ಶಿವಮೊಗ್ಗ: ನಿವೃತ್ತ ವಿಶೇಷ ಜಿಲ್ಲಾಧಿಕಾರಿ ದಿ. ಎಂ.ಟಿ. ಮಾತನವರ್ ಅವರ ಪತ್ನಿ ಸುಶೀಲಾ ಮಾತನವರ್ (75) ಶನಿವಾರ (ಡಿ.೨೪) ಬೆಳಗ್ಗೆ ನಿಧನ ಹೊಂದಿದರು.
ಮೃತರಿಗೆ ಪುತ್ರ ಚೇಂಬರ್ ಆಫ್ ಕಾಮರ್ಸ್ ನಿರ್ದೇಶಕ ಜಗದೀಶ್ ಮಾತನವರ್ ಹಾಗೂ ಒಬ್ಬ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗ ಇದ್ದಾರೆ. ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ.ಶ್ರೀಕಾಂತ್, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಸೇರಿದಂತೆ ಹಲವರು ಮೃತರ ಅಂತಿಮ ದರ್ಶನ ಪಡೆದರು. ಇವರ ಅಂತ್ಯಕ್ರಿಯೆ ರೋಟರಿ ಚಿತಾಗಾರದಲ್ಲಿ ಸಂಜೆ ನಡೆಯಿತು.