Site icon Vistara News

Shimoga News : ಪರಿಶಿಷ್ಟರ ಕಲ್ಯಾಣ ಯೋಜನೆಗಳಲ್ಲಿ ಅವ್ಯವಹಾರ, ಜ. 8ರಂದು ಚಿತ್ರದುರ್ಗದಲ್ಲಿ ಸಮಾವೇಶ: ಡಾ. ಜಿ. ಪರಮೇಶ್ವರ್

Dr. G. Parameshwara

ಶಿವಮೊಗ್ಗ: ಪರಿಶಿಷ್ಟರ ಕಲ್ಯಾಣ ಯೋಜನೆಗಳಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಬುಧವಾರ (ಜ.೪) ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಪರಿಶಿಷ್ಟರಿಗೆ ಯಾವ ನ್ಯಾಯವೂ ಸಿಕ್ಕಿಲ್ಲ. ಚಿತ್ರದುರ್ಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬೃಹತ್ ಸಮಾವೇಶವನ್ನು ಜ. 8ರಂದು ಆಯೋಜಿಸಲಾಗಿದೆ. 5 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಪರಿಶಿಷ್ಟರಿಗಾದ ಅನ್ಯಾಯವನ್ನು ಈ ಸಮಾವೇಶದ ಮೂಲಕ ಜನರಿಗೆ ತಿಳಿಸಲಾಗುವುದು ಎಂದು ಹೇಳಿದರು.

ಸಮಾವೇಶಕ್ಕೆ ನಾಯಕರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಎಲ್ಲ ಮುಖಂಡರು ಆಗಮಿಸಲಿದ್ದಾರೆ. ಹಾಗೆಯೇ ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಕರೆತರುವ ಪ್ರಯತ್ನ ಕೂಡ ನಡೆದಿದೆ ಎಂದರು.

ಇದನ್ನೂ ಓದಿ | Aadhaar Address Change | ಆನ್‌ಲೈನ್‌ನಲ್ಲಿ ಸುಲಭವಾಗಿ ಆಧಾರ್‌ ಅಡ್ರೆಸ್‌ ಚೇಂಜ್‌ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ಬಿಜೆಪಿ ಸರ್ಕಾರದಲ್ಲಿ ಪರಿಶಿಷ್ಟರ ಮೇಲೆ ದೌರ್ಜನ್ಯ ಹೆಚ್ಚಾಗಿದೆ. ಹಾಗೆಯೇ, ಸರ್ಕಾರದ ಯೋಜನೆಗಳು ವಿಫಲವಾಗಿದ್ದಲ್ಲದೆ, ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಗಂಗಾ ಕಲ್ಯಾಣ ಯೋಜನೆಯಡಿ 430 ಕೋಟಿ ರೂ. ಅವ್ಯವಹಾರ ನಡೆದಿದ್ದು, ಭೋವಿ ನಿಗಮದಲ್ಲಿ 130 ಕೋಟಿ ರೂ. ಅವ್ಯವಹಾರ ನಡೆದಿದೆ. ಹಾಗೆಯೇ ಬಂಜಾರ ನಿಗಮದಲ್ಲಿ ಮೀಸಲಿಟ್ಟಿದ್ದ 126 ಕೋಟಿ ರೂ. ಬಳಕೆಯೇ ಆಗಿಲ್ಲ ಎಂದರು.

ಬಜೆಟ್‌ನಲ್ಲಿ ಪರಿಶಿಷ್ಟರಿಗೆ ಶೇ. 24.1ರಷ್ಟು ಅನುದಾನ ಮೀಸಲಾಗಿಡಬೇಕಿತ್ತು. ಅದರ ಪ್ರಕಾರ 42 ಸಾವಿರ ಕೋಟಿ ರೂಪಾಯಿ ಆಗುತ್ತದೆ. ಆದರೆ, ಬಿಜೆಪಿ ಸರ್ಕಾರದಲ್ಲಿ ಇಟ್ಟಿರುವುದು ಕೇವಲ 28 ಕೋಟಿ ರೂಪಾಯಿಯಾಗಿದೆ. ಆ ಹಣದಲ್ಲೂ 8 ಕೋಟಿ ರೂಪಾಯಿಯನ್ನು ಇತರ ಕೆಲಸಗಳಿಗೆ ಉಪಯೋಗಿಸಿದ್ದಾರೆ ಎಂದು ದೂರಿದರು.

ಇದನ್ನೂ ಓದಿ | Sonia Gandhi | ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಅನಾರೋಗ್ಯ; ದೆಹಲಿ ಆಸ್ಪತ್ರೆಗೆ ದಾಖಲು

Exit mobile version