Site icon Vistara News

Shivaji statue: ಈಗ ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ಪಾಲಿಟಿಕ್ಸ್: ಲಕ್ಷ್ಮೀ ಹೆಬ್ಬಾಳ್ಕರ್ v/s ರಮೇಶ್ ಜಾರಕಿಹೊಳಿ ದಂಗಲ್

Karnataka Election

ಬೆಳಗಾವಿ: ʻಶಿವಾಜಿ ಪ್ರತಿಮೆ’ (shivaji statue) ಅನಾವರಣಕ್ಕೆ ಸಂಬಂಧಿಸಿ ಲಕ್ಷ್ಮೀ ಹೆಬ್ಬಾಳ್ಕರ್ (Laxmi hebbalkar) ಹಾಗೂ ರಮೇಶ್ ಜಾರಕಿಹೊಳಿ (ramesh jarkiholi) ಮಧ್ಯೆ ರಾಜಕೀಯ ಪ್ರತಿಷ್ಠೆಯ ಸಮರ ಆರಂಭವಾಗಿದೆ.

ಐತಿಹಾಸಿಕ ರಾಜಹಂಸಗಡ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಲೋಕಾರ್ಪಣೆಗೆ ಸಿದ್ಧಗೊಂಡಿದೆ. ಸರ್ಕಾರಿ ಕಾರ್ಯಕ್ರಮವನ್ನು ಖಾಸಗಿ ಕಾರ್ಯಕ್ರಮ ಮಾಡಲು ಹೆಬ್ಬಾಳ್ಕರ್‌ ಯತ್ನಿಸಿದ್ದಾರೆ. ಚುನಾವಣೆ ಹೊತ್ತಲ್ಲಿ ಸರ್ಕಾರಿ ಯೋಜನೆಯನ್ನು ತನ್ನದೆಂದು ಬಿಂಬಿಸಿಕೊಳ್ಳಲು ಯತ್ನಿಸಿದ್ದಾರೆ. ಶಿಷ್ಟಾಚಾರ ಉಲ್ಲಂಘಿಸಿ ಕಾರ್ಯಕ್ರಮ ಮಾಡಲು ಯತ್ನಿಸಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ರಮೇಶ್ ಜಾರಕಿಹೊಳಿ ಸೇರಿ ಇತರ ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಐತಿಹಾಸಿಕ ರಾಜಹಂಸಗಡ ಕೋಟೆಯಲ್ಲಿ ಸ್ಥಾಪಿಸಲಾಗಿರುವ 50 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಮಾರ್ಚ್ 5ರಂದು ಅನಾವರಣಕ್ಕೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಿದ್ಧತೆ ನಡೆಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ 50 ಲಕ್ಷ ರೂ. ಅನುದಾನದಲ್ಲಿ ಶಿವಾಜಿ ಪ್ರತಿಮೆ ನಿರ್ಮಾಣವಾಗಿದೆ.

ಪ್ರತಿಮೆ ಪ್ರತಿಷ್ಠಾಪನೆಗೆ ಕರ್ನಾಟಕ ಹಾಗೂ ಮಹಾರಾಷ್ಟ್ರದ ಕಾಂಗ್ರೆಸ್ ಘಟಾನುಘಟಿ ನಾಯಕರು ಬರುವುದಾಗಿ ಪ್ರಕಟಿಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಹಲವರು ಆಗಮಿಸುವ ಬಗ್ಗೆ ಮಾಧ್ಯಮ ಪ್ರಕಟಣೆಯನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ್ದಾರೆ.

ಕಾಂಗ್ರೆಸ್ ನಾಯಕರನ್ನು ಆಹ್ವಾನಿಸಿದ್ದಕ್ಕೆ ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರೋಧ ವ್ಯಕ್ತಪಡಿಸಿದ್ದು, ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಗೋವಿಂದ ಕಾರಜೋಳರನ್ನು ಕರೆಸಿ ಪ್ರತಿಮೆ ಲೋಕಾರ್ಪಣೆ ಮಾಡಿಸಲು ಪ್ಲಾನ್‌ ಮಾಡಿದ್ದಾರೆ. ಈ ಬಗ್ಗೆ ಹಿರೇಬಾಗೇವಾಡಿ ಅಭಿಮಾನಿಗಳ ಸಮಾವೇಶದಲ್ಲಿ ತಿಳಿಸಿದ್ದಾರೆ. ಸರ್ಕಾರಿ ಕಾರ್ಯಕ್ರಮವನ್ನು ಕಾಂಗ್ರೆಸ್ ಕಾರ್ಯಕ್ರಮ ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆಗೆ ರಾಜಹಂಸಗಡ ಕೋಟೆಗೆ ಭೇಟಿ‌ ನೀಡಲು ರಮೇಶ್ ಜಾರಕಿಹೊಳಿ, ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: Adiyodi Statue : ಆದಿಯೋಗಿ ಪ್ರತಿಮೆ ನಿರ್ಮಾಣ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್‌ ವಜಾ; ಕೋರ್ಟ್‌ ಗರಂ ಆಗಿದ್ದು ಯಾಕೆ?

Exit mobile version