Site icon Vistara News

Self Harming : ಮಕ್ಕಳಿಬ್ಬರನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ!

Mother kills two children commits suicide

ಚಿತ್ರದುರ್ಗ: ತನ್ನ ಮುದ್ದಾದ ಮಕ್ಕಳಿಬ್ಬರನ್ನು ಕೊಂದು (Murder case) ಬಳಿಕ ತಾನೂ ಆತ್ಮಹತ್ಯೆಗೆ (Self Harming) ಶರಣಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಚಿತ್ರದುರ್ಗದ ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಲತಾ ಹಾಗೂ ಜ್ಞಾನ (3), ಪ್ರಣೀತ (5) ಮೃತಪಟ್ಟ ದುರ್ದೈವಿಗಳು. ದಾಂಪತ್ಯ ಕಲಹದಿಂದ ಲತಾ ಬೇಸತ್ತು ಹೋಗಿದ್ದರು. ಇದರಿಂದ ಮಾನಸಿಕ ಖಿನ್ನತೆಗೆ ಜಾರಿದ್ದ ಲತಾ ಮನನೊಂದಿದ್ದರು. ಇಂದು ಏಕಾಏಕಿ ತನ್ನಿಬ್ಬರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ, ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ. ಆ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸದ್ಯ ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಚಳ್ಳಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Namma Metro : ಮೆಟ್ರೋಗೆ ಹರಾಜಲ್ಲಿ ಸಿಕ್ತು 7 ಲಕ್ಷ ರೂ.; ಇವು ಪ್ರಯಾಣಿಕರ ವಸ್ತುಗಳು!

ಅದಾನಿ ಗ್ರೂಪ್‌ ಕಾರ್ಖಾನೆಯ ಡೆಪ್ಯೂಟಿ ಮ್ಯಾನೇಜರ್ ಸೂಸೈಡ್‌!

ವಾಡಿ ಎಸಿಸಿ ಸಿಮೆಂಟ್ ಕಾರ್ಖಾನೆಯ ಡೆಪ್ಯೂಟಿ ಮ್ಯಾನೇಜರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರಗಿ ಜಿಲ್ಲೆ ಚಿತ್ತಾಪೂರ ತಾಲೂಕಿನ ವಾಡಿ ಪಟ್ಟಣದಲ್ಲಿರುವ ಅದಾನಿ ಗ್ರೂಪ್ ಮಾಲೀಕತ್ವದ ಎಸಿಸಿ ಕಾರ್ಖಾನೆಯ ಆಡಳಿತ ಮಂಡಳಿಯವರ ಕಿರುಕುಳಕ್ಕೆ ಬೇಸತ್ತು ಡೆಪ್ಯೂಟಿ ಮ್ಯಾನೇಜರ್ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ.

ರಮೇಶ ಪವಾರ (47) ಆತ್ಮಹತ್ಯೆ ಮಾಡಿಕೊಂಡ ಎಸಿಸಿ ಕಾರ್ಖಾನೆ ಡೆಪ್ಯೂಟಿ ಮ್ಯಾನೇಜರ್ ಆಗಿದ್ದಾರೆ. ಎಸಿಸಿ ಕಾಲೋನಿಯ ಮನೆಯ ಬಾಲ್ಕನಿಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಕಾರ್ಖಾನೆ ಹಿರಿಯ ಅಧಿಕಾರಿಗಳ ಮೇಲೆ ಆರೋಪ ಮಾಡಿರುವ ವಿಡಿಯೊ ಮಾಡಿ ಹರಿಬಿಟ್ಟಿದ್ದಾರೆ. ಈ ರಮೇಶ ಪವಾರ್ ಚಿತ್ತಾಪೂರದ ಮಾಜಿ ಶಾಸಕ ದಿ.ವಾಲ್ಮಿಕಿ ನಾಯಕ್ ಅವರ ಅಳಿಯರಾಗಿದ್ದಾರೆ.

ವಾಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಖಕ್ಕೆ ಪ್ಲಾಸ್ಟಿಕ್‌ ಕವರ್‌ ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಮೈಸೂರು: ಮೈಸೂರಿನ ರೀಜನಲ್ ಇನ್‌ಸ್ಟಿಟ್ಯೂಟ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಮುಖಕ್ಕೆ ಪ್ಲಾಸ್ಟಿಕ್ ಕವರ್ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಕ್ಷಜ್ (18) ಮೃತ ದುರ್ದೈವಿ.

ಹೈದರಾಬಾದ್ ಮೂಲದ ಅಕ್ಷಜ್‌ ರೀಜನಲ್ ಇನ್‌ಸ್ಟಿಟ್ಯೂಟ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ. ಇತ್ತೀಚೆಗೆ ಮಾನಸಿಕ ಖಿನ್ನೆತೆಗೆ ಒಳಗಾಗಿದ್ದ ಎನ್ನಲಾಗಿದೆ. ಹಾಸ್ಟೆಲ್‌ನಲ್ಲಿ ಯಾರು ಇಲ್ಲದ ವೇಳೆ ಪ್ಲಾಸ್ಟಿಕ್‌ ಕವರ್‌ನಿಂದ ಮುಖವನ್ನು ಪೂರ್ತಿ ಮುಚ್ಚಿಕೊಂಡು ಉಸಿರುಗಟ್ಟಿಸಿಕೊಂಡು ಮೃತಪಟ್ಟಿದ್ದಾನೆ.

ಸಹಪಾಠಿಗಳು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಜಯಲಕ್ಷ್ಮಿಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Exit mobile version