Site icon Vistara News

Shiva Rajkumar: ನಟ ಶಿವರಾಜ್‌ ಕುಮಾರ್‌ ಆಸ್ಪತ್ರೆಗೆ ದಾಖಲು, ಯಾವಾಗ ಡಿಸ್ಚಾರ್ಜ್‌?

Shiva Rajkumar

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ನಟ ಶಿವರಾಜ್‌ ಕುಮಾರ್‌ (Shiva Rajkumar) ಅವರು ನಗರದ ವೈದೇಹಿ ಆಸ್ಪತ್ರೆಗೆ ಸೋಮವಾರ ದಾಖಲಾಗಿದ್ದಾರೆ. ನಟನಿಗೆ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಇಲ್ಲ, ಜನರಲ್‌ ಚೆಕಪ್‌ಗಾಗಿ ಆಗಮಿಸಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಕಳೆದ ಕೆಲ ದಿನಗಳಿಂದ ಶಿವಮೊಗ್ಗದಲ್ಲಿ ಪತ್ನಿ ಗೀತಾ ಶಿವರಾಜ್‌ಕುಮಾರ್ ಪರವಾಗಿ ಚುನಾವಣಾ ಪ್ರಚಾರದಲ್ಲಿ ಶಿವಣ್ಣ ಅವರು ಓಡಾಡಿದ್ದರು. ಶಿವಮೊಗ್ಗ ಸುತ್ತಮುತ್ತ ಪ್ರಚಾರದ ಮೊದಲ ಹಂತ ಮುಗಿಸಿ ಬೆಂಗಳೂರಿಗೆ ಹಿಂದಿರುಗುತ್ತಿದ್ದಂತೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

ಆಸ್ಪತ್ರೆಗೆ ಆಪ್ತರು, ಚಿತ್ರರಂಗದ ಗಣ್ಯರು ಭೇಟಿ ಶಿವಣ್ಣ ಅವರ ಆರೋಗ್ಯ ವಿಚಾರಿಸುತ್ತಿದ್ದಾರೆ. ನಟ ಗುರುದತ್ ಸೇರಿ ಹಲವರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಅದೇ ರೀತಿ ಪುತ್ರಿ ನಿರುಪಮಾ ಅವರು ಶಿವರಾಜ್‌ ಕುಮಾರ್‌ ಅವರ ಆರೋಗ್ಯ ವಿಚಾರಿಸಿ ತೆರಳಿದ್ದು, ಶಿವಣ್ಣ ಅವರು ಬಹುತೇಕ ನಾಳೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ನಾಳೆ ಬೆಳಗ್ಗೆ ಆರೋಗ್ಯ ತಪಾಸಣೆ ಮುಗಿದ ಬಳಿದ ಶಿವರಾಜ್ ಕುಮಾರ್ ಅವರು ಮನೆಗೆ ಹೋಗಲಿದ್ದಾರೆ.

ಶಿವಣ್ಣ ಜತೆ ಆರ್ ಚಂದ್ರು ಹೊಸ ಸಿನಿಮಾ ಘೋಷಣೆ!

ಬೆಂಗಳೂರು: ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್‌ ಹೀರೊ ಶಿವರಾಜ್‌ಕುಮಾರ್‌ (Shiva Rajkumar) ಹಾಗೂ ಆರ್ ಚಂದ್ರು ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ ಘೋಷಣೆ ಆಗಿದೆ. ಆರ್​ ಚಂದ್ರು (R Chandru) ಅವರು ಇತ್ತೀಚೆಗೆ ‘ಆರ್​ಸಿ ಸ್ಟುಡಿಯೊ’ ಆರಂಭಿಸಿ ಐದು ಸಿನಿಮಾಗಳನ್ನು ಘೋಷಣೆ ಮಾಡಿದ್ದರು. ಇದೀಗ ಆರನೇ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ಈ ಮುಂಚೆ ಈ ಜೋಡಿಯ ʻಮೈಲಾರಿʼ ಸಿನಿಮಾ ದೊಡ್ಡ ಯಶಸ್ಸು ಕಂಡಿತ್ತು. ಇದಾದ ಬಳಿಕ ಆರ್​ ಚಂದ್ರು ಅವರ ʻಕಬ್ಜʼ ಚಿತ್ರದಲ್ಲಿ ಚಿಕ್ಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು ಶಿವಣ್ಣ.

2010ರಲ್ಲಿ ಶಿವರಾಜ್‌ಕುಮಾರ್‌ ಅವರ ʻಮೈಲಾರಿʼ ಸಿನಿಮಾ ಮುಹೂರ್ತ ನಡೆದು ಇಂದಿಗೆ (ಏಪ್ರಿಲ್ 1) 14 ವರ್ಷಗಳು ಕಳೆದಿವೆ. ಈ ಬಗ್ಗೆ ಆರ್ ಚಂದ್ರು ಅವರು ಸೋಷಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ. ಕನ್ನಡದ ಸೂಪರ್ ಹಿಟ್ ಚಿತ್ರ `ಮೈಲಾರಿ’ ಮುಹೂರ್ತಕ್ಕೆ 14 ವರ್ಷಗಳು ತುಂಬಿದ ಈ ಶುಭ ಸಂದರ್ಭದಲ್ಲಿ, ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್‌ ಅವರಿಗೆ ಹೊಸ ಚಿತ್ರ ಆರಂಭಿಸುತ್ತಿರುವುದು ಮತ್ತಷ್ಟು ಖುಷಿ ತಂದಿದೆ. ತಮ್ಮೆಲ್ಲರ ಆಶೀರ್ವಾದ ಇರಲಿ. ಧನ್ಯವಾದಗಳು. ಆರ್ ಸಿ ಸ್ಟುಡಿಯೋಸ್ʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Shiva Rajkumar: ನಟ ಶಿವ ರಾಜ್‌ಕುಮಾರ್‌ ಸಿನಿಮಾ, ಜಾಹೀರಾತು ನಿಷೇಧಿಸಿ; ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಐದು ಸಿನಿಮಾ ಘೋಷಣೆ

ಆರ್​. ಚಂದ್ರು ನಿರ್ದೇಶನದ, ಉಪೇಂದ್ರ ನಟನೆಯ ‘ಕಬ್ಜ’ ಸಿನಿಮಾ (Kabzaa Movie) ಎರಡು ದಿನಗಳಲ್ಲೇ ನೂರು ಕೋಟಿ ರೂ. ಕ್ಲಬ್‌ ಸೇರಿತ್ತು. ಆದರೆ ಭಾರಿ ಕಲೆಕ್ಷನ್‌ ಮಾಡಿರುವ ಈ ಸಿನಿಮಾವನ್ನು ಸಾಕಷ್ಟು ಜನ ಇಷ್ಟ ಪಟ್ಟಿರಲಿಲ್ಲ. ಹೀಗಾಗಿ ʻಕಬ್ಜʼ ಸೀಕ್ವೆಲ್ ಯಾವುದೇ ಕಾರಣಕ್ಕೂ ಸಿದ್ಧವಾಗುವುದಿಲ್ಲ ಎಂದು ಹಲವರು ಅಂದುಕೊಂಡಿದ್ದರು. ಇದಾದ ಬಳಿಕ ಜನವರಿ 23ರಂದು ಚಂದ್ರು ಅವರು ಐದು ಸಿನಿಮಾ ಘೋಷಣೆ ಮಾಡಿದರು.

ಭಾರತೀಯ ಚಿತ್ರರಂಗದಲ್ಲೇ ಹೊಸ ಮೈಲುಗಲ್ಲು ಸೃಷ್ಟಿಸಿದ ನಿರ್ದೇಶಕ ಆರ್ ಚಂದ್ರು ಅವರು ಆರ್ ಸಿ ಪ್ರೊಡಕ್ಷನ್ ನಡಿ ಐದು ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಘೋಷಣೆ ಮಾಡಿದ್ದರು. ʻಶ್ರೀರಾಮಬಾಣʼ, ʻಫಾದರ್ʼ, ʻPOKʼ, ʻಡಾಗ್ʼ ಹಾಗೂ ಕಬ್ಜ-2 ಟೈಟಲ್ ಘೋಷಣೆಯಾಗಿತ್ತು.

ಇದನ್ನೂ ಓದಿ | New Film Release: ಸಿನಿ ಪ್ರಿಯರೇ, ಏಪ್ರಿಲ್‌ನಲ್ಲಿ ನಿಮಗಾಗಿ ಕಾದಿವೆ ಈ 4 ಚಿತ್ರಗಳು

ಈ ಬಗ್ಗೆ ಆರ್‌ ಚಂದ್ರು ಮಾತನಾಡಿ ʻʻಯಾವುದೇ ಕೆಲಸ ಮಾಡಬೇಕು ಅಂದರೆ ಯೋಗಬೇಕು. ಯೋಗ್ಯತೆ ಬೇಕು. 10 ತಿಂಗಳು ನಾನು ಸುಮ್ನೆ ಕೂತಿರಲಿಲ್ಲ. ಕೈ ಹಾಕಿದರೆ ಕರಂಟ್ ಕಂಬಕ್ಕೆ ಕೈ ಹಾಕಬಾರದು. ಚಂದ್ರಲೋಕಕ್ಕೆ ಕೈ ಹಾಕಬೇಕು. ಕಬ್ಜ’ ಸಿನಿಮಾದ ಕಲೆಕ್ಷನ್ ಫೇಕ್ ಎಂದು ಅನೇಕರು ಹೇಳಿದ್ದರು.‘ಕಬ್ಜ ಸಿನಿಮಾದಿಂದ ನಾನು ಸರ್ಕಾರಕ್ಕೆ 20 ಕೋಟಿ ರೂಪಾಯಿ ಟ್ಯಾಕ್ಸ್ ಕಟ್ಟಿದ್ದೀನಿ. ಇದನ್ನು ಓಪನ್ ಆಗಿ ಹೇಳಿಕೊಳ್ಳುತ್ತಿದ್ದೇನೆ. ಕನ್ನಡ ಸಿನಿಮಾಗಳನ್ನು ನೋಡ್ಬೇಕು ಅಂದ್ರೆ ಒಳ್ಳೊಳ್ಳೆ ಸಿನಿಮಾಗಳನ್ನ ಮಾಡ್ಬೇಕು. ಬಾಯಿ ಇದೆ ಎಂದು ಮಾತನಾಡಿದರೆ ಐದು ಸಿನಿಮಾ, ಹತ್ತು ಸಿನಿಮಾ ಆಗಲ್ಲ’ ಎಂದು ಅವರು ನೇರವಾಗಿ ಹೇಳಿದ್ದರು.

Exit mobile version