ಶಿವಮೊಗ್ಗ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ (Self harming) ಮಾಡಿಕೊಂಡಿದ್ದಾರೆ. ಶಿವಮೊಗ್ಗ ನಗರದ ಕ್ಲಾರ್ಕ್ ಪೇಟೆಯಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಭುವನೇಶ್ವರಿ, ಮಾರುತಿ, ಹಾಗೂ ದರ್ಶನ್ ಮೃತ ದುರ್ದೈವಿ.
ಶಿವಮೊಗ್ಗದ ಒಟಿ ರಸ್ತೆಯ ವಿಜಯ ಗ್ಯಾರೇಜ್ ಬಳಿ ಇರುವ ಮನೆಯಲ್ಲಿ ನಿನ್ನೆ ಸೋಮವಾರವೇ ವಿಷ ಸೇವಿಸಿದ್ದಾರೆ. ಘಟನೆಯು ತಡವಾಗಿ ಬೆಳಕಿಗೆ ಬಂದಿದೆ. ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಸಂಬಂಧಿಗಳು ಮನೆಗೆ ಬಂದು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಕೌಟುಂಬಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಭುವನೇಶ್ವರಿ ಜತೆಗೆ ಅವರ ತಮ್ಮ ಮಾರುತಿ ಹಾಗೂ ಪುತ್ರ ದರ್ಶನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ದೊಡ್ಡಪೇಟೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಶಿವಮೊಗ್ಗದ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.
ಇದನ್ನೂ ಓದಿ: Assault Case: ಪಾರ್ಕಿಂಗ್ ವಿಚಾರಕ್ಕೆ ಡಿಶುಂ ಡಿಶುಂ; ಮಹಿಳೆಗೆ ಕಪಾಳಮೋಕ್ಷ!
ಹೆಂಡ್ತಿ ಟಾರ್ಚರ್‌ಗೆ ನೇಣು ಬಿಗಿದುಕೊಂಡು ಗಂಡ ಆತ್ಮಹತ್ಯೆ
ಚಿತ್ರದುರ್ಗ: ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ನಗರದ ಐಯುಡಿಪಿ (IUDP) ಲೇಔಟ್ ನಿವಾಸಿ ಮಂಜುನಾಥ (38) ಆತ್ಮಹತ್ಯೆ ಮಾಡಿಕೊಂಡವರು.
ಕಳೆದ ಎರಡು ವರ್ಷಗಳ ಹಿಂದೆ ಚೇತನ ಎಂಬಾಕೆ ಜತೆ ಮಂಜುನಾಥ್ ವಿವಾಹವಾಗಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಚೇತನ ಪತಿ ಮಂಜುನಾಥ್‌ಗೆ ಕಿರುಕುಳ ನೀಡುತ್ತಿದ್ದರಂತೆ. ಚೇತನಾ ವಿರುದ್ಧ ಮಂಜುನಾಥ್ ಪೋಷಕರು ಆರೋಪಿಸಿದ್ದಾರೆ.
ಜಿಲ್ಲಾಸ್ಪತ್ರೆ ಸಿಟಿ ಸ್ಕ್ಯಾನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಮೇಲೆ ಚೇತನ ಮಹಿಳಾ ಠಾಣೆಗೆ ದೂರು ನೀಡಿದ್ದರು. ಪತ್ನಿ ದೂರು ನೀಡಿದ ವಿಷಯ ತಿಳಿದ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
ಡೆತ್ ನೋಟ್ ಬರೆದಿಟ್ಟು ಜಮ್ಮು-ಕಾಶ್ಮೀರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ಜಮ್ಮು-ಕಾಶ್ಮೀರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವುದು ನಗರ ಹೊರವಲಯದ ಯಲಹಂಕದಲ್ಲಿ ನಡೆದಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತನ್ವೀರ್ ಮೃತ ವಿದ್ಯಾರ್ಥಿ. ಪ್ರತಿಷ್ಠಿತ ರೇವಾ ಯೂನಿವರ್ಸಿಟಿಯಲ್ಲಿ ಬಿಎಸ್ಸಿ ದ್ವಿತೀಯ ವರ್ಷ ವ್ಯಾಸಂಗ ಮಾಡುತ್ತಿದ್ದ ತನ್ವೀರ್, ಭಾನುವಾರ ಇದ್ದಕ್ಕಿದ್ದಂತೆ ಪಿ.ಜಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಿ.ಜಿಯಲ್ಲಿನ ಕೆಲ ವಿದ್ಯಾರ್ಥಿಗಳು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು, ತನ್ವೀರ್‌ನ ಪೋಷಕರಿಗೆ ಮಾಹಿತಿ ನೀಡಲಾಗಿದೆ. ಹೀಗಾಗಿ ಪೋಷಕರು ಕಾಶ್ಮೀರದಿಂದ ಬರುತ್ತಿದ್ದಾರೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ