ಶಿರಾ: ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದರೂ ತಾಲೂಕಿನ ಕೆಲವು ಗ್ರಾಮೀಣ
ಭಾಗಗಳಲ್ಲಿ ಸರ್ಕಾರದ ಯೋಜನೆಗಳ ಪ್ರಚಾರದ ಫ್ಲೆಕ್ಸ್‌ಗಳು (campaign flex) ರಾರಾಜಿಸುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಜಿಲ್ಲಾ ಮಟ್ಟದಲ್ಲಿ ತಂಡ ರಚನೆ ಮಾಡಲಾಗಿದೆ. ತಾಲೂಕಿನ ಸಾರ್ವಜನಿಕ ಸ್ಥಳಗಳು, ಆಸ್ತಿಗಳಿಗೆ ಯಾವುದೇ ರೀತಿಯ ಹಾನಿಯಾದರೆ ಹಾಗೂ ನಾಶಪಡಿಸಿದಲ್ಲಿ ಚುನಾವಣಾ ಕಾಯ್ದೆ ಹಾಗೂ ಸಿಆರ್‌ಪಿಸಿ ಕಾಯ್ದೆಯನ್ವಯ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಇದನ್ನೂ ಓದಿ: IPL 2023: ಗುಜರಾತ್ vs ಚೆನ್ನೈ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ
ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರಾಜಕೀಯ ಪಕ್ಷಗಳ ಬ್ಯಾನರ್, ಬಂಟಿಂಗ್ಸ್, ಚುನಾವಣಾ ಪ್ರಚಾರ ಸಾಮಾಗ್ರಿಗಳು ಇದ್ದಲ್ಲಿ ಅವುಗಳನ್ನು ಕೂಡಲೇ ತೆರವುಗೊಳಿಸಲು ಚುನಾವಣಾ ಆಯೋಗ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಆದರೆ, ಶಿರಾ ಅಮರಪುರ ರಸ್ತೆಯ ರಂಗಪುರ ಗೋಲರಹಟ್ಟಿಯಲ್ಲಿ ಶಾಸಕರ ಪ್ರಚಾರ ಬ್ಯಾನರ್‌ಗಳನ್ನು ತೆರವು ಮಾಡಿಲ್ಲ.
ಇದನ್ನೂ ಓದಿ: Hindi Imposition: ಮೊಸರು ಪ್ಯಾಕೆಟ್ ಮೇಲೆ ದಹಿ ಎಂದು ಮುದ್ರಿಸಿ! ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ಕರ್ನಾಟಕ, ತಮಿಳುನಾಡು!