ಮಂಗಳೂರು: ಅಂಗಡಿಗೆ ಬಂದಿದ್ದ ಮಹಿಳೆಯೊಬ್ಬರಿಗೆ ಅಲ್ಲಿ ಕೆಲಸಕ್ಕಿರುವ ಹುಡುಗ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವುದು ಹಿಂದು ಮಹಿಳೆಯಾಗಿರುವ ಹಿನ್ನೆಲೆಯಲ್ಲಿ ಹಿಂದು ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಪುತ್ತೂರು ತಾಲೂಕಿನ ತಿಂಗಳಾಡಿಯಲ್ಲಿ ಬುಧವಾರ ಸಂಜೆ ಘಟನೆ ನಡೆದಿದೆ. ಮಹಿಳೆ ಅಂಗಡಿಗೆ ಹೋಗಿದ್ದ ವೇಳೆ ಅಲ್ಲಿ ಮಾಲೀಕರು ಇರಲಿಲ್ಲ ಎನ್ನಲಾಗಿದೆ. ಆಗ ಕೆಲಸದ ಹುಡುಗ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಇದರ ವಿರುದ್ಧ ಗುರುವಾರ ಪುತ್ತೂರಿನಲ್ಲಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹಿಂದು ಮುಖಂಡ ಅರುಣ್ ಪುತ್ತಿಲ ಮತ್ತು ಇತರರು ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇವೆ. ಒಂದು ವೇಳೆ ಇಂಥ ಘಟನೆಗಳು ಮುಂದುವರಿದರೆ, ಹಿಂದೂ ಸಮಾಜದ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದರೆ ರಕ್ತಪಾತ ಉಂಟಾಗಲಿದೆ ಎಂದು ಎಚ್ಚರಿಕೆ ನೀಡಿದರು.
ಅಂಗಡಿಗಳಿಗೆ ಬರುವ ಹಿಂದು ಹೆಣ್ಮಕ್ಕಳ ಜತೆ ಅನುಚಿತವಾಗಿ ವರ್ತಿಸಿದರೆ ತೀವ್ರ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರತಿಭಟನೆಯಲ್ಲಿ ಎಚ್ಚರಿಕೆ ನೀಡಲಾಯಿತು. ಜತೆಗೆ ಅಂಗಡಿಗೆ ಹೋಗುವವರು ಕೂಡಾ ಎಚ್ಚರಿಕೆ ವಹಿಸುವಂತೆ ಸೂಚಿಸಲಾಯಿತು.