Site icon Vistara News

Shimoga News | ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ

Asha workers protest shimoga

ಶಿವಮೊಗ್ಗ: ಆಶಾ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ (ಡಿ.೨೭) ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಆರ್‌ ಸಿಎಚ್ ಪೋರ್ಟಲ್ ಮೂಲಕ ಪ್ರೋತ್ಸಾಹಧನ ನೀಡುವುದನ್ನು ರದ್ದುಪಡಿಸಿ ನಿಗದಿತ ಚಟುವಟಿಕೆಗಳಿಗೆ ಕೇಂದ್ರ ಸರ್ಕಾರ ನೀಡುತ್ತಿರುವ ಹಣವನ್ನು ಒಟ್ಟುಗೂಡಿಸಿ ಮಾಸಿಕ ಗೌರವಧನ ನಿಗದಿಪಡಿಸಬೇಕು ಎಂದು ಪ್ರತಿಭಟನಾಕಾರರು ತಿಳಿಸಿದರು.

ರಾಜ್ಯ ಸರ್ಕಾರದ ನಿಶ್ಚಿತ ಗೌರವಧನ 5000 ರೂಪಾಯಿ, ದೈನಂದಿನ ಚಟುವಟಿಕೆಗೆ 2000 ರೂ. ಹೀಗೆ ಎಲ್ಲವನ್ನೂ ಒಟ್ಟುಗೂಡಿಸಿ ಮಾಸಿಕ 12 ಸಾವಿರ ರೂ. ಗೌರವ ಧನವನ್ನು ಪ್ರತಿ ತಿಂಗಳು ಪಾವತಿಸಬೇಕು. ಬಾಕಿ ಹಣವನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಲಾಗಿದೆ.

ಆರ್‌ಸಿಎಚ್ ಪೋರ್ಟಲ್‍ನ ವಿವಿಧ ಸಮಸ್ಯೆಯಿಂದ ಆಗಿರುವ ನಷ್ಟವನ್ನು ಹಿಂಬಾಕಿ ರೂಪದಲ್ಲಿ ನೀಡಬೇಕು ಗೌರವಧನ ಹೆಚ್ಚಿಸಬೇಕು. ನಿವೃತ್ತಿ ಹೊಂದುವವರಿಗೆ 20 ಸಾವಿರ ರೂ. ಇಡುಗಂಟನ್ನು ನೀಡಬೇಕು. ಪಶ್ಚಿಮ ಬಂಗಾಳದಲ್ಲಿರುವಂತೆ ಇದನ್ನು 3 ಲಕ್ಷಕ್ಕೆ ಹೆಚ್ಚಿಸಬೇಕು. ಪ್ರಯಾಣ ಭತ್ಯೆ ನೀಡಬೇಕು. ಮರಣ ಹೊಂದಿದ ಕಾರ್ಯಕರ್ತೆಯರ ಕುಟುಂಬಕ್ಕೆ ಕೆಲಸ ನೀಡಬೇಕು. ಆಶಾ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಿ ಆರೋಗ್ಯ ವಿಮೆ ಮತ್ತು ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಜಿಲ್ಲಾಧ್ಯಕ್ಷೆ ರಾಜೇಶ್ವರಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿವಿಧ ತಾಲೂಕುಗಳಿಂದ ಆಗಮಿಸಿದ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಇದನ್ನೂ ಓದಿ |Anil kapoor | ‌66ರಲ್ಲೂ ಚಿರಯುವಕ! ಅನಿಲ್‌ ಕಪೂರ್‌ ಫಿಟ್‌ನೆಸ್‌ ಗುಟ್ಟಿದು!

Exit mobile version