Site icon Vistara News

Self-harming : ಫ್ಯಾನ್‌ಗೆ ನೇಣು ಬಿಗಿದು ಯುವತಿ ಆತ್ಮಹತ್ಯೆ; ಪ್ರೇಮ ವೈಫಲ್ಯ ಕಾರಣವೇ?

kruthika death

ಉಳ್ಳಾಲ (ದಕ್ಷಿಣ ಕನ್ನಡ) : ಬಾಡಿಗೆ ಮನೆಯಲ್ಲಿ ತಾಯಿ ಮತ್ತು ಅಣ್ಣನೊಂದಿಗೆ ವಾಸವಿದ್ದ ಯುವತಿಯೊಬ್ಬಳು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ (Self-harming) ಘಟನೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯಲ್ಲಿ ನಡೆದಿದೆ. ಪ್ರೀತಿಕಾ ಪೂಜಾರಿ(21) ಆತ್ಮ ಹತ್ಯೆಗೈದ ಯುವತಿ (Young girl ends life). ಪ್ರೀತಿಕಾ ತನ್ನ ತಾಯಿ ಮತ್ತು ಅಣ್ಣನೊಂದಿಗೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯ ಬಾಡಿಗೆ ಮನೆಯಲ್ಲಿ ವಾಸವಿದ್ದರು.

ಮಂಗಳೂರಿನ ಕಾಲ್ ಸೆಂಟರ್ ಒಂದರಲ್ಲಿ ಪ್ರೀತಿಕಾ ಉದ್ಯೋಗದಲ್ಲಿದ್ದರು.ಇಂದು ಮದ್ಯಾಹ್ನ 12.30 ರ ವೇಳೆಗೆ ಪ್ರೀತಿಕಾ ಮನೆಯೊಳಗೆ ಆತ್ಮಹತ್ಯೆಗೈದಿರುವ ವಿಚಾರ ಬೆಳಕಿಗೆ ಬಂದಿದೆ. ಮಧ್ಯಾ ಕೆಲಸದಿಂದ ಮರಳಿದ್ದ ಪ್ರೀತಿಕಾ ನೇಣಿಗೆ ಕೊರಳೊಡ್ಡಿದ್ದಾರೆ.

ಕೊಣಾಜೆ ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಪ್ರಕರಣ ದಾಖಲಿಸಿದ್ದಾರೆ. ಮೃತ ಪ್ರೀತಿಕಾ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದು ಆತ ಪ್ರೇಮ ನಿರಾಕರಣೆ ಮಾಡಿದ್ದೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Suicide Case: ಇಬ್ಬರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಆಟೊ ಚಾಲಕ

ಎರಡೆರಡು ಬಾರಿ ಎಕ್ಸಾಂನಲ್ಲಿ ಫೇಲ್‌; ಮನನೊಂದ ವಿದ್ಯಾರ್ಥಿ ಆತ್ಮಹತ್ಯೆ!

ಪರೀಕ್ಷೆಯಲ್ಲಿ ಎರಡು ಬಾರಿ ಫೇಲ್‌ ಆಗಿದ್ದಕ್ಕೆ ಪಿಯು ವಿದ್ಯಾರ್ಥಿಯೊಬ್ಬ ಮನನೊಂದು ನೇಣಿಗೆ ಕೊರಳೊಡ್ಡಿದ್ದಾನೆ.

ಬೆಂಗಳೂರು: ಇಲ್ಲಿನ ಬೈಯಪ್ಪನಹಳ್ಳಿಯ ಕೃಷ್ಣಯ್ಯನಪಾಳ್ಯದಲ್ಲಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಾರ್ಲ್ಸ್(18) ಮೃತ ದುರ್ದೈವಿ.

ಚಾರ್ಲ್ಸ್ ರೂಮಿನ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಾರ್ಲ್ಸ್ ಆರು ತಿಂಗಳ ಹಿಂದೆ ಪ್ರಥಮ ಪಿಯುಸಿಯಲ್ಲಿ ಫೇಲಾಗಿದ್ದರಿಂದ ಮನನೊಂದಿದ್ದ. ಆದರೆ ಪೋಷಕರು ಧೈರ್ಯ ತುಂಬಿದ ಕಾರಣಕ್ಕೆ ಧೃತಿಗೆಡದೆ ನಂತರ ಮರು ಪರೀಕ್ಷೆಯನ್ನು ಬರೆದಿದ್ದ. ಅದರಲ್ಲೂ ಫೇಲ್‌ ಆಗಿದ್ದ.

ಈ ವೇಳೆ ಕಾಲೇಜಿನವರು ಬೇರೆ ಕಾಲೇಜಿಗೆ ಸೇರಿಸುವಂತೆ ಹೇಳಿದ್ದಾರೆ. ಮೊದಲ ಬಾರಿ ಫೇಲಾಗಿದ್ದ ಚಾರ್ಲ್ಸ್, ಎರಡನೇ ಬಾರಿಯೂ ಫೇಲಾಗಿದ್ದಕ್ಕೆ ಖಿನ್ನತೆಗೆ ಒಳಗಾಗಿದ್ದ. ಬುಧವಾರ ರಾತ್ರಿ 9:30 ರ ಸುಮಾರಿಗೆ ಮನೆಯಲ್ಲಿ ಯಾರು ಇಲ್ಲದೆ ಇದ್ದಾಗ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲಿಸಿದ್ದು, ಚಾರ್ಲ್ಸ್ ಮೃತದೇಹವನ್ನು ಸಿವಿ ರಾಮನ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version