Site icon Vistara News

Self Harming: ಮಣಿಪಾಲ ಸಮೀಪ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

Self Harming

ಉಡುಪಿ: ಜಿಲ್ಲೆಯ ಮಣಿಪಾಲ ಸಮೀಪದ ಹಿರಿಯಡ್ಕ ಬಳಿ ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾಳೆ. ಮನೆಯ ಉಪ್ಪರಿಗೆ ಮಾಡಿದ ಜಂತಿಗೆ ಚೂಡಿದಾರದ ಶಾಲು ಕಟ್ಟಿ ನೇಣಿಗೆ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ.

ಪೆರ್ಡೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಯನ (17) ಆತ್ಮಹತ್ಯೆಗೆ ಶರಣಾದವಳು. ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು: ಚಿಕ್ಕಪ್ಪನಿಂದಲೇ ಅಣ್ಣನ ಮಗನ ಕೊಲೆ

ಚಿಕ್ಕಬಳ್ಳಾಪುರ: ಬೆಳ್ಳಂಬೆಳಿಗ್ಗೆಯೇ ಚಿಕ್ಕಬಳ್ಳಾಪುರದಲ್ಲಿ ಶೂಟೌಟ್ (Shootout) ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕು ಹಂಪಸಂದ್ರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚಿಕ್ಕಪ್ಪನೇ ತನ್ನ ಅಣ್ಣನ ಮಗನನ್ನು ಪಿಸ್ತೂಲ್‌ನಿಂದ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ನಜೀರ್ ಅಹ್ಮದ್ (46) ಕೊಲೆಯಾದ ದುರ್ದೈವಿ. ಕೊಲೆ ಮಾಡಿದವನನ್ನು ಬಶೀರ್ ಅಹ್ಮದ್ (66) ಎಂದು ಗುರುತಿಸಲಾಗಿದೆ (Murder case).

ಆರೋಪಿ ಬಶೀರ್ ಅಹ್ಮದ್ ತನ್ನ ಅಣ್ಣ ಮಾಬೂಸಾಬಿ ಮೇಲೆಯೂ ಮಾರಕಾಸ್ತ್ರದಿಂದ ದಾಳಿ ನಡೆಸಿದ್ದಾನೆ. ಗಂಭೀರ ಗಾಯಗೊಂಡ ಮಾಬೂಸಾಬಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೌದಿಯಲ್ಲಿ ಕೆಲಸ ಮಾಡಿಕೊಂಡಿದ್ದ ಬಶೀರ್ ಅಹ್ಮದ್ ಇತ್ತೀಚೆಗಷ್ಟೇ ಊರಿಗೆ ಬಂದಿದ್ದ. ಸದ್ಯ ಪೊಲೀಸರು ಬಶೀರ್ ಅಹ್ಮದ್‌ನನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಗುಡಿಬಂಡೆ ಪೊಲೀಸರ ಭೇಟಿ ನೀಡಿದ್ದು, ಪರಿಶೀಲಿಸುತ್ತಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.

ಬೆಂಗಳೂರಿನ ಕೋರ್ಟ್‌ ಆವರಣದಲ್ಲೇ ಹರಿದ ನೆತ್ತರು

ಬೆಂಗಳೂರು: ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣದಲ್ಲಿ ವಕೀಲೆಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿರುವ ಘಟನೆ ಮಂಗಳವಾರ ನಡೆದಿದೆ. ವಿಮಲ ಎಂಬುವವರ ಪರಿಸ್ಥಿತಿ ಚಿಂತಾಜನಕವಾಗಿದೆ. ಜಯರಾಮರೆಡ್ಡಿ ಎಂಬಾತನಿಂದ ಈ ಕೃತ್ಯ ನಡೆದಿದೆ.

ಇದನ್ನೂ ಓದಿ: Self Harming : ಅನಾರೋಗ್ಯದಿಂದ ಬೇಸತ್ತು ಕ್ರಿಮಿನಾಶಕ ಸೇವಿಸಿ ದಂಪತಿ ಆತ್ಮಹತ್ಯೆ; ಸಾಲಗಾರರ ಕಾಟಕ್ಕೆ ಹೆದರಿ ವ್ಯಕ್ತಿ ನಾಪತ್ತೆ

ವಕೀಲೆಯಾಗಿರುವ ವಿಮಲ ಜತೆ ಆತ್ಮೀಯವಾಗಿದ್ದ ಜಯರಾಮ ಹಂತ ಹಂತವಾಗಿ ಸುಮಾರು ಒಂದೂವರೆ ಕೋಟಿ ರೂ.ಗಿಂತಲೂ ಹೆಚ್ಚು ಹಣ ನೀಡಿದ್ದ. ಆದರೆ ಆನಂತರ ಇವರಿಬ್ಬರಿಗೂ ಮನಸ್ತಾಪ ಎದುರಾಗಿತ್ತು. ಹೆಜ್ಜಾಲ ಬಳಿ ಇರುವ ಪ್ರಾಪರ್ಟಿ ವಿಚಾರವಾಗಿ ಇಬ್ಬರು ಕಿರಿಕ್ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ವಿಮಲಾ ದೌರ್ಜನ್ಯದ ಜತೆಗೆ ಪ್ರಾಪರ್ಟಿ ವಿಚಾರವಾಗಿಯೂ ಶೇಷಾದ್ರಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಇಬ್ಬರು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆದರೆ ಏಕಾಏಕಿ ಕೋರ್ಟ್ ಹಾಲ್‌ನ ಒಂದನೇ ಎಸಿಎಂಎಂ ಬಳಿ ಚಾಕುವಿನಿಂದ ಇರಿದಿದ್ದಾನೆ. ವಿಮಲಾ ಪರಿಸ್ಥಿತಿ ಗಂಭೀರವಾಗಿದ್ದು ಅವರನ್ನು ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹಲಸೂರುಗೇಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Exit mobile version