Site icon Vistara News

ಕೆಪಿಸಿಸಿ ವಕ್ತಾರರಾಗಿ ಶಂಕರ ಗುಹಾ ದ್ವಾರಕಾನಾಥ್‌ ನೇಮಕ

shankar guha dwarakanath appointment

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ(ಕೆಪಿಸಿಸಿ) ವಕ್ತಾರರಾಗಿ ಡಾ. ಶಂಕರ ಗುಹಾ ದ್ವಾರಕಾನಾಥ್‌ ಅವರು ನೇಮಕಗೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಇಲ್ಲಿಯವರೆಗೆ ಕೆಪಿಸಿಸಿ ವೈದ್ಯಕೀಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಡಾ. ಶಂಕರ ಗುಹಾ ದ್ವಾರಕಾನಾಥ್‌ ಕಾರ್ಯನಿರ್ವಹಿಸುತ್ತಿದ್ದರು.

ಈ ಕುರಿತು ಆದೇಶಿಸಿರುವ ಡಿ.ಕೆ. ಶಿವಕುಮಾರ್‌ “ಇತ್ತೀಚಿನ ದಿನಗಳಲ್ಲಿ ದೃಶ್ಯ, ಮುದ್ರಣ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳು ಸಾರ್ವಜನಿಕವಾಗಿ ಮಹತ್ವದ ವಿಷಯಗಳ ಬಗ್ಗೆ ಚರ್ಚೆಯ ನೇತೃತ್ವ ವಹಿಸುತ್ತಿರುವುದು ಗಮನಾರ್ಹ ವಿಷಯ. ಈ ಮಾಧ್ಯಮಗಳಲ್ಲಿ ನಮ್ಮ ವಿಚಾರ ಮತ್ತು ದೃಷ್ಟಿಕೋನ ಪರಿಣಾಮಕಾರಿಯಾಗಿ ಬಿಂಬಿತವಾಗಬೇಕಿರುವುದು ಅತ್ಯಂತ ಅವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ತಮಗಿರುವ ಅನುಭವ, ತಿಳಿವಳಿಕೆಗಳೊಂದಿಗೆ ವಿಷಯವನ್ನು ಸಮರ್ಥವಾಗಿ ಮಂಡಿಸುವ ಸಾಮರ್ಥ್ಯವನ್ನು ಗಮನಿಸಿ ನಿಮ್ಮನ್ನು ಕೆಪಿಸಿಸಿ ವಕ್ತಾರರಾಗಿ ನೇಮಕ ಮಾಡಲಾಗಿದೆʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | ನಮ್ಮದು ಡಿ.ಕೆ. ಶಿವಕುಮಾರ್‌ ಕುಟುಂಬ ಕೆಟ್ಟೋಯ್ತ?: ಆರೋಪಕ್ಕೆ ಅಶ್ವತ್ಥನಾರಾಯಣ ಆಕ್ರೋಶ

Exit mobile version