ಶಿವಮೊಗ್ಗ: ನಗರದ (Shimoga News ) ಬೆಕ್ಕಿನ ಕಲ್ಮಠದಲ್ಲಿ ಲಿಂಗೈಕ್ಯ ಜಗದ್ಗುರು ಶ್ರೀ ಗುರುಬಸವ ಸ್ವಾಮೀಜಿ ಅವರ 111ನೇ ಪುಣ್ಯ ಸ್ಮರಣೋತ್ಸವ, ಶರಣ ಸಾಹಿತ್ಯ ಸಮ್ಮೇಳನ ಮತ್ತು ಭಾವೈಕ್ಯ ಸಮ್ಮೇಳನವನ್ನು ಜ.6 ಹಾಗೂ 7ರಂದು ಹಮ್ಮಿಕೊಳ್ಳಲಾಗಿದೆ ಎಂದು ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಹೇಳಿದರು.
ಮಂಗಳವಾರ (ಜ.೩) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ದಿನಗಳ ಕಾರ್ಯಕ್ರಮದಲ್ಲಿ ಸಾಹಿತಿ ಪ್ರೊ. ವಿಜಯಾದೇವಿ ಅವರಿಗೆ ಅಲ್ಲಮ ಪ್ರಭು ಹಾಗೂ ಇತಿಹಾಸಕಾರ ಎಚ್. ಖಂಡೋಬ ರಾವ್ ಅವರಿಗೆ ಗುರುಬಸವ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ವಚನ ಗಾಯನ, ಭಜನಾ ಸ್ಪರ್ಧೆ, ವಿವಿಧ ವಿಷಯಗಳ ಕುರಿತು ಉಪನ್ಯಾಸ ಏರ್ಪಡಿಸಲಾಗಿದೆ ಎಂದರು.
ಇದನ್ನೂ ಓದಿ | Malegaon Blast Case | ಪಾಕ್‌ನಿಂದ ಮಾಲೆಗಾಂವ್ ಸ್ಫೋಟದ ವೆಬ್ ಸಿರೀಸ್: ವಿಚಾರಣೆಯ ಮಾಧ್ಯಮ ನಿರ್ಬಂಧಕ್ಕೆ ಪುರೋಹಿತ್ ಮನವಿ
ಜ.6ರ ಸಂಜೆ 5 ಗಂಟೆಗೆ 519ನೇ ಶಿವಾನುಭವಗೋಷ್ಠಿ, ಶರಣ ಸಾಹಿತ್ಯ ಸಮ್ಮೇಳನ ಹಾಗೂ ಅಲ್ಲಮಪ್ರಭು ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣ ಗೌಡ ಉದ್ಘಾಟಿಸಲಿದ್ದಾರೆ.
ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಸಮ್ಮುಖದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಾಸಕ ಕೆ.ಎಸ್. ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಆಯನೂರು ಮಂಜುನಾಥ್, ಮೇಯರ್ ಎಸ್. ಶಿವಕುಮಾರ್, ಸದಸ್ಯ ಪಿ. ಪ್ರಭಾಕರ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅಲ್ಲಮಪ್ರಭು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಇದನ್ನೂ ಓದಿ | ಹಾಸನ ಮಿಕ್ಸಿ ಸ್ಫೋಟದ ಆರೋಪಿ ಅರೆಸ್ಟ್: ಪ್ರೀತಿ ನಿರಾಕರಣೆ, ಅಪಮಾನಕ್ಕೆ ಪ್ರತೀಕಾರ ಎಂದ ವಿಕೃತ ಪ್ರೇಮಿ ಅನೂಪ್
ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಶ್ರೀಪತಿ ಹಳಗುಂದ ಅವರು ವಚನಗಳು ಮತ್ತು ವರ್ತಮಾನ ಎಂಬ ವಿಷಯದ ಕುರಿತು ಉಪನ್ಯಾಸ ನೀಡುವರು. ಸಮಾಜ ಸೇವಕ ಲೋಕೇಶಪ್ಪ ಯಲವಟ್ಟಿ, ಅಧ್ಯಾತ್ಮ ಚಿಂತಕಿ ದಾಕ್ಷಾಯಣಿ ಜಯದೇವಪ್ಪ ಹಾಗೂ ನಿವೃತ್ತ ನೌಕರ ಕಂದಗಲ್ ಬಸವರಾಜಪ್ಪ, ನಿವೃತ್ತ ಅಧಿಕಾರಿ ಸದಾಶಿವಪ್ಪ, ಶರಣ ಸಾಹಿತ್ಯ ಪರಿಷತ್ ಶಿವಮೊಗ್ಗ ತಾಲೂಕು ಅಧ್ಯಕ್ಷ ಆರ್.ಎಸ್.ಸ್ವಾಮಿ ಅವರನ್ನು ಸನ್ಮಾನಿಸಲಾಗುವುದು ಎಂದು ಶ್ರೀಗಳು ತಿಳಿಸಿದರು.
ಭಾವೈಕ್ಯ ಸಮ್ಮೇಳನ
ಚಿತ್ತರಗಿ ಸಂಸ್ಥಾನ ಮಠದ ಶ್ರೀ ಗುರು ಮಹಾಂತ ಸ್ವಾಮೀಜಿ ಸಾನ್ನಿಧ್ಯದಲ್ಲಿ ಜ.7ರ ಸಂಜೆ 5 ಗಂಟೆಗೆ ಭಾವೈಕ್ಯ ಸಮ್ಮೇಳನ ಹಾಗೂ ಗುರುಬಸವಶ್ರೀ ಪ್ರಶಸ್ತಿ ಪ್ರದಾನ ಜರುಗಲಿದೆ. ಸಚಿವ ಆರಗ ಜ್ಞಾನೇಂದ್ರ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಸಂಗಮೇಶ್ವರ್, ವಿಧಾನ ಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ, ಆಯನೂರು ಮಂಜುನಾಥ ಎಸ್.ಎಲ್.ಬೋಜೇಗೌಡ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್, ಸರ್ಜಿ ಫೌಂಡೇಶನ್‌ನ ಮ್ಯಾನೇಜಿಂಗ್ ಟ್ರಸ್ಟಿ ಡಾ. ಧನಂಜಯ ಸರ್ಜಿ, ಬಸವೇಶ್ವರ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಕಾರ್ಯದರ್ಶಿ ಎಸ್.ಪಿ.ದಿನೇಶ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ | Kannada Sahitya Sammelana : ಕನ್ನಡ ಸಾಹಿತ್ಯ ಸಮ್ಮೇಳನ ಬಹಿಷ್ಕರಿಸಿದ್ದೇನೆ, ಇದು ರಾಜಕೀಯ ಪಕ್ಷದ ಸಮ್ಮೇಳನ: ಎಚ್. ವಿಶ್ವನಾಥ್
ಸಾಹಿತಿ, ಚಿತ್ರದುರ್ಗದ ಡಾ. ಲೋಕೇಶ್ ಅಗಸನಕಟ್ಟೆ ಅವರು ಭಾವೈಕ್ಯತೆ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ನೌಷಾದ್ ಹಾಗೂ ನಿಷಾದ್ ಹರ್ಲಾಪುರ ಸಹೋದರರು ವಚನ ಜುಗಲ್‌ಬಂದಿ ನಡೆಸಿಕೊಡಲಿದ್ದಾರೆ. ಗೌರಮ್ಮ ಆರ್. ವೀರಣ್ಣ, ಹರೂನ್ ರಷೀದ್ ಎಲ್. ಪಿಂಜಾರ್, ಕೃಷ್ಣಪ್ಪ, ಟಿ.ಎಸ್.ಆನಂದ್, ಭಾಸ್ಕರ ಜಿ. ಕಾಮತ್, ಡಾ. ಸೌಮ್ಯ ಕೋರಿ ವೀರಣ್ಣ ಅವರನ್ನು ಸನ್ಮಾನಿಸಲಾಗುತ್ತದೆ. ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಎಲ್ಲ ಕಾರ್ಯಕ್ರಮಗಳ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಶ್ರೀಗಳು ವಿವರಿಸಿದರು.
ವಿವಿಧ ಸ್ಪರ್ಧೆಗಳ ಆಯೋಜನೆ
ಸಮ್ಮೇಳನದ ಅಂಗವಾಗಿ ಜ.6ರ ಬೆಳಗ್ಗೆ 10ಕ್ಕೆ ಪುರುಷರು ಮತ್ತು ಮಹಿಳೆಯರಿಗೆ ಶಿವಭಜನೆ ಹಾಗೂ ಆಟೋಟ ಸ್ಪರ್ಧೆ, ಸಂಜೆ 4ಕ್ಕೆ ಮಹಿಳೆಯರಿಗೆ ವೇಷಭೂಷಣ ಸ್ಪರ್ಧೆ ಏರ್ಪಡಿಸಲಾಗಿದೆ. 111 ಮಹಿಳೆಯರು ಸಾಮೂಹಿಕವಾಗಿ ವಚನ ಗಾಯನ ಪ್ರಸ್ತುತಪಡಿಸಲಿದ್ದಾರೆ ಎಂದು ಶ್ರೀಗಳು ಹೇಳಿದರು.
ಇದನ್ನೂ ಓದಿ | ಇಂಜಿನಿಯರ್ ಪಾಲಿಗೆ ಸಾವಿನ ಕೂಪವಾದ ರಸ್ತೆ ಗುಂಡಿ; ನಿಯಂತ್ರಣ ತಪ್ಪಿ ಬಿದ್ದ ಯುವತಿ ಮೇಲೆ ಟ್ರಕ್ ಹರಿದು ದುರ್ಮರಣ
ಆರೋಗ್ಯ ತಪಾಸಣಾ ಶಿಬಿರ
ಬೆಕ್ಕಿನ ಕಲ್ಮಠದಲ್ಲಿ ಮುರುಘರಾಜೇಂದ್ರ ಮಹಾಸಂಸ್ಥಾನ ಮಠ ಟ್ರಸ್ಟ್, ಸರ್ಜಿ ಫೌಂಡೇಶನ್‌ನಿಂದ ಜ.6ರ ಬೆಳಗ್ಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ವಿವಿಧ ಆರೋಗ್ಯ ಸಮಸ್ಯೆಗಳಿಗೆ ತಜ್ಞ ವೈದ್ಯರು ಸೂಕ್ತ ಸಲಹೆ ಹಾಗೂ ಚಿಕಿತ್ಸೆ ನೀಡಲಿದ್ದಾರೆ. ಕೆಲವು ಔಷಧಗಳನ್ನು ಉಚಿತವಾಗಿ ವಿತರಣೆ ಮಾಡುವ ಉದ್ದೇಶವೂ ಇದೆ ಎಂದು ಶ್ರೀಗಳು ತಿಳಿಸಿದರು.
ಗುರುಬಸವ ಸ್ವಾಮೀಜಿ ಸ್ಮರಣೋತ್ಸವ ಸಮಿತಿಯ ಅಧ್ಯಕ್ಷ ಕೆ.ಎಸ್.ತಾರಾನಾಥ್, ಪ್ರಧಾನ ಕಾರ್ಯದರ್ಶಿ ಎಂ.ಆರ್.ಪ್ರಕಾಶ್, ಕೋಶಾಧ್ಯಕ್ಷ ಎಚ್.ಸಿ.ಯೋಗೇಶ್, ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷೆ ಅನಿತಾ ರವಿಶಂಕರ್, ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್.ಎಸ್.ಜ್ಯೋತಿಬಪ್ರಕಾಶ್ ಉಪಸ್ಥಿತರಿದ್ದರು.
ಇದನ್ನೂ ಓದಿ | Sonam Kapoor | ತಮ್ಮ ಐಷಾರಾಮಿ ಮನೆಯನ್ನು ಭಾರಿ ಬೆಲೆಗೆ ಮಾರಾಟ ಮಾಡಿದ ನಟಿ ಸೋನಂ ಕಪೂರ್