Site icon Vistara News

ಹಿರಿಯ ಪತ್ರಕರ್ತ ಕೆ. ಸತ್ಯನಾರಾಯಣ ನಿಧನ

ಕೆ. ಸತ್ಯನಾರಾಯಣ

ಬೆಂಗಳೂರು: ಹಿರಿಯ ಪತ್ರಕರ್ತ ಕೆ. ಸತ್ಯನಾರಾಯಣ(73) ಅವರು ಹೃದಾಯಾಘಾತದಿಂದ ನಗರದ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು.

ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಮೃತರಿಗೆ ಪತ್ನಿ, ಪುತ್ರಿ ಇದ್ದಾರೆ. ಇವರು ಸಂಯುಕ್ತ ಕರ್ನಾಟಕದ ಮೂಲಕ 1965ರಲ್ಲಿ ಪ್ರೂಫ್‌ ರೀಡರ್‌ ಆಗಿ ಪತ್ರಿಕಾ ಕ್ಷೇತ್ರ ಪ್ರವೇಶಿಸಿ, ಅಲ್ಲಿಯೇ ಸಂಪಾದಕರಾಗಿ, ನಂತರ ಕನ್ನಡ ಪ್ರಭ ದಿನಪತ್ರಿಕೆಯಲ್ಲಿ ಸಹಾಯಕ ಸಂಪಾದಕರಾಗಿದ್ದರು. ಬಳಿಕ ಸಂಯುಕ್ತ ಕರ್ನಾಟಕಕ್ಕೆ ವಾಪಸಾಗಿದ್ದರು. ಆನಂತರ ವಿಜಯ ಕರ್ನಾಟಕ, ಸುವರ್ಣ ಟೈಮ್ಸ್ ಆಫ್ ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ್ದರು.

ಮೃತರ ಪುತ್ರಿ ಮತ್ತು ಅಳಿಯ ಆಸ್ಟ್ರೇಲಿಯಾದಲ್ಲಿದ್ದು, ಶನಿವಾರ ಸಂಜೆ ವೇಳೆಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಭಾನುವಾರ ಬೆಳಗ್ಗೆ 10 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ.

ಇದನ್ನೂ ಓದಿ | Accident Case | ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಬಿಕಾಂ ವಿದ್ಯಾರ್ಥಿನಿ ಸಾವು, ಇನ್ನೊಬ್ಬ ವಿದ್ಯಾರ್ಥಿ ಗಂಭೀರ!

Exit mobile version