ಬೆಂಗಳೂರು: ಕಾಂಗ್ರೆಸ್ ಪಕ್ಷದ ಭದ್ರ ಕೋಟೆಯಾಗಿರುವ ಶಿವಾಜಿನಗರದಲ್ಲಿ ಕಾಂಗ್ರೆಸ್ ಪಕ್ಷದ ರಿಜ್ವಾನ್ ಅರ್ಷದ್ (64913) ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಚಂದ್ರ ಎನ್ (41719) ಅವರ ವಿರುದ್ದ ಗೆಲುವು ಸಾಧಿಸಿದ್ದಾರೆ. 2019ರಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ರಿಜ್ವಾನ್ ಅರ್ಷದ್ ಬಿಜೆಪಿಯ ಎಂ ಸರವಣ ವಿರುದ್ಧ ವಿರುದ್ಧ ಗೆಲುವು ಸಾಧಿಸಿದ್ದರು.
1967ರಲ್ಲಿ ವಿಧಾನಸಭಾ ಕ್ಷೇತ್ರವಾಗಿ ರಚನೆಯಾದ ಶಿವಾಜಿನಗರವು ಈವರೆಗೂ 12 ಸಾರ್ವತ್ರಿಕ ಚುನಾವಣೆ ಮತ್ತು ಒಂದು ಉಪಚುನಾವಣೆ ಕಂಡಿದೆ. ಇಲ್ಲಿ ಕಾಂಗ್ರೆಸ್ ಏಳು ಬಾರಿ, ಜನತಾ ಪಕ್ಷ ಮೂರು ಬಾರಿ, ಬಿಜೆಪಿ ಎರಡು ಬಾರಿ ಹಾಗೂ ಜನತಾ ದಳ ಒಂದು ಬಾರಿ ಜಯ ಸಾಧಿಸಿವೆ. ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಸತತ 15 ವರ್ಷಗಳಿಂದ ಕಾಂಗ್ರೆಸ್ ಅಧಿಪತ್ಯ ಸ್ಥಾಪಿಸಿದೆ.
ಶಿವಾಜಿನಗರದಲ್ಲಿ ಎಲ್ಲ ಧರ್ಮ, ಎಲ್ಲ ಭಾಷೆಯ ಜನರು ವಾಸಿಸುತ್ತಿದ್ದು, ಅತಿ ಹೆಚ್ಚು ಮುಸ್ಲಿಂ ಸಮುದಾಯದ ಜನರಿದ್ದಾರೆ. ಶಿವಾಜಿನಗರವು ಸ್ವತಂತ್ರ ವಿಧಾನಸಭಾ ಕ್ಷೇತ್ರವಾಗುವ ಮೊದಲು ಜಯಮಹಲ್ ವಿಧಾನಸಭಾ ಕ್ಷೇತ್ರದ ಮತದಾರರಾಗಿದ್ದರು. ಕ್ಷೇತ್ರ ಮರು ವಿಂಗಡಣೆಯಲ್ಲಿ ಹೆಬ್ಬಾಳ ವಿಧಾನಸಭಾ ಕ್ಷೇತ್ರದಿಂದ ಕೆಲವು ವಾರ್ಡ್ಗಳನ್ನು ಸೇರಿಸಿ, ಜಯಮಹಲ್ ವಿಧಾನಸಭಾ ಕ್ಷೇತ್ರವನ್ನು ಶಿವಾಜಿನಗರ ವಿಧಾನಸಭಾ ಕ್ಷೇತ್ರ ಎಂದು ಮರು ನಾಮಕರಣ ಮಾಡಲಾಯಿತು.