ಶಿವಮೊಗ್ಗ: ಇಲ್ಲಿನ ಕಾರಾಗೃಹದಲ್ಲಿ (Shivamoga Jail) ವಿಚಾರಣಾಧೀನ ಕೈದಿ ಮೃತಪಟ್ಟಿರುವ ಘಟನೆ ನಡೆದಿದೆ. ಕಲೀಂ (37) ಮೃತಪಟ್ಟವನು. ಕಳೆದೊಂದು ತಿಂಗಳ ಹಿಂದೆ ಪೋಕ್ಸೋ ಕಾಯ್ದೆಯಡಿ ಬಂಧಿತ ಆರೋಪಿಯಾಗಿದ್ದ.
ಕಿಡ್ನಿ ಸಮಸ್ಯೆ, ಲೋ ಬಿಪಿಯಿಂದ ಬಳಲುತ್ತಿದ್ದ ಆರೋಪಿಗೆ ಇತ್ತೀಚೆಗೆ ವಾಂತಿ, ಭೇದಿ, ಲೋ ಬಿಪಿ ಆಗಿತ್ತು. ಮಾತ್ರವಲ್ಲದೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎಂದು ತಿಳಿದು ಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ, ಕಲೀಂನನ್ನು ನಗರದ ಮೆಗ್ಗಾನ್ ಆಸ್ಪತ್ರೆಗೆ ಶನಿವಾರ ರಾತ್ರಿ ದಾಖಲಿಸಲಾಗಿತ್ತು.
ಇದನ್ನೂ ಓದಿ: Fire Accident: ವಿಶ್ವವಿಖ್ಯಾತ ಹಂಪಿಯ ವಿಜಯ ವಿಠ್ಠಲ ದೇಗುಲದ ಸಮೀಪ ಅಗ್ನಿ ಅವಘಡ
ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕಲೀಂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಇತ್ತ ಕಲೀಂ ಕುಟುಂಬಸ್ಥರು, ಜೈಲಿನಲ್ಲಿ ಹಲ್ಲೆ ಮಾಡಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಕಲೀಂ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.