದಿನಿ ಹಾಲು ಬೇಕು ಅಂತ ಶಿಫಾರಸ್ಸು ಮಾಡಿದ್ದಾರೆ.ಈಗ ಮತ್ತೆ ಕಳೆದ ಒಂದು ತಿಂಗಳಿನಿಂದ 350 ಮೆಟ್ರಿಕ್ ಟನ್ ತುಪ್ಪ ಹೋಗುತ್ತಿದೆ. ಈಗ ಆರೋಪ ಅಷ್ಟೇ ಪ್ರಾಣಿ ಕೊಬ್ಬಿನ ಅಂಶ ಬಳಕೆ ಆಗ್ತಾಯಿತ್ತಾ ಅನ್ನೋ ವರದಿ ಬರಬೇಕು. ಒಂದೂ ವೇಳೆ ಬಳಕೆ ಆಗ್ತಾಯಿತ್ತು ಅಂದರೆ ದುರದೃಷ್ಟಕರ ವಿಚಾರ ಇದು. ಒಟ್ಟಾರೆ ಈಗ ನಾವು ನಂದಿನಿಯಿಂದ ತುಪ್ಪ ಕೊಡಲು ತಯಾರಿ ಇದ್ದೀವಿ ಅಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Road Accident : ಚಾಲಕ ಕಾರಿನೊಳಗೆ ಮಲಗಿದ್ದಾಗಲೇ ನಡುರಾತ್ರಿ ಹೊತ್ತಿ ಉರಿದ ಕಾರು! ಅಗ್ನಿ ಅವಘಡಕ್ಕೆ ಕಾರಣ ನಿಗೂಢ!

Road Accident : ಚಾಲಕ ಕಾರಿನೊಳಗೆ ಮಲಗಿದ್ದಾಗಲೇ ನಡುರಾತ್ರಿ ಹೊತ್ತಿ ಉರಿದಿದೆ. ಅಗ್ನಿ ಅವಘಡಕ್ಕೆ ಕಾರಣ ನಿಗೂಢವಾಗಿದೆ. ಆದರೆ ಕಾರಿನಡಿ ಪೆಟ್ರೋಲ್‌ ತುಂಬಿದ್ದ ಕ್ಯಾನ್‌ ಪತ್ತೆಯಾಗಿದೆ.

VISTARANEWS.COM


on

By

Road Accident
Koo

ಬೆಂಗಳೂರಿನ ವೈಯಾಲಿಕಾವಲ್‌ನ ವಿನಾಯಕ ಸರ್ಕಲ್ ಬಳಿ ನಡುರಾತ್ರಿ ಕಾರೊಂದು ಹೊತ್ತಿ ಉರಿದಿದೆ. ಸಿಎನ್‌ಜಿ ವಾಹನಕ್ಕೆ ಬೆಂಕಿ ತಗುಲಿದೆ. ಕಾರು ಚಾಲಕ ಗಾಡಿಯಲ್ಲಿಯೇ ಮಲಗಿದ್ದಾಗಲೇ, ಏಕಾಏಕಿ ಬೆಂಕಿ ಹತ್ತಿದೆ. ಕೂಡಲೇ ಕಾರಿನಿಂದ ಹೊರಬಂದಿದ್ದ. ಕಾರಿನ ಕೆಳಗೆ ಪೆಟ್ರೋಲ್ ಕ್ಯಾನ್ ಇತ್ತು ಎನ್ನಲಾಗಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಬಂದು ಬೆಂಕಿಯನ್ನು ನಂದಿಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಸ್‌ ಚಲಾಯಿಸುವಾಗಲೇ ಕಾಣಿಸಿಕೊಂಡ ಎದೆನೋವು

ಬಿಎಂಟಿಸಿ ಬಸ್ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ 40ಕ್ಕೂ ಹೆಚ್ಚು ಜನರ ಜೀವ ಉಳಿದಿದೆ. ನಿನ್ನೆ ಗುರುವಾರ ಮಧ್ಯಾಹ್ನ ಶಾಂತಿನಗರದ ಡಬಲ್ ರೋಡ್ ಬಳಿ ಘಟನೆ ನಡೆದಿದೆ. ಡ್ರೈವರ್ ವಿರೇಶ್ ಬಸ್ ಡ್ರೈವಿಂಗ್ ಮಾಡುತ್ತಿರುವಾಗ ಹಾರ್ಟ್ ಅಟ್ಯಾಕ್ ಆಗಿದೆ. ನಡುರಸ್ತೆಯಲ್ಲಿ ಬಸ್ ಸ್ಲೋ ಆಗಿರುವುದನ್ನು ಗಮನಿಸಿದ ಹಲಸೂರು ಟ್ರಾಫಿಕ್‌ ಎಎಸ್‌ಐ ಆರ್‌ ರಘುಕುಮಾರ್‌ ಓಡೋಡಿ ಬಂದರು. ಬಸ್ ಬಳಿ ಬಂದು ನೋಡಿದಾಗ ಚಾಲಕ ಎದೆಗೆ ಕೈ ಹಿಡಿದು ಒಂದು ಕಡೆಗೆ ವಾಲಿದ್ದರು. ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಸ್ಲೋ ರನ್ನಿಂಗ್‌ನಲ್ಲಿತ್ತು, ಕೂಡಲೇ ಹ್ಯಾಂಡ್ ಬ್ರೇಕ್ ಹಾಕಿ ಚಾಲಕನನ್ನು ಇಳಿಸಿದ್ದಾರೆ. ನಂತರ ಆ್ಯಂಬುಲೆನ್ಸ್‌ಗೂ ಕಾಯದೆ ಅಶೋಕ ನಗರ ಟ್ರಾಫಿಕ್ ಸಿಬ್ಬಂದಿ ಪ್ರಸನ್ನಕುಮಾರ್ ಸಹಾಯದಿಂದ ಆಸ್ಪತ್ರೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: Students Scholarship : ಯೆಲ್ಲೋ ಬೋರ್ಡ್‌ ವಾಹನ ಚಾಲಕರ ಮಕ್ಕಳಿಗೆ ಗುಡ್‌ ನ್ಯೂಸ್‌; ವಿದ್ಯಾನಿಧಿಯಡಿ ಸ್ಕಾಲರ್‌ಶಿಪ್‌ ಪಡೆಯಲು ಹೀಗೆ ಮಾಡಿ

Road Accident
Road Accident

‌ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿ

ಔಟರ್‌ರಿಂಗ್ ರೋಡ್ ಸರ್ವೀಸ್ ರಸ್ತೆಯಿಂದ ಮುಖ್ಯರಸ್ತೆಯಲ್ಲಿ 10 ಚಕ್ರದ ಲಾರಿ ಅಪಘಾತಕ್ಕೀಡಾಗಿದೆ. ನಾಗವಾರ-ಹೆಬ್ಬಾಳ ಮಾರ್ಗದ ಕೆಂಪಾಪುರದ ಬಳಿ ಟಿಪ್ಪರ್‌ ಲಾರಿ ನಿಯಂತ್ರಣ ತಪ್ಪಿದೆ. ಪರಿಣಾಮ ಟ್ರಾಫಿಕ್‌ ಜಾಮ್‌ ಉಂಟಾಗಿ, ಸತತ ಒಂದು ಗಂಟೆಯಿಂದ ವಾಹನಗಳು ನಿಂತಲ್ಲೆ ನಿಲ್ಲಬೇಕಾಯಿತು. ಶುಕ್ರವಾರ ಬೆ.7ಕ್ಕೆ ಘಟನೆ ನಡೆದಿದ್ದು, ಮೆಟ್ರೋ ಕಾಮಗಾರಿಯ ಗೋಡೆಗೆ ಲಾರಿ ಗುದ್ದಿದೆ. ಲಾರಿಯನ್ನು ತೆಗೆಯಲು ಪೊಲೀಸರು ಎರಡು ಜೆಸಿಬಿ ಬಳಸಿದರು. ರಸ್ತೆ ಸಂಪೂರ್ಣ ಬಂದ್ ಆಗಿರುವ ಹಿನ್ನೆಲೆಯಲ್ಲಿ 10 ಕಿ.ಮೀ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕೋಲಾರ

Road Accident: ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರನ ತಲೆಯೇ ಕಟ್‌! ಭೀಕರ ದೃಶ್ಯಕ್ಕೆ ಬೆಚ್ಚಿ ಬಿದ್ದ ಜನರು

Road Accident: ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರನ ತಲೆಯೇ ಕಟ್‌ ಆಗಿದೆ. ಭೀಕರ ದೃಶ್ಯಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ.

VISTARANEWS.COM


on

By

Road Accident
Koo

ಕೋಲಾರ : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಹಕ್ಕಿ ಪಿಕ್ಕಿ ಕ್ರಾಸ್ ಸಮೀಪ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದೆ. ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸವಾರನ ತಲೆಯೇ ತುಂಡಾಗಿ ಬಿದ್ದಿದೆ. ಆಂಧ್ರಪ್ರದೇಶದ ಚೀಕಲಬೈಲು ಗ್ರಾಮದ ಗುಣಶೇಖರ್ (28) ದಾರುಣ ಅಂತ್ಯ ಕಂಡ ಸವಾರನಾಗಿದ್ದಾನೆ.

ಬೈಕ್‌ ಮೂಲಕ ಗುಣಶೇಖರ್‌ ರಾಯಲ್ಪಾಡುನಿಂದ ಆಂಧ್ರಪ್ರದೇಶದಕ್ಕೆ ತೆರಳುತ್ತಿದ್ದ. ಈ ವೇಳೆ ಬೈಕ್‌ಗೆ ಅಪರಿಚಿತ ವಾಹನ ಗುದ್ದಿದೆ. ಅಪಘಾತದ ರಭಸಕ್ಕೆ ಗುಣಶೇಖರ್‌ ತಲೆಯೇ ತುಂಡಾಗಿ ರಸ್ತೆಗೆ ಬಿದ್ದಿತ್ತು. ಭೀಕರ ದೃಶ್ಯ ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದರು. ಕೂಡಲೇ ರಾಯಲ್ಪಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ತುಮಕೂರಿನಲ್ಲಿ ಕಾರು ಅಪಘಾತ; ಇಬ್ಬರು ಸಾವು

ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಓರ್ವ ಮೃತಪಟ್ಟರೆ, ಮತ್ತೋರ್ವ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಜೀವ ಬಿಟ್ಟಿದ್ದಾನೆ. ತುಮಕೂರು ತಾಲೂಕಿನ ಕೋರಾ ಬ್ರಿಡ್ಜ್ ಬಳಿ ಕಾರು ಅಪಘಾತವಾಗಿ ದಾವಣಗೆರೆ ಮೂಲದ ಇಬ್ಬರು ಮೃತಪಟ್ಟಿದ್ದಾರೆ. ದಾವಣಗೆರೆಯಿಂದ ಬೆಂಗಳೂರು ಕಡೆ ಹೋಗುತ್ತಿದ್ದಾಗ ಕಾರು ಅಪಘಾತಕ್ಕೀಡಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಶುಕ್ರವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕೋರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿತ್ತೂರಿನಲ್ಲಿ ಟೆಂಪೋ ಟ್ರಾವೆಲರ್‌-ಗೂಡ್ಸ್‌ ವಾಹನದ ನಡುವೆ ಅಪಘಾತ

ಚಿತ್ತೂರು ಜಿಲ್ಲೆಯ ಬಂಗಾರುಪಾಳ್ಯಂ ಮಂಡಲಂ ಮೊಗಿಲಿ ಘಾಟ್ ರಸ್ತೆಯಲ್ಲಿ ಟೆಂಪೋ ಟ್ರಾವೆಲರ್ ಹಾಗೂ ಗೂಡ್ಸ್ ವಾಹನದ ನಡುವೆ ಅಪಘಾತ ಸಂಭವಿಸಿದೆ. ಟೆಂಪೋ ಟ್ರಾವೆಲರ್‌ನಲ್ಲಿ ಪ್ರಯಾಣಿಸುತ್ತಿದ್ದ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳು ಗೋಲ್ಡ್ ಪಾಳ್ಯಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ನಾಟಕದ ಉಡುಪಿಯಿಂದ ಟೆಂಪೋ ಟ್ರಾವೆಲರ್ ತಿರುಮಲಕ್ಕೆ ಹೋಗುವಾಗ ಘಟನೆ ನಡೆದಿದೆ.

ಘಾಟ್‌ನಲ್ಲಿದ್ದ ಸ್ಪೀಡ್ ಬ್ರೇಕರ್‌ಗಳಿಗೆ ಟೊಮೆಟೊ ಮಿನಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ಕಳೆದ 13ರಂದು ನಡೆದ ರಸ್ತೆ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದರು. ಇತ್ತೀಚೆಗೆ ಮೊಗಿಲಿ ಘಾಟ್ ರಸ್ತೆಯಲ್ಲಿ ಹೆದ್ದಾರಿ ಅಪಘಾತ ತಡೆಯಲು ಸ್ಪೀಡ್ ಬ್ರೇಕರ್‌ಗಳನ್ನು ಅಳವಡಿಸಲಾಗಿದೆ. ಆದರೂ ಅತಿವೇಗವಾಗಿ ಓಡಿಸಿದ್ದು ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಬಂಗಾರುಪಾಳ್ಯಂ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು ಟೆಕ್ ಸಮ್ಮಿಟ್

Students Scholarship : ಯೆಲ್ಲೋ ಬೋರ್ಡ್‌ ವಾಹನ ಚಾಲಕರ ಮಕ್ಕಳಿಗೆ ಗುಡ್‌ ನ್ಯೂಸ್‌; ವಿದ್ಯಾನಿಧಿಯಡಿ ಸ್ಕಾಲರ್‌ಶಿಪ್‌ ಪಡೆಯಲು ಹೀಗೆ ಮಾಡಿ

Students Scholarship : ಯೆಲ್ಲೋ ಬೋರ್ಡ್‌ ವಾಹನ ಚಾಲಕರ ಮಕ್ಕಳಿಗೆ ಗುಡ್‌ ನ್ಯೂಸ್‌ ನೀಡಿದೆ. ವಿದ್ಯಾನಿಧಿಯಡಿ ಸ್ಕಾಲರ್‌ಶಿಪ್‌ ನೀಡಲು ಸರ್ಕಾರ ಆದೇಶ ಹೊರಡಿಸಿದೆ.

VISTARANEWS.COM


on

By

Good news for the children of yellow board drivers Do this to get a scholarship under Vidyanidhi
Koo

ಬೆಂಗಳೂರು: ಯೆಲ್ಲೋ ಬೋರ್ಡ್ ಇರುವ ಕ್ಯಾಬ್ ಹಾಗೂ ಆಟೋ ಚಾಲಕರ ಮಕ್ಕಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ರಾಜ್ಯ ಸರ್ಕಾರದಿಂದ ವಿದ್ಯಾನಿಧಿಯಡಿ ಚಾಲಕರ ಮಕ್ಕಳಿಗೆ ಸ್ಕಾಲರ್‌ಶಿಪ್‌ (Scholarship) ನೀಡಲು ಆದೇಶ ಹೊರಡಿಸಿದೆ. ಚಾಲಕರ ಹಲವು ವರ್ಷಗಳ ಬೇಡಿಕೆಯನ್ನು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಈಡೇರಿಸಿದ್ದಾರೆ. ಮೆಟ್ರಿಕ್ ನಂತರದ ಪೋಸ್ಟ್ ಮೆಟ್ರಿಕ್ ಕೋರ್ಸ್‌ಗಳಿಗೆ ಶಿಷ್ಯವೇತನ ನೀಡಲು ತೀರ್ಮಾನಿಸಲಾಗಿದೆ.

ವಿದ್ಯಾರ್ಥಿಗಳಿಗೆ ಎಷ್ಟು ಸ್ಕಾಲರ್‌ಶಿಪ್‌ ನೀಡಲಾಗುವುದು?

1) ಪಿಯುಸಿ/ಐಟಿಐ/ಡಿಪ್ಲೋಮಾ
ಹುಡುಗರಿಗೆ 2,500 ರೂ., ಹುಡುಗಿಯರು/ ಅನ್ಯ ಲಿಂಗದವರು 3,000 ರೂ.

2) ಎಲ್ಲಾ ಬಿಎ/ಬಿಎಸ್ಸಿ/ಬಿಕಾಂ ಪದವಿ ಇತ್ಯಾದಿ (ಎಂಬಿಬಿಎಸ್/ಬಿ.ಇ/ಬಿ.ಟೆಕ್ ಮತ್ತು ವೃತ್ತಿಪರ ಕೋರ್ಸ್‌ಗಳನ್ನು ಹೊರತುಪಡಿಸಿ)
ಹುಡುಗರಿಗೆ 5,000 ರೂ., ಹುಡುಗಿಯರಿಗೆ 5.500 ರೂ.

3) ಎಲ್.ಎಲ್.ಬಿ/ಪ್ಯಾರಾ ಮೆಡಿಕಲ್/ಬಿ ಫಾರ್ಮ್/ ನರ್ಸಿಂಗ್, ಇತ್ಯಾದಿ. ವೃತ್ತಿಪರ ಕೋರ್ಸ್‌ಗಳು.
ಹುಡುಗರಿಗೆ 7,500 ರೂ, ಹುಡುಗಿಯರಿಗೆ 8,000 ರೂ.

4) ಎಂ.ಬಿ.ಬಿ.ಎಸ್/ ಬಿ.ಇ/ ಬಿ.ಟೆಕ್ ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್‌ಗಳು
ಹುಡುಗರಿಗೆ 10,000 ರೂ., ಹುಡುಗಿಯರಿಗೆ 11,000 ರೂ.

ಅರ್ಜಿ ಸಲ್ಲಿಸುವುದು ಹೇಗೆ?

ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ ಅರ್ಹ ವಿಧ್ಯಾರ್ಥಿಗಳ ಆಧಾರ್ ಜೋಡಿತ ಬ್ಯಾಂಕ್ ಅಕೌಂಟ್‌ಗೆ ( DBT ) ವರ್ಗಾವಣೆ ಮೂಲಕ ಹಣ ಪಾವತಿಸಲಾಗುತ್ತದೆ. ( ಗ್ರಾಮ-ಓನ್, ಕರ್ನಾಟಕ- ಓನ್ ಹಾಗೂ ಬೆಂಗಳೂರು- ಓನ್ ) ಮೂಲಕವೂ ಅರ್ಜಿ ಸಲ್ಲಿಸಬಹುದು. ಪೋಷಕರ ಚಾಲನಾ ಅನುಜ್ಞಾಪತ್ರ ( ಡಿಎಲ್ ) ಸಂಖ್ಯೆ ಆಧಾರ್ ಸಂಖ್ಯೆ ಮತ್ತು ವಿದ್ಯಾರ್ಥಿಯ ಆಧಾರ್ ಸಂಖ್ಯೆ ನೀಡಿ ಅರ್ಜಿ ಸಲ್ಲಿಸಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Also test the prasadam of the holy places of the state Pralhad Joshi urges state government
ಬೆಂಗಳೂರು2 ಗಂಟೆಗಳು ago

Tirupati laddu Row : ತಿರುಪತಿ ಲಡ್ಡು ಬಳಿಕ ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೊಳಪಡಿಸಿ; ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹ

Road Accident
ಬೆಂಗಳೂರು4 ಗಂಟೆಗಳು ago

Road Accident : ಚಾಲಕ ಕಾರಿನೊಳಗೆ ಮಲಗಿದ್ದಾಗಲೇ ನಡುರಾತ್ರಿ ಹೊತ್ತಿ ಉರಿದ ಕಾರು! ಅಗ್ನಿ ಅವಘಡಕ್ಕೆ ಕಾರಣ ನಿಗೂಢ!

Road Accident
ಕೋಲಾರ4 ಗಂಟೆಗಳು ago

Road Accident: ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರನ ತಲೆಯೇ ಕಟ್‌! ಭೀಕರ ದೃಶ್ಯಕ್ಕೆ ಬೆಚ್ಚಿ ಬಿದ್ದ ಜನರು

Good news for the children of yellow board drivers Do this to get a scholarship under Vidyanidhi
ಬೆಂಗಳೂರು ಟೆಕ್ ಸಮ್ಮಿಟ್5 ಗಂಟೆಗಳು ago

Students Scholarship : ಯೆಲ್ಲೋ ಬೋರ್ಡ್‌ ವಾಹನ ಚಾಲಕರ ಮಕ್ಕಳಿಗೆ ಗುಡ್‌ ನ್ಯೂಸ್‌; ವಿದ್ಯಾನಿಧಿಯಡಿ ಸ್ಕಾಲರ್‌ಶಿಪ್‌ ಪಡೆಯಲು ಹೀಗೆ ಮಾಡಿ

allegations of rape honeytrap Mla Munirathna arrested again by Kaggalipura police as soon as he came out of jail
ರಾಜಕೀಯ5 ಗಂಟೆಗಳು ago

MLA Muniratna: ಅತ್ಯಾಚಾರ, ಹನಿಟ್ರ್ಯಾಪ್‌ ಆರೋಪ; ಜೈಲಿನಿಂದ ಹೊರಬರುತ್ತಿದ್ದಂತೆ ಶಾಸಕ ಮುನಿರತ್ನ ಮತ್ತೆ ಅರೆಸ್ಟ್‌

Dina Bhavishya
ಭವಿಷ್ಯ11 ಗಂಟೆಗಳು ago

Dina Bhavishya : ಈ ರಾಶಿಯವರು ಇಂದು ದೊಡ್ಡ ಯೋಜನೆಯತ್ತ ಗಮನ ಹರಿಸುವಿರಿ

MCC Seat Retention, Opportunity to Cancel KEA Seat Deadline to Cancel Seats by 11 AM on September 20
ಬೆಂಗಳೂರು21 ಗಂಟೆಗಳು ago

KEA : ಎಂಸಿಸಿ ಸೀಟು ಉಳಿಸಿಕೊಂಡು, ಕೆಇಎ ಸೀಟು ರದ್ದತಿಗೆ ಅವಕಾಶ; ಸೀಟು ರದ್ದು ಪಡಿಸಿಕೊಳ್ಳಲು ನಾಳೆವರೆಗೂ ಗಡುವು

Innovative technologies have revolutionized patients with heart valve disorder
ಬೆಂಗಳೂರು21 ಗಂಟೆಗಳು ago

World Heart Day: ಹೃದಯ ಕವಾಟ ಅಸ್ವಸ್ಥತೆ ಹೊಂದಿರುವ ರೋಗಿಗಳ ಪಾಲಿಗೆ ನವೀನ ತಂತ್ರಜ್ಞಾನಗಳು ವರದಾನ

Dr JG Manjunatha has been ranked among the world's top scientists for the fifth time in a row
ಕೊಡಗು21 ಗಂಟೆಗಳು ago

KM Cariappa College : ವಿಶ್ವದ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ 5ನೇ ಬಾರಿ ಸ್ಥಾನ ಪಡೆದ ಡಾ.ಜೆ.ಜಿ.ಮಂಜುನಾಥ

Muslims light aarti to Lord Ganesha Basavakalyana witnessed the confluence of unity
ಬೀದರ್‌22 ಗಂಟೆಗಳು ago

Ganesh Chaturthi: ಗಣೇಶನಿಗೆ ಆರತಿ ಬೆಳಗಿ ಸೌರ್ಹಾದತೆ ಮೆರೆದ ಮುಸ್ಲಿಂರು; ಭಾವೈಕತ್ಯೆಯ ಸಮಾಗಮಕ್ಕೆ ಸಾಕ್ಷಿಯಾದ ಬಸವಕಲ್ಯಾಣ

Kannada Serials
ಕಿರುತೆರೆ11 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ11 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್3 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 ವಾರಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ4 ವಾರಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 ತಿಂಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 ತಿಂಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 ತಿಂಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 ತಿಂಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 ತಿಂಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌