Site icon Vistara News

Advocate General: ನೂತನ ಅಡ್ವೊಕೇಟ್‌ ಜನರಲ್‌ ಆಗಿ ಶಶಿಕಿರಣ್ ಶೆಟ್ಟಿ ನೇಮಕ

New Advocate General for karnataka Shashikiran Shetty

New Advocate General for karnataka Shashikiran Shetty

ಬೆಂಗಳೂರು: ರಾಜ್ಯದ ನೂತನ ಅಡ್ವೊಕೇಟ್‌ ಜನರಲ್‌ ಆಗಿ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ಅವರು ನೇಮಕವಾಗಿದ್ದಾರೆ. ಇತ್ತೀಚೆಗೆ ಅಡ್ವೊಕೇಟ್‌ ಜನರಲ್‌ ಸ್ಥಾನಕ್ಕೆ‌ (Advocate General) ಪ್ರಭುಲಿಂಗ ನಾವದಗಿ ಅವರು ರಾಜೀನಾಮೆ ನೀಡಿದ್ದರು. ಇದರಿಂದ ತೆರವಾದ ಸ್ಥಾನಕ್ಕೆ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನೂತನ ಅಡ್ವೊಕೇಟ್‌ ಜನರಲ್‌ ಶಶಿಕಿರಣ್ ಶೆಟ್ಟಿ ಅವರು, ನನ್ನ ಮೇಲೆ ನಂಬಿಕೆ ಇಟ್ಟು ಅಡ್ವೊಕೇಟ್‌ ಜನರಲ್‌ ಆಗಿ ನೇಮಕ ಮಾಡಿರುವ ಸರ್ಕಾರಕ್ಕೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Alok Mohan: ರಾಜ್ಯದ ನೂತನ ಡಿಜಿಪಿಯಾಗಿ ಅಲೋಕ್‌ ಮೋಹನ್‌ ನೇಮಕ

ಅನಗತ್ಯ ಮತ್ತು ಕ್ಷುಲ್ಲಕ ಮೊಕದ್ದಮೆಗಳನ್ನು ಕಡಿಮೆ ಮಾಡುವ ಮೂಲಕ ಬಾಕಿ ಇರುವ ದಾವೆಗಳನ್ನು ಕಡಿಮೆ ಮಾಡುವುದು ಹಾಗೂ ಯುವ ಕಾನೂನು ಅಧಿಕಾರಿಗಳ ನೆರವಿನಿಂದ ಕಾನೂನು ಇಲಾಖೆಯನ್ನು ಬಲಪಡಿಸುವುದು ತಮ್ಮ ಮೊದಲ ಆದ್ಯತೆಯಾಗಿದೆ. ಅದೇ ರೀತಿ ನ್ಯಾಯಾಲಯದ ಕಾರ್ಯನಿರ್ವಹಣೆಯನ್ನು ಉತ್ತಮಗೊಳಿಸಲು ಮೂಲಸೌಕರ್ಯ ಸುಧಾರಿಸುವುದು ಮತ್ತೊಂದು ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.‌

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತ ಬಂದ ಬೆನ್ನಲ್ಲೇ ಅಡ್ವೊಕೇಟ್‌ ಜನರಲ್‌ ಸ್ಥಾನಕ್ಕೆ‌ ಪ್ರಭುಲಿಂಗ ನಾವದಗಿ ಅವರು ರಾಜೀನಾಮೆ ನೀಡಿದ್ದರು. ನಂತರ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಸ್ಥಾನಕ್ಕೆ ಅರುಣ್‌ ಶ್ಯಾಮ್‌ ಅವರು ಕೂಡ ರಾಜೀನಾಮೆ ಸಲ್ಲಿಸಿದ್ದರು.

ಇದನ್ನೂ ಓದಿ | Aruna Shyam M: ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಸ್ಥಾನಕ್ಕೆ ಅರುಣ್‌ ಶ್ಯಾಮ್‌ ರಾಜೀನಾಮೆ

Exit mobile version