ಗದಗ: ಗದಗ ಜಿಲ್ಲೆಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಚಂದ್ರು ಲಮಾಣಿ ಅವರು ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಚಂದ್ರು ಲಮಾಣಿ 73,600 ಮತ ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿ 45,637 ಮತ ಪಡೆದು ಎರಡನೇ ಸ್ಥಾನ, ಕಾಂಗ್ರೆಸ್ ಅಭ್ಯರ್ಥಿ ಸುಜಾತಾ ದೊಡ್ಡಮನಿ 34,550 ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. 27,963 ಮತಗಳ ಅಂತರದಲ್ಲಿ ಚಂದ್ರು ಲಮಾಣಿ ಗೆದ್ದಿದ್ದಾರೆ.
ಈ ಬಾರಿ ಇಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಹನುಮಂತಪ್ಪ ನಾಯಕ್, ಬಿಜೆಪಿ ಅಭ್ಯರ್ಥಿಯಾಗಿ ಡಾ.ಚಂದ್ರು ಲಮಾಣಿ, ಆಪ್ನಿಂದ ಮಲ್ಲಿಕಾರ್ಜುನ್ ದೊಡ್ಡಮನಿ, ಕಾಂಗ್ರೆಸ್ನಿಂದ ಸುಜಾತ್ ಎನ್. ದೊಡ್ಡಮನಿ ಕಣದಲ್ಲಿದ್ದರು.
2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ರಾಮಣ್ಣ ಲಮಾಣಿ 91,967 ಮತ ಪಡೆದು ಗೆಲುವು ಸಾಧಿಸಿದ್ದರು. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ನ ದೊಡ್ಡಮನಿ ರಾಮಕೃಷ್ಣ ಸಿದ್ದಲಿಂಗಪ್ಪ 29993 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು.
ಇಲ್ಲಿ ಇರುವ ಒಟ್ಟು ಮತಗಳು 208,796. ಪುರುಷರು 105,912 ಹಾಗೂ ಸ್ತ್ರೀಯರು 102,876.