Self Harming: 3 ತಿಂಗಳ ಹಿಂದೆ ಪ್ರೀತಿಸಿ ಮದುವೆ ಆಗಿದ್ದ ನವದಂಪತಿ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆ - Vistara News

ಕರ್ನಾಟಕ

Self Harming: 3 ತಿಂಗಳ ಹಿಂದೆ ಪ್ರೀತಿಸಿ ಮದುವೆ ಆಗಿದ್ದ ನವದಂಪತಿ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆ

Self Harming: ಅವರ ಮದುವೆ ನಡೆದು ಮೂರು ತಿಂಗಳಷ್ಟೇ ಆಗಿತ್ತು. ಮನೆಯವರ ವಿರೋಧದ ನಡುವೆ ನಡೆದ ಪ್ರೇಮ ವಿವಾಹ ಅದು. ಈಗ ಅವರು ಕೆರೆಯಲ್ಲಿ ಶವವಾಗಿದ್ದಾರೆ. ಕಾರಣ ಏನು ಎನ್ನುವುದನ್ನು ಪೊಲೀಸರು ಹುಡುಕುತ್ತಿದ್ದಾರೆ.

VISTARANEWS.COM


on

Newly wed couple dead
ಕೆರೆಯಲ್ಲಿ ಶವವಾಗಿ ಪತ್ತೆಯಾದ ರಮೇಶ್‌ ಮತ್ತು ಸಹನಾ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ದೇವನಹಳ್ಳಿ: ಕೇವಲ ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ನವ ದಂಪತಿಯ (Newly wedded couple) ಶವ ಕೃಷಿ ಹೊಂಡದಲ್ಲಿ ಪತ್ತೆಯಾಗಿದೆ. ಇದು ಆತ್ಮಹತ್ಯೆಯೇ (Self harming) ಅಥವಾ ಬೇರೆ ಏನಾದರೂ ಅನಾಹುತವೇ ಎನ್ನುವ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ (Bangalore rural) ದೇವನಹಳ್ಳಿ ತಾಲೂಕಿನ ಬಿಜ್ಜವಾರ ಗ್ರಾಮದಲ್ಲಿ ನಡೆದ ಈ ಘಟನೆಯಲ್ಲಿ ಮೃತಪಟ್ಟವರನ್ನು ವಿಜಯಪುರ ಪಟ್ಟಣದ ನಿವಾಸಿ ರಮೇಶ್ (28), ಸಹನಾ (26) ಎಂದು ಗುರುತಿಸಲಾಗಿದೆ.

Newly wed couple dead
ಕೆರೆಯಲ್ಲಿ ಶವವಾಗಿ ಪತ್ತೆಯಾದ ರಮೇಶ್‌ ಮತ್ತು ಸಹನಾ. ಘಟನಾ ಸ್ಥಳದಲ್ಲಿ ಸೇರಿದ ಜನರು

ರಮೇಶ್‌ ಮತ್ತು ಸಹನಾ ಕಳೆದ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಅವರು ಮೂರು ತಿಂಗಳ ಹಿಂದಷ್ಟೇ ಮನೆಯವರ ವಿರೋಧದ ನಡುವೆ ಮದುವೆಯಾಗಿದ್ದರು. ಮನೆಯಲ್ಲಿ ವಿರೋಧವಿದ್ದ ಹಿನ್ನೆಲೆಯಲ್ಲಿ ಅವರು ಯಾರ ಕಿರಿಕಿರಿಯೂ ಬೇಡ ಎಂದು ಪ್ರತ್ಯೇಕವಾಗಿ ಬಾಡಿಗೆ ಮನೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಎರಡು ದಿನದ ಹಿಂದೆ ಸಹನಾ ಮತ್ತು ರಮೇಶ್‌ ಅವರು ಬಿಜ್ಜವಾರ ಗ್ರಾಮದ ಸಂಬಂಧಿಕರ ಮನೆಗೆ ಬಂದಿದ್ದರು. ಅಲ್ಲಿ ಮನೆಯವರ ಜತೆ ಚೆನ್ನಾಗಿಯೇ ಇದ್ದರು. ತಮ್ಮ ಮದುವೆ ವಿಚಾರದ, ನಂತರ ಎದುರಿಸಿದ ಸಮಸ್ಯೆಗಳ ಬಗ್ಗೆ ಸಹಜವಾಗಿ ಮಾತನಾಡಿದ್ದರು.

ಇದೆಲ್ಲ ಆಗಿ ಅವರು ರಾತ್ರಿಯೇ ಮನೆಯಿಂದ ಹೊರಟಿದ್ದರು. ತಮ್ಮ ಮನೆಗೆ ಹೋಗುವುದಾಗಿ ಹೇಳಿದ್ದರು. ಆದರೆ, ಸೋಮವಾರ ಮುಂಜಾನೆ ಅವರ ಶವ ಕೃಷಿ ಹೊಂಡದಲ್ಲಿ ಪತ್ತೆಯಾಗಿದೆ.

ಸ್ಥಳೀಯರು ಮತ್ತು ಪೊಲೀಸರಿಂದ ನೀರಿ‌ನಲ್ಲಿದ್ದ ಮೃತದೇಹ ಹೊರತೆಗೆಯಲಾಗಿದೆ. ಇವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಇದರ ಕಾರಣಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ತಂಗಿಯ ಚುಡಾವಣೆ ಪ್ರಶ್ನಿಸಿದ ಅಣ್ಣನ ಕಲ್ಲು ಎತ್ತಿಹಾಕಿ ಕೊಂದರು

ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಚೌಡಾಪುರ ಗ್ರಾಮದಲ್ಲಿ ಯುವಕನೊಬ್ಬನನ್ನು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ಮಹಾಂತಪ್ಪ ಗಂಡೋಲಿ (26) ಕೊಲೆಯಾದ ಯುವಕ. ಮಹಾಂತಪ್ಪನ ತಂಗಿಯನ್ನು ಆತನದೇ ಕೆಲವು ಗೆಳೆಯರು ಚುಡಾಯಿಸುತ್ತಿದ್ದರು. ಇದನ್ನು ಪ್ರಶ್ನಿಸಿದ್ದೇ ಕೊಲೆಗೆ ಕಾರಣ ಎಂದು ಹೇಳಲಾಗಿದೆ.

ಭಾನುವಾರ ಸಂಜೆ ಚೌಡಾಪುರದಲ್ಲಿ ಮಹಾಂತೇಶ್‌ ತನ್ನ ಗೆಳೆಯರೊಂದಿಗೆ ಬಾರ್‌ನಲ್ಲಿ ಕುಡಿಯಲು ಕೂತಾಗ ಚುಡಾವಣೆಯ ವಿಷಯ ಚರ್ಚೆಗೆ ಬಂದಿದೆ. ತಂಗಿಯನ್ನು ಚುಡಾಯಿಸಿದರೆ ಸರಿ ಇರುವುದಿಲ್ಲ ಎಂದು ಮಹಾಂತೇಶ್‌ ಎಚ್ಚರಿಕೆ ನೀಡಿದ್ದ ಎನ್ನಲಾಗಿದೆ. ಅಲ್ಲೇ ಸಣ್ಣ ಮಟ್ಟದ ಜಗಳ ನಡೆದಿತ್ತು.

ಈ ನಡುವೆ, ಮಹಾಂತೇಶ್‌ ಬಾರ್‌ನಿಂದ ಹೊರಗೆ ಬರುವಾಗ ಆತನನ್ನು ತಡೆದು ನಿಲ್ಲಿಸಿ ಆತನ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಪರಶುರಾಮ ದಶರಥ ಎಂಬಾತ ಒಳಗಡೆ ಏನು ಮಾತನಾಡಿದ್ದು ಎಂದು ಪ್ರಶ್ನಿಸಿ ಮಹಾಂತೇಶನ ಮೇಲೆ ಎರಗಿದ್ದಾನೆ. ಮತ್ತು ಮಹಾಂತೇಶನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ.

ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಂಗಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ನಡೆದಿರುವ ಈ ಕೊಲೆ ಪ್ರದೇಶದಲ್ಲಿ ಆತಂಕಕ್ಕೆ ಕಾರಣವಾಗಿದೆ. ಆರೋಪಿ ವಿರುದ್ಧ ಮತ್ತು ಆತನಿಗೆ ಕುಮ್ಮಕ್ಕು ನೀಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಡ ಕೇಳಿಬಂದಿದೆ.

ಇದನ್ನೂ ಓದಿ: Student death : ಅಮ್ಮಾ ಬಕೆಟ್‌ ಇದ್ಯಾ? ಎಂದು ಬಾಲ್ಕನಿಯಿಂದ ಬಾಗಿ ಕೇಳಿದ ಮೆಡಿಕಲ್‌ ವಿದ್ಯಾರ್ಥಿ ಕೆಳಗೆ ಬಿದ್ದು ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading

Latest

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

VISTARANEWS.COM


on

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌‌ ಮೇಟಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಮಠ ವಿರುದ್ಧ ಕಾಂಗ್ರೆಸ್‌‌ನ ಉಮೇಶ್‌ ಮೇಟಿ ಗೆಲುವು ಪಡೆದಿದ್ದಾರೆ. ಉಮೇಶ್‌ ಮೇಟಿ 97,941 ಮತಗಳನ್ನು ಪಡೆದಿದ್ರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಉಮೇಶ್‌‌ ಮೇಟಿಯವರ ತಂದೆ ಹೆಚ್‌.ವೈ.ಮೇಟಿ ಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading
Advertisement
Latest3 hours ago

ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವುದಿಲ್ಲ ಎಂದಿದ್ದೇಕೆ ಮಮತಾ ಬ್ಯಾನರ್ಜಿ?

Latest7 hours ago

ಬಿಜೆಪಿ ಬಂಗಾಳ ಗೆದ್ದಾಯ್ತು, ಸಿಎಂ ರೇಸ್‌ನಲ್ಲಿ ಯಾರು?

Latest7 hours ago

ತಮಿಳುನಾಡು: ಬಹುಮತ ಪಡೆಯಲು ದಳಪತಿ ಮುಂದಿರುವ ತಂತ್ರಗಳೇನು?

Latest1 day ago

ಪಶ್ಚಿಮ ಬಂಗಾಳದಲ್ಲಿ ಕೇಸರಿ, ತಮಿಳುನಾಡಲ್ಲಿ ದಳಪತಿ, ಕೇರಳಂನಲ್ಲಿ ಕಾಂಗ್ರೆಸ್‌ ದರ್ಬಾರ್‌

Latest1 day ago

ಕೇರಳಂ: ಯುಡಿಎಫ್‌ ಗೆಲುವಿನ ಹಿಂದಿನ ಏಳು ರಣತಂತ್ರ!

Latest1 day ago

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

Latest1 day ago

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

Latest1 day ago

ದ್ರಾವಿಡ ನಾಡಲ್ಲಿ ʼದಳಪತಿʼ ಯುಗಾರಂಭ

Rakshit Shetty Richard Anthony Produce By Hombale
ಅವಿಭಾಗೀಕೃತ2 days ago

ಪಂಚರಾಜ್ಯ ವಿಧಾನಸಭಾ ಚುನಾವಣೆ , ಕರ್ನಾಟಕ ಉಪಚುನಾವಣೆ ಫಲಿತಾಂಶದ ಕ್ಷಣಕ್ಷಣದ ಅಪ್‌ಡೇಟ್‌

Latest2 days ago

‘ಟಾಕ್ಸಿಕ್’ ಸಿನಿಮಾದಲ್ಲಿ ಬೋಲ್ಡ್ ದೃಶ್ಯಕ್ಕೆ ಕತ್ತರಿ ಹಾಕಿ ಕಿಯಾರಾ ಅಡ್ವಾಣಿ ಮನವಿ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌