ಶಿವಮೊಗ್ಗ: ತಾಲೂಕಿನ ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು (Shivamogga Airport) ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ (ಫೆ.27) ರಂದು ಲೋಕಾರ್ಪಣೆಗೊಳಿಸಲಿರುವ ಹಿನ್ನೆಲೆಯಲ್ಲಿ ವೇದಿಕೆಯತ್ತ ಲಕ್ಷಾಂತರ ಜನರು ಪಾರ್ಕಿಂಗ್ ಸ್ಥಳದಿಂದ ವೇದಿಕೆಯತ್ತ ಸುಮಾರು ಐದಾರು ಕಿ.ಮೀ. ನಡೆದುಕೊಂಡೇ ಸಾಗಿಬಂದರು.
ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಅಲ್ಲದೆ, ವಿವಿಧ ತಾಲೂಕು ಹಾಗೂ ಸ್ಥಳಗಳಿಂದ ಬರುವವರಿಗೆ ವೇದಿಕೆಯಿಂದ ೪ ಕಿ.ಮೀ. ದೂರದಲ್ಲಿಯೇ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರತಿ ಗ್ರಾಮ ಪಂಚಾಯಿತಿಯಿಂದಲೂ ಬಸ್ ವ್ಯವಸ್ಥೆಯನ್ನು ಮಾಡಲಾಗಿದ್ದು, ಲಕ್ಷಾಂತರ ಮಂದಿ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದರು.
ನಿಗದಿತ ಸ್ಥಳದಲ್ಲಿ ಬಸ್‌ಗಳಲ್ಲಿ ಬಂದಿಳಿದ ಜನರು ವೇದಿಕೆಯತ್ತ ನಡೆದುಕೊಂಡೇ ಸಾಗಿ ಬಂದು ವೇದಿಕೆಯಲ್ಲಿ ಆಸೀನರಾಗಿದ್ದರು. ೧ ಲಕ್ಷ ಜನರಿಗೆ ಆಸನ ವ್ಯವಸ್ಥೆಯನ್ನು ಮಾಡಲಾಗಿದ್ದು, ಆಸನಗಳೆಲ್ಲವೂ ಭರ್ತಿಯಾಗಿದ್ದವು.
ಇದನ್ನೂ ಓದಿ: Shivamogga Airport: ಮಲೆನಾಡಿಗೆ ಪ್ರದೇಶಕ್ಕೆ ಯಡಿಯೂರಪ್ಪ ಒಂದು ಕಾಣಿಕೆ: ಸಿಎಂ ಬಸವರಾಜ ಬೊಮ್ಮಾಯಿ
ಬಿಗಿ ಬಂದೋಬಸ್ತ್
ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಎಲ್ಲ ಕಡೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ವಾಹನಗಳ ನಿಲುಗಡೆಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ನಿಗದಿಪಡಿಸಿದ ಸ್ಥಳದಲ್ಲಿಯೇ ವಾಹನಗಳನ್ನು ನಿಲ್ಲಿಸುವ ಕ್ರಮವನ್ನು ಕೈಗೊಳ್ಳಲಾಗಿತ್ತು.