Site icon Vistara News

Self Harming: ಶಿಡ್ಲನಹಟ್ಟಿ ಗ್ರಾಮದಲ್ಲಿ ಕೆರೆಗೆ ಹಾರಿ ನವ ವಿವಾಹಿತೆ ಆತ್ಮಹತ್ಯೆ

Newly married woman commits suicide by jumping into lake in Shidlanahatti village

ಕುಣಿಗಲ್: ಕೆರೆಗೆ (Lake) ಹಾರಿ ನವ ವಿವಾಹಿತೆ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ ಎಡೆಯೂರು ವ್ಯಾಪ್ತಿಯ ಶಿಡ್ಲನಹಟ್ಟಿ ಗ್ರಾಮದಲ್ಲಿ ಬುಧವಾರ ನಡೆದಿದೆ.

ಕುಣಿಗಲ್ ಪಟ್ಟಣದ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ರಕ್ಷಿತ (19) ಮೃತ ಯುವತಿ. ಕಳೆದ ಇಪ್ಪತ್ತು ದಿನಗಳ ಹಿಂದಷ್ಟೆ ತಾಯಿಯ ತಮ್ಮ (ಸೋದರ ಮಾವನೊಂದಿಗೆ) ಕುಟುಂಬಸ್ಥರು ಒಪ್ಪಿ ಮದುವೆ ಮಾಡಿಕೊಡಲಾಗಿತ್ತು. ಮದುವೆ ಬಳಿಕ ಯುವತಿಯನ್ನು ಕಾಲೇಜು ಬಿಡಿಸಿದ್ದರು ಎನ್ನಲಾಗಿದೆ. ಆರೋಗ್ಯ ಸಮಸ್ಯೆ ಕಾರಣದಿಂದ ಖಿನ್ನತೆಗೆ ಒಳಗಾಗಿದ್ದ ಯುವತಿ ರಕ್ಷಿತ ಕೆರೆಗೆ ಹಾರಿ, ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಅಮೃತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version