ಧಾರವಾಡ: ಇಲ್ಲಿನ ಖಾಸಗಿ ಕಾಲೇಜೊಂದರ ಅಧ್ಯಕ್ಷ ಮತ್ತು ಗಣಿತ ಉಪನ್ಯಾಸಕರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ದೂರು ದಾಖಲಾಗಿದೆ. ಪೊಲೀಸರು ಕಾಲೇಜಿಗೆ ಹೋಗಿ ವಿಚಾರಣೆ ನಡೆಸಿದ್ದಾರೆ. ವಿದ್ಯಾರ್ಥಿಗಳು ಪ್ರತಿಭಟನೆಗೆ ಇಳಿದಿದ್ದಾರೆ.
ಧಾರವಾಡ ನಗರದ ಜಯನಗರದಲ್ಲಿ ಇರುವ ವಿಶ್ವೇಶ್ವರಯ್ಯ ಪಿಯು ವಿಜ್ಞಾನ ಕಾಲೇಜಿನ ಅಧ್ಯಕ್ಷ ಬಸವರಾಜ್ ಯಡವಣ್ಣವರ ಹಾಗೂ ಗಣಿತ ಉಪನ್ಯಾಸಕ ಮಹಾದೇವ ಕುರವತ್ತಾಗೌಡ ಮೇಲೆ ಪೋಕ್ಸೋ ಅಡಿ ಪ್ರಕರಣ ದಾಖಲಾಗಿದೆ. ಇವರಿಬ್ಬರೂ ಕಾಲೇಜಿನ ೧೦ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾಗಿ ಆರೋಪಿಸಲಾಗಿದೆ.
ಏನೇನು ಆರೋಪ?
– ಈ ಇಬ್ಬರೂ ವ್ಯಕ್ತಿಗಳು ವಿದ್ಯಾರ್ಥಿನಿಯರಿಗೆ ಕಳೆದ ನಾಲ್ಕು ವರ್ಷಗಳಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
– ಒಳ್ಳೆಯತನದಿಂದ ವರ್ತಿಸುತ್ತಾ, ಅಂಕ ನೀಡುವ, ಪಾಠ ಕಲಿಸುವ ಆಮಿಷದೊಂದಿಗೆ ವಿದ್ಯಾರ್ಥಿನಿಯರನ್ನು ಬುಟ್ಟಿಗೆ ಹಾಕಿಕೊಳ್ಳುತ್ತಿದ್ದರು.
– ದೇವಸ್ಥಾನಕ್ಕೆ ಹಾಗೂ ಆಸ್ಪತ್ರೆಗೆ ಕರೆದುಕೊಂಡು ಹೋಗುವ ನೆಪದಲ್ಲಿ ಬೇರೆ ಬೇರೆ ಪ್ರದೇಶಕ್ಕೆ ಕರೆದುಕೊಂಡು ಹೋಗುವ ಆರೋಪ.
– ವಿದ್ಯಾರ್ಥಿನಿಯರು ಇರುವ ಹಾಸ್ಟೇಲ್ ನಲ್ಲಿ ರಾತ್ರಿ ೧೨ ಗಂಟೆವರೆಗೆ ಹೋಗಿ ಕುಳಿತುಕೊಳ್ಳುತ್ತಾರೆ ಎಂಬ ಆರೋಪ.
– ಸುಮಾರು ೧೦ ವಿದ್ಯಾರ್ಥಿನಿಯರು ತಮಗೆ ಕಿರುಕುಳ ಆಗಿದೆ ಎಂದು ಆರೋಪಿಸಿದ್ದಾರೆ.
ವಿದ್ಯಾರ್ಥಿಗಳ ಪ್ರತಿಭಟನೆ
ಕಾಲೇಜ್ ಅಧ್ಯಕ್ಷ ಹಾಗೂ ಶಿಕ್ಷಕನ ವಿರುದ್ಧ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಮಧ್ಯೆ, ಪೊಲೀಸರು ಕಾಲೇಜಿಗೆ ಬಂದು ವಿಚಾರಣೆ ನಡೆಸಿದ್ದಾರೆ. ಇದರ ಜತೆಯೇ ವಿದ್ಯಾರ್ಥಿನಿಗಳು ಪ್ರತಿಭಟನೆ ಆರಂಭಿಸಿದ್ದಾರೆ.
ಇದನ್ನೂ ಓದಿ |SIMS | ಹೊರ ರಾಜ್ಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಸಿಮ್ಸ್ ಸಹ ಪ್ರಾಧ್ಯಾಪಕ ಸಸ್ಪೆಂಡ್