ಬಳ್ಳಾರಿ: ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ (Sexual Harassment) ನೀಡಿದ ಆರೋಪದಲ್ಲಿ ವಿಜಯನಗರದ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪಿಜಿ ಸೆಂಟರ್ನ ಇಂಗ್ಲಿಷ್ ಪ್ರಾಧ್ಯಾಪಕ ಡಾ. ಚಾಂದ್ಬಾಷ ಎಂ. ಅವರನ್ನು ಅಮಾನತು ಮಾಡಿ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆದೇಶ ಹೊರಡಿಸಿದ್ದಾರೆ.
ನವೆಂಬರ್ ೭ ರಂದು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಡಾ. ಚಾಂದ್ಬಾಷ ಎಂ. ವಿರುದ್ಧ ಪಿಎಚ್.ಡಿ ವಿದ್ಯಾರ್ಥಿನಿ, ವಿವಿ ಆಡಳಿತ ಮಂಡಳಿಗೆ ದೂರು ನೀಡಿದ್ದರು. ಪ್ರಕರಣದ ತನಿಖೆಗಾಗಿ ವಿಶ್ವವಿದ್ಯಾಲಯದಿಂದ ತನಿಖಾ ಸಮಿತಿ ರಚನೆ ಮಾಡಲಾಗಿತ್ತು. ಈ ಬಗ್ಗೆ ಸುದೀರ್ಘ ತನಿಖೆಯ ನಂತರ ಸಮಿತಿ ಸಲ್ಲಿಸಿದ ವರದಿ ಆಧರಿಸಿ ಸಿಂಡಿಕೇಟ್ ಸಭೆಯ ನಿರ್ಣಯದಂತೆ ಪ್ರಾಧ್ಯಾಪಕನನ್ನು ಅಮಾನತು ಮಾಡಲಾಗಿದೆ.
ಇದನ್ನೂ ಓದಿ | Hombale Films | 5 ವರ್ಷದಲ್ಲಿ ಚಿತ್ರೋದ್ಯಮಕ್ಕೆ 3 ಸಾವಿರ ಕೋಟಿ ರೂ. ಬಂಡವಾಳ ಹೂಡಲಿದೆಯಂತೆ ಹೊಂಬಾಳೆ!