Site icon Vistara News

Serial accident | ಕಾರು, ಬಸ್‌, ಬೈಕ್ ನಡುವೆ ಸರಣಿ ಅಪಘಾತ ಒಬ್ಬ ಸಾವು, ಇಬ್ಬರಿಗೆ ಗಾಯ

Series accident Balni Village

ಕಾರವಾರ: ತಾಲೂಕಿನ ರಾಜ್ಯ ಹೆದ್ದಾರಿ 34ರ ಬಾಳ್ನಿ ಗ್ರಾಮದ ಬಳಿ ಕಾರು, ಬಸ್‌ ಹಾಗೂ ಬೈಕ್ ನಡುವೆ ನಡೆದ ಸರಣಿ ಅಪಘಾತದಲ್ಲಿ (Serial accident) ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಮಕ್ಕಳು ಗಾಯಗೊಂಡಿದ್ದಾರೆ.

ಕೆಳಗಿನ ಬಾಳ್ನಿ ನಿವಾಸಿ ಸತ್ಯಂ ಗೋವಿಂದ ನಾಯ್ಕ (18) ಮೃತಪಟ್ಟ ದುರ್ದೈವಿ. ಇವರು ಮಕ್ಕಳನ್ನು ಶಾಲೆಗೆ ಬಿಡಲು ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಏಕಾಏಕಿ ಬಸ್ ಬಂದು ಬೈಕ್‌ಗೆ ಡಿಕ್ಕಿಯಾಗಿದ್ದು ಎದುರಿನಿಂದ ಬರುತ್ತಿದ್ದ ಕಾರು ಬಸ್‌ಗೆ ಗುದ್ದಿದ್ದು ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಅಪಘಾತದ ರಭಸಕ್ಕೆ ಬೈಕ್ ಸವಾರ ಬಸ್ ಅಡಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿಯೇ ಅಸುನೀಗಿದ್ದಾನೆ. ಈತನ ಜೊತೆಗಿದ್ದ ಇಬ್ಬರು ಮಕ್ಕಳು ಗಾಯಗೊಂಡಿದ್ದು ಒಬ್ಬನ ಕಾಲು ಮುರಿದಿದೆ ಎನ್ನಲಾಗಿದೆ. ಗಾಯಾಳುಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು ಗಂಭೀರ ಗಾಯಗೊಂಡಿದ್ದವನನ್ನು ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.

ಕಾರು ಕೂಡ ಬಸ್‌ಗೆ ಗುದ್ದಿದ ಕಾರಣ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕದ್ರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ | UPSC NDA & NA Exam | ಸೇನಾಧಿಕಾರಿ ಹುದ್ದೆಗೆ ಎನ್‌ಡಿಎ-ಎನ್‌ಎ ಪರೀಕ್ಷೆ; ಅರ್ಜಿ ಆಹ್ವಾನ

Exit mobile version