Site icon Vistara News

Self Harming: ತಿಪಟೂರಿನಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

Self Harming

ಬೆಂಗಳೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಜಿಲ್ಲೆಯ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ನಡೆದಿದೆ. ತಿಪಟೂರಿನ ಕಲ್ಪತರು ಕಾಲೇಜಿನಲ್ಲಿ ಎರಡನೇ ವರ್ಷದ ಬಿಎ ಓದುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಯುವತಿ ಸಾವಿಗೆ ಶರಣಾಗಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೇವರಹಳ್ಳಿ ಗ್ರಾಮದ ಸುರೇಶ್ ಎಂಬುವವರ ಪುತ್ರಿ ವರ್ಷಿಣಿ (19), ಮೃತ ವಿದ್ಯಾರ್ಥಿನಿ. ತಿಪಟೂರಿನ ಕಲ್ಪತರು ಕಾಲೇಜಿನಲ್ಲಿ ಎರಡನೇ ವರ್ಷದ ಬಿಎ ಓದುತ್ತಿದ್ದ ವಿದ್ಯಾರ್ಥಿನಿ, ಕಾಲೇಜಿಗೆ ಪ್ರತಿದಿನ ಊರಿನಿಂದ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಳು. ಇಂದು ಕಾಲೇಜು ಮುಗಿಸಿ ಮನೆಗೆ ತೆರಳುವಾಗ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ವರ್ಷಿಣಿಗೆ ಆರೋಗ್ಯ ಸಮಸ್ಯೆ ಇತ್ತು ಎಂದು ಹೇಳಲಾಗುತ್ತಿದ್ದು, ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅರಸೀಕೆರೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹ ತಿಪಟೂರು ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಘಟನೆ ಸಂಬಂಧ ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ದಾಖಲಾಗಿದೆ.

ಇದನ್ನೂ ಓದಿ | NIA Raid: ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ; ಶಿರಸಿಯಲ್ಲಿ ನಿಷೇಧಿತ ಪಿಎಫ್‌ಐ ಸದಸ್ಯನ ಬಂಧನ

ಕೋಲಾರದಲ್ಲಿ ರೈಲಿಗೆ ಸಿಲುಕಿ ಯುವತಿ ಸಾವು

ಕೋಲಾರ: ರೈಲಿಗೆ ಸಿಲುಕಿ ಯುವತಿ ಮೃತಪಟ್ಟಿ ಘಟನೆ ಜಿಲ್ಲೆಯ ಮಾಲೂರು ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಅರಳೇರಿ ಗ್ರಾಮದ ಸಂಧ್ಯಾ (22) ಮೃತ ದುರ್ದೈವಿ. ಫ್ಲಿಪ್‌ಕಾರ್ಟ್‌ನಲ್ಲಿ ಉದ್ಯೋಗಿಯಾಗಿದ್ದ ಸಂಧ್ಯಾ, ಬೆಳಗ್ಗೆ ಗ್ರಾಮದಿಂದ ಕೆಲಸಕ್ಕೆ ಎಂದು ಹೊರಟವಳು ರೈಲಿಗೆ ಸಿಲುಕಿ ಮೃತಪಟ್ಟಿದ್ದಾಳೆ. ಮಾಲೂರು ರೈಲ್ವೆ ಪೊಲೀಸರಿಂದ ಪರಿಶೀಲನೆ ನಡೆಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಸಾವಿಗೆ ನಿಖರ ಕಾರಣ ಏನು ಎಂಬುದು ತಿಳಿದು ಬಂದಿಲ್ಲ.

ಇದನ್ನೂ ಓದಿ: Udupi Gang War : ಉಡುಪಿಯಲ್ಲಿ ನಿಲ್ಲದ ಗ್ಯಾಂಗ್ ವಾರ್; ಇಬ್ಬರು ಪುಂಡರು ಅಂದರ್‌

ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಇನ್ಫೋಸಿಸ್‌ ಉದ್ಯೋಗಿ ಆತ್ಮಹತ್ಯೆ

ಕೋಲಾರ: ಇನ್ಫೋಸಿಸ್‌ ಉದ್ಯೋಗಿಯೊಬ್ಬ (Infosys employee) ಆತ್ಮಹತ್ಯೆಗೆ (Self Harming) ಶರಣಾಗಿದ್ದಾನೆ. ಹರೀಶ್ (28) ಮೃತ ದುರ್ದೈವಿ. ಕೋಲಾರ ತಾಲೂಕಿನ ಅರಾಭಿಕೊತ್ತನೂರು ಗ್ರಾಮದಲ್ಲಿ ಘಟನೆ ನಡೆದಿದೆ.

ಹರೀಶ್‌ ಕಳೆದ ಒಂದು ತಿಂಗಳ ಹಿಂದಷ್ಟೇ ದೇವನಹಳ್ಳಿ ಮೂಲದ‌ ಯುವತಿಯೊಂದಿಗೆ ವಿವಾಹವಾಗಿತ್ತು. ಮಂಗಳವಾರ ಬೆಳಗಿನ ಜಾವ ಕೆಲಸ ಮುಗಿಸಿ ಮನೆಗೆ ಹೋದವನೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ‌ಕಾರಣ ತಿಳಿದುಬಂದಿಲ್ಲ.

ಇದನ್ನೂ ಓದಿ | Pavithra Gowda: ಪೊಲೀಸ್ ಕಸ್ಟಡಿಯಲ್ಲಿದ್ದ ಪವಿತ್ರಾ ಗೌಡ ಅಸ್ವಸ್ಥ; ಆಸ್ಪತ್ರೆಗೆ ಶಿಫ್ಟ್‌

ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆಯನ್ನು ನಡೆಸಲಾಗುತ್ತಿದೆ.

Exit mobile version