ಸೊರಬ: ಪಟ್ಟಣದ ಡಾ. ರಾಜ್ ಕಲಾಕ್ಷೇತ್ರದ ಆವರಣದಲ್ಲಿ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಪಂ, ಪುರಸಭೆ ಸಹಯೋಗದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು (77th Independence Day) ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ತಹಸೀಲ್ದಾರ್ ಹುಸೇನ್ ಸರಕಾವಸ್, ಭಾರತ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು, ಬಳಿಕ ಮಾತನಾಡಿದ ಅವರು, ದೇಶದ ಏಕತೆ ಕಾಪಾಡುವುದು, ರಾಷ್ಟ್ರೀಯ ಭಾವೈಕ್ಯತೆ, ರಾಷ್ಟ್ರ ಪ್ರೇಮದಂತಹ ಗುಣ ಬೆಳೆಸಿಕೊಂಡು ರಾಷ್ಟ್ರದ ರಕ್ಷಣೆಗೆ ಸದಾ ಸಿದ್ಧರಾಗಬೇಕು ಎಂದು ತಿಳಿಸಿದರು
ವಿವಿಧತೆಯಲ್ಲಿ ಏಕತೆಯನ್ನು ಕಾಪಾಡಿಕೊಂಡು ನಮ್ಮ ದೇಶ ವಿಶ್ವಕ್ಕೆ ವಸುದೈವ ಕುಟುಂಬಂ ಎಂಬ ಸಂದೇಶ ಸಾರಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರ ತ್ಯಾಗ ಬಲಿದಾನವಿದೆ ಎಂದರು.
ಇದನ್ನೂ ಓದಿ: Independence Day 2023; ಸಚಿನ್ರಿಂದ ಕೊಹ್ಲಿವರೆಗೆ ಸ್ವಾತಂತ್ರ್ಯ ಸಂಭ್ರಮ ಹೇಗಿತ್ತು!
ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಾದ ಕೃಷಿ ಇಲಾಖೆಯ ಸಹಾಯ ಕೃಷಿ ನಿರ್ದೇಶಕ ಕೆ.ಜಿ. ಕುಮಾರ್, ಉದ್ರಿ ಗ್ರಾಪಂ ಪಿಡಿಒ ಹೋಮೇಶ್, ಉರುಗನಹಳ್ಳಿಯ ವಿದ್ಯಾರ್ಥಿನಿ ಪ್ರಾರ್ಥನಾ ಅವರನ್ನು ಸನ್ಮಾನಿಸಲಾಯಿತು.
ಬಳಿಕ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಇದನ್ನೂ ಓದಿ: Weather Report : ರಾಜ್ಯದ ಹಲವೆಡೆ 50-50 ಮಳೆಯಾಟ!
ಪುರಸಭೆ ಸದಸ್ಯರಾದ ಈರೇಶ್ ಮೇಸ್ತ್ರಿ, ಮಧುರಾಯ್ ಜಿ. ಶೇಟ್, ಎಂ.ಡಿ. ಉಮೇಶ್, ಶ್ರೀರಂಜನಿ, ಪ್ರೇಮಾ, ಆಫ್ರೀನಾ, ಸುಲ್ತಾನಬೇಗಂ, ಅನ್ಸರ್ ಅಹ್ಮದ್, ಪ್ರಭು ಮೇಸ್ತ್ರಿ, ಯು. ನಟರಾಜ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್. ಮಂಜುನಾಥ್, ತಾಪಂ ಇಒ ಡಾ. ಪ್ರದೀಪ್ ಕುಮಾರ್, ಬಿಇಒ ಟಿ.ಎಂ. ಸತ್ಯನಾರಾಯಣ, ಬಿಆರ್‌ಸಿ ಶಿಕ್ಷಣ ಸಂಯೋಜಕ ದಯಾನಂದ ಕಲ್ಲೇರ್, ಪುರಸಭೆ ಮುಖ್ಯಾಧಿಕಾರಿ ಟಿ.ಎಸ್. ಗಿರೀಶ್ ಸೇರಿದಂತೆ ಇತರರಿದ್ದರು.