Site icon Vistara News

Shivamogga News: ಶರಾವತಿ ಸಂತ್ರಸ್ತರ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಕ್ರಮ: ಸಚಿವ ಮಧು ಬಂಗಾರಪ್ಪ

Minister Madhu Bangarappa Latest Meeting in Shivamogga

ಶಿವಮೊಗ್ಗ: ಜಿಲ್ಲೆಯಲ್ಲಿನ ಶರಾವತಿ (Sharavati) ಸಂತ್ರಸ್ತರ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ (Permanent solution) ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿಯ ಸಹ್ಯಾದ್ರಿ ಸಭಾಂಗಣದಲ್ಲಿ ಶನಿವಾರ ಶರಾವತಿ ಸಂತ್ರಸ್ತರ ಪುನರ್ವಸತಿ ಮತ್ತು ಸಮಸ್ಯೆಗೆ ಶಾಶ್ವತ ಒದಗಿಸುವ ಕುರಿತು ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಮಾಲೋಚನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಹುದಿನಗಳ ಈ ಸಮಸ್ಯೆಯನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಉತ್ಸುಕರಾಗಿದ್ದಾರೆ. ಈ ಸಂಬಂಧ ಕಳೆದ ವರ್ಷ ಶರಾವತಿ ಸಂತ್ರಸ್ತರ ಪ್ರತಿನಿಧಿಗಳು, ಪರಿಸರಾಸಕ್ತರು, ತಜ್ಞರು ಹಾಗೂ ಬುದ್ದಿಜೀವಿಗಳನ್ನು ಒಳಗೊಂಡ ಹಲವು ಸದಸ್ಯರ ಸಮಿತಿಯನ್ನು ರಚಿಸಿ, ಹೋರಾಟ ರೂಪಿಸಿ, ಸರ್ಕಾರಕ್ಕೆ ಮನವಿ ಸಲ್ಲಿಸಿ, ಅಂದಿನ ಸರ್ಕಾರದ ಗಮನ ಸೆಳೆಯಲಾಗಿತ್ತು ಎಂದವರು ತಿಳಿಸಿದರು.

ಇದನ್ನೂ ಓದಿ: Uttara Kannada News: ಸಸ್ಯ, ಬೀಜಗಳಿಗೆ ಹೆಸರಾದ ಕೃಷಿ ಭಾರತಿ ನರ್ಸರಿ; ಮಾದರಿ ಈ ಕುಟುಂಬ

ಹಲವು ದಶಕಗಳ ಹಿಂದೆಯೇ ಸರ್ಕಾರದಿಂದ ಹಕ್ಕುಪತ್ರಗಳನ್ನು ಪಡೆದುಕೊಂಡಿದ್ದು, ಸಾಗುವಳಿ ಮಾಡುತ್ತಿರುವವರನ್ನು ಹಾಗೂ ವಸತಿ ವ್ಯವಸ್ಥೆ ಕಲ್ಪಿಸಿಕೊಂಡಿರುವವರನ್ನು ಒಕ್ಕಲೆಬ್ಬಿಸುವ ಮೊದಲು ಅವರು ಹೊಂದಿರುವ ದಾಖಲಾತಿಗಳು ಪರಿಶೀಲಿಸಬೇಕು. ಅಲ್ಲದೆ ಕಂದಾಯ ಇಲಾಖೆಯ ದಾಖಲೆಗಳಲ್ಲಿಯೂ ಬದಲಾವಣೆ ಮಾಡಿಕೊಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅಧಿಕಾರಿಗಳು ಕ್ರಮ ವಹಿಸುವ ಮುನ್ನ ಶರಾವತಿ ಸಂತ್ರಸ್ತರ‌ ಸಮಸ್ಯೆಗೆ ಹೋರಾಟ ಸಮಿತಿಯ ಸದಸ್ಯರ ಸಲಹೆಯನ್ನು ಪಡೆದುಕೊಳ್ಳುವಂತೆ ಅವರು ಸಲಹೆ ನೀಡಿದರು.

ಸೊರಬ ತಾಲೂಕಿನ ಶಿಡ್ಡಿಹಳ್ಳಿಯಲ್ಲಿ 140 ಜನರ ಮೇಲೆ ಮೊಕದ್ದಮೆ ದಾಖಲಿಸಿರುವುದು ಸರಿಯಲ್ಲ. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಪುನರ್ ಪರಿಶೀಲಿಸಿ ಮೊಕದ್ದಮೆ ರದ್ದುಪಡಿಸಲು ಕ್ರಮ ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: ಬೆಂಗಳೂರಿಗರೇ ಗುಡ್‌ ನ್ಯೂಸ್‌; ಕಡಿಮೆ ದರದಲ್ಲಿ ಆಟೋ, ಟ್ಯಾಕ್ಸಿ, ಕ್ಯಾಬ್ ಸೇವೆ!

ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ರಾಜ್ಯ ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಸಿ ಇ ಒ ಸ್ನೇಹಲ್ ಲೋಕಂಡೆ, ಶರಾವತಿ ಹೋರಾಟ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Exit mobile version