ಬೆಂಗಳೂರು: ಬಡವರಿಗೆ ಸೂರು ಅತ್ಯಂತ ಅವಶ್ಯಕವಾಗಿದೆ. ನೆಮ್ಮದಿ ಜೀವನ ನಡೆಸಲು ಮನೆಗಳನ್ನು ನೀಡಬೇಕಾಗುತ್ತದೆ. ಹೀಗಾಗಿ ಕ್ಷೇತ್ರದಲ್ಲಿ ಕಡುಬಡವರಿಗಾಗಿಯೇ ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಸಹಕಾರ ಸಚಿವ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ ಹೇಳಿದರು.
ಕೆಂಗೇರಿ, ಗೋಪಾಲನಗರ, ಚಿಕ್ಕೆಲ್ಲೂರು, ಕೊಲ್ಲೂರು, ದೊಡ್ಡಾಲದರಮರ, ಚುಂಚನಕುಪ್ಪೆ ಸೇರಿದಂತೆ ನಾನಾ ಗ್ರಾಮಗಳಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಎಸ್.ಟಿ. ಸೋಮಶೇಖರ್, ಬಡವರಿಗೆ ಸೂರು ಕಲ್ಪಿಸುವ ದೃಷ್ಟಿಯಿಂದ 8 ಗ್ರಾಮಗಳ ವ್ಯಾಪ್ತಿಯಲ್ಲಿ 18 ಸಾವಿರ ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಚಿಕ್ಕಲೂರು, ನೆಲಗುಳಿ, ದೇವಗೆರೆಯಲ್ಲಿ ಮನೆಗಳು ಹಂಚಿಕೆಗೆ ಸಿದ್ಧವಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: Karnataka Election 2023: ಕಾಂಗ್ರೆಸ್‌ನ ವಾರಂಟಿಯೇ ಮುಗಿದಿರುವಾಗ ಗ್ಯಾರಂಟಿಗಳಿಗೆ ಇನ್ನೆಲ್ಲಿ ಬೆಲೆ! ಪ್ರಧಾನಿ ಮೋದಿ ಲೇವಡಿ
ಕ್ಷೇತ್ರದಲ್ಲಿ ಮೂಲ ಸೌಕರ್ಯಕ್ಕೂ ಒತ್ತು ನೀಡಲಾಗಿದೆ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕೆಂದು ಸ್ತ್ರೀ ಶಕ್ತಿ ಸಂಘಗಳನ್ನು ಉಚಿತವಾಗಿ ನೋಂದಾಯಿಸಿ, ಸಾಲ ಸೌಲಭ್ಯ ಕಲ್ಪಿಸಲಾಗಿದೆ. ಆದರೆ, ಜೆಡಿಎಸ್ ಅಭ್ಯರ್ಥಿ ಯಾವುದಾದರೂ ಒಂದೇ ಒಂದು ಅಭಿವೃದ್ಧಿ ಕಾರ್ಯ ಮಾಡಿದ್ದರೆ ತಿಳಿಸಿ ಎಂದು ಪ್ರಶ್ನಿಸಿದರು.
ಕಣ್ಣೀರು ಹಾಕಿದಾಕ್ಷಣ ಮತದಾರರು ಕರಗುವುದಿಲ್ಲ
ಯಶವಂತಪುರದ ಜನತೆ ಯಾರು ಕೆಲಸ ಮಾಡುತ್ತಾರೆ? ಕಷ್ಟಕ್ಕೆ ಯಾರು ಸ್ಪಂದಿಸುತ್ತಾರೆ? ಎಂಬುದನ್ನು ಗಮನಿಸಿ ಮತ ನೀಡುತ್ತಾರೆ. ಕೇವಲ ಕಣ್ಣೀರು ಹಾಕಿದಾಕ್ಷಣ ಮತದಾರರು ಕರಗುವುದಿಲ್ಲ. ಅವರು ಬುದ್ಧಿವಂತರಿದ್ದಾರೆ. ಈ ಬಾರಿ ಬಿಜೆಪಿಯೇ ಗೆಲ್ಲಲಿದೆ ಎಂದು ಎಸ್.ಟಿ. ಸೋಮಶೇಖರ್ ಹೇಳಿದರು.
ಇದನ್ನೂ ಓದಿ: Karnataka Election : ಬಿಜೆಪಿ ಕೈಗೆ ಸಿಕ್ತು ಬಜರಂಗದಳ ಅಸ್ತ್ರ; ನಿಷೇಧ ಪ್ರಸ್ತಾಪ ವಿರುದ್ಧ ಕೆಂಡಾಮಂಡಲ
ಯಶವಂತಪುರದಲ್ಲಿ ಎಸ್.ಟಿ. ಸೋಮಶೇಖರ್ ಅವರ ಮತಬೇಟೆ
ಜೆಡಿಎಸ್ ಅಭ್ಯರ್ಥಿ ಐದು ವರ್ಷದಲ್ಲಿ ಕೇವಲ ಎರಡು ತಿಂಗಳು ಮಾತ್ರ ಕ್ಷೇತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ. ಅದೂ ಚುನಾವಣೆ ಘೋಷಣೆಯಾಗುವಾಗ ಮಾತ್ರ. ಉಳಿದ ದಿನಗಳಲ್ಲಿ ಕ್ಷೇತ್ರದ ಜನರು ನೆನಪಾಗುವುದಿಲ್ಲವೇ? ಎಂದು ಎಸ್.ಟಿ. ಸೋಮಶೇಖರ್ ಪ್ರಶ್ನಿಸಿದರು.