Site icon Vistara News

Road Accident : ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇಯಲ್ಲಿ ಸರಣಿ ಅಪಘಾತ; ಟ್ರಾಫಿಕ್‌ ಜಾಮ್

Bengaluru Mysuru Expressway accident

ಮಂಡ್ಯ: ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ ವೇ‌ (Bangalore mysore expressway) ಯಲ್ಲಿ ಸರಣಿ ಅಪಘಾತ (Series accident) ನಡೆದಿದೆ. ಮೊದಲಿಗೆ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ (Bus and car accident) ಸಂಭವಿಸಿದೆ. ಬಳಿಕ ಆ ಕಾರು ಮುಂದಿನ ಕಾರಿಗೆ ಡಿಕ್ಕಿ ಹೊಡೆದಿದೆ. ಹೀಗೆ ಒಟ್ಟು ಮೂರು ಕಾರುಗಳು ಜಖಂ ಆಗಿವೆ. ಇದರಲ್ಲಿ ಇಬ್ಬರಿಗೆ ಗಂಭೀರವಾಗಿ ಗಾಯಗಳಾಗಿದ್ದರೆ, ಮೂರ್ನಾಲ್ಕು ಜನಕ್ಕೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದಿಂದಾಗಿ ಕೆಲವು ಸಮಯ ಟ್ರಾಫಿಕ್ ಜಾಮ್ (Traffic Jam) ಆಗಿದೆ.

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆ.ಕೋಡಿಹಳ್ಳಿ ಗ್ರಾಮದ ಬೈಪಾಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ರಾಜಹಂಸ ಬಸ್ (Rajahamsa Bus) ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮುಂಬದಿಯ ಮೂರು ಕಾರುಗಳು ಜಖಂ ಆಗಿವೆ. ಕಾರಿನಲ್ಲಿದ್ದ ಮೂರ್ನಾಲ್ಕು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಇದನ್ನೂ ಓದಿ: Doodh Sagar Ban : ಅರೆ ಇಸ್ಕಿ, ದೂಧ್‌ ಸಾಗರ್‌ ಹೋದೋರಿಗೆ ಹೊಡೆಸಿದರು ಬಸ್ಕಿ!

ತಕ್ಷಣವೇ ಗಾಯಗಳನ್ನು ರಕ್ಷಿಸಿದ ಸ್ಥಳೀಯರು ಮದ್ದೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ವಾಹನಗಳ ದಟ್ಟಣೆ ಹೆಚ್ಚಾದ ಹಿನ್ನೆಲೆಯಲ್ಲಿ ಕೆಲವು ಸಮಯ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಬಳಿಕ ಅಪಘಾತವಾದ ವಾಹನಗಳನ್ನು ಪಕ್ಕಕ್ಕೆ ಸರಿಸಿದ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೋಮಾಂಸ ಸಾಗಾಟ ಮಾಡುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ

ಶಿವಮೊಗ್ಗ: ಗೋ ಮಾಂಸವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣ (Illegal transportation of beef) ಸಾಗರದಲ್ಲಿ ಬೆಳಕಿಗೆ ಬಂದಿದೆ. ಶಿವಮೊಗ್ಗದ ಸಾಗರ ತಾಲೂಕಿನ ಐಗಿನಬೈಲು ಬಳಿ ಗೋ ಮಾಂಸ ಸಾಗಿಸುತ್ತಿದ್ದ ಕಾರಿಗೆ ಖಾಸಗಿ ಬಸ್‌ವೊಂದು ಡಿಕ್ಕಿ (Road Accident) ಹೊಡೆದಿದೆ. ಈ ವೇಳೆ ವಿಷಯ ಬೆಳಕಿಗೆ ಬಂದಿದೆ.

ಅಪಘಾತ ನಡೆಯುತ್ತಿದ್ದಂತೆ ಕಾರಿನಲ್ಲಿದ್ದವರು ಸ್ಥಳದಲ್ಲೇ ಕಾರು ಬಿಟ್ಟು ಪರಾರಿ ಆಗಿದ್ದಾರೆ. ಅನುಮಾನ ಬಂದು ಕಾರು ಪರಿಶೀಲಿಸಿದಾಗ ಕಾರಿನ ಹಿಂಬದಿ ಸೀಟ್‌ನಲ್ಲಿ ಗೋ ಮಾಂಸ ಪತ್ತೆಯಾಗಿದೆ. ಸೀಟ್‌ನ ಅಡಿಯಲ್ಲಿ ಹಾಗೂ ದೊಡ್ಡ ಟ್ರಮ್‌ನಲ್ಲಿ ಗೋಮಾಂಸ ಬಚ್ಚಿಟ್ಟು ಸಾಗಾಣಿಕೆ ಮಾಡಲಾಗುತ್ತಿತ್ತು ಎನ್ನಲಾಗಿದೆ.

ಅಪಘಾತದಲ್ಲಿ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಕಾರಿಗೂ ಹಾನಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪ್ರಾಯ ಸಂಭವಿಸಿಲ್ಲ. ಸಾಗರ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ, ಗೋ ಮಾಂಸವನ್ನು ಹಾಗೂ ಕಾರನ್ನು ವಶಕ್ಕೆ ಪಡೆದಿದ್ದಾರೆ. ಪರಾರಿ ಆಗಿರುವವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಇದನ್ನೂ ಓದಿ: CT Ravi : ವಿಪಕ್ಷ ನಾಯಕನ ಆಯ್ಕೆ ಆಗಿದ್ದರೆ ಅರ್ಕಾವತಿ ಹಗರಣ ಹೊರ ಬರುತ್ತಿತ್ತು: ಸಿ.ಟಿ. ರವಿ

ವೀಲಿಂಗ್‌ ಮಾಡುತ್ತಿದ್ದವರ ಬಂಧನ

ಬೈಕ್‌ನಲ್ಲಿ ವೀಲಿಂಗ್ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ ಮಾಡಲಾಗಿದೆ. ಶಿವಮೊಗ್ಗ ನಗರದ ಕಸ್ತೂರಬಾ ಕಾಲೇಜು, ಡಿವಿಎಸ್ ಕಾಲೇಜು ಸುತ್ತಮುತ್ತಲಿನ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದರು. ಈ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿತ್ತು. ಹೀಗಾಗಿ ತನಿಖೆ ಕೈಗೊಂಡ ಪೊಲೀಸರು ಇಬ್ಬರನ್ನು ಬಂಧಿಸಿ, ಐಎಂವಿ ಕಾಯ್ದೆಯಡಿ ದಂಡ ವಿಧಿಸಿ ಕಾನೂನು ರೀತಿ ಕ್ರಮ ಕೈಗೊಂಡಿದ್ದಾರೆ.

Exit mobile version