Shivamogga News: ಶೈಕ್ಷಣಿಕ ಸಾಲಕ್ಕೆ ಹೆಚ್ಚಿನ ಗಮನ ನೀಡಲು ಸಂಸದ ಬಿ.ವೈ. ರಾಘವೇಂದ್ರ ಸೂಚನೆ - Vistara News

ಕರ್ನಾಟಕ

Shivamogga News: ಶೈಕ್ಷಣಿಕ ಸಾಲಕ್ಕೆ ಹೆಚ್ಚಿನ ಗಮನ ನೀಡಲು ಸಂಸದ ಬಿ.ವೈ. ರಾಘವೇಂದ್ರ ಸೂಚನೆ

Shivamogga News: ಬ್ಯಾಂಕುಗಳು ವಿದ್ಯಾರ್ಥಿಗಳ ಶೈಕ್ಷಣಿಕ ಸಾಲಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಗಮನ ನೀಡಿ, ಸಾಲ ಪಡೆಯುವಲ್ಲಿ ಅನುಕೂಲ ಮಾಡಿಕೊಡಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

VISTARANEWS.COM


on

MP B Y Raghavendra latest Meeting at Shivamogga
ಶಿವಮೊಗ್ಗ ಜಿ.ಪಂ. ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಬ್ಯಾಂಕುಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಮಿತಿ (ಡಿಎಲ್‍ಆರ್‌ಸಿ) ಮತ್ತು ಡಿಸಿಸಿ ಬ್ಯಾಂಕರ್ಸ್ ಸಭೆಯಲ್ಲಿ ಎಂಪಿ ಬಿ.ವೈ.ರಾಘವೇಂದ್ರ ಮಾತನಾಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಬ್ಯಾಂಕುಗಳು (Banks) ವಿದ್ಯಾರ್ಥಿಗಳ ಶೈಕ್ಷಣಿಕ ಸಾಲಕ್ಕೆ (Educational loans) ಸಂಬಂಧಿಸಿದಂತೆ ಹೆಚ್ಚಿನ ಗಮನ ನೀಡಿ, ಸಾಲ ಪಡೆಯುವಲ್ಲಿ ಅನುಕೂಲ ಮಾಡಿಕೊಡಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ, ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.

ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ (education news) ಬ್ಯಾಂಕುಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಮಿತಿ (ಡಿಎಲ್‍ಆರ್‍ಸಿ) ಮತ್ತು ಡಿಸಿಸಿ ಬ್ಯಾಂಕರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2022-23 ನೇ ಸಾಲಿನಲ್ಲಿ ಶೈಕ್ಷಣಿಕ ಸಾಲಕ್ಕೆ ಸಂಬಂಧಿಸಿದಂತೆ ಕೇವಲ ಶೇ.8.76 ಪ್ರಗತಿ ಸಾಧಿಸಲಾಗಿದೆ. 466.1 ಕೋಟಿ ಗುರಿಯಲ್ಲಿ 44.81 ಕೋಟಿ ಮಾತ್ರ ಸಾಲ ನೀಡಲಾಗಿದೆ. ಶೈಕ್ಷಣಿಕ ಗುರಿ ಸಾಧಿಸಲು ತೊಡಕಾಗಿರುವ ಅಂಶಗಳ ಕುರಿತು ಬ್ಯಾಂಕುಗಳು ಮತ್ತು ಜಿ.ಪಂ ಸಿಇಓ ಪರಿಶೀಲನೆ ನಡೆಸಬೇಕು. ಬಂದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು ಹಾಗೂ ಸ್ವಲ್ಪ ಉದಾರತೆಯಿಂದ ನಡೆದುಕೊಂಡಲ್ಲಿ ಹೆಚ್ಚು ಅರ್ಜಿಗಳು ಬರಬಹುದು. ಈ ನಿಟ್ಟಿನಲ್ಲಿ ಕ್ರಮ ವಹಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡುವಂತೆ ತಿಳಿಸಿದರು.

ಇದನ್ನೂ ಓದಿ: Asian Athletics Championships : ಚಿನ್ನ ಗೆದ್ದ ಶಾಟ್​ಪುಟ್​ ಪಟು ತಜಿಂದರ್ ಪಾಲ್ ಸಿಂಗ್

ಪಾಲಿಕೆ ವಸತಿ ವಿಭಾಗದ ಅಧಿಕಾರಿ ಶಶಿಧರ್ ಮಾತನಾಡಿ, ಗೋವಿಂದಾಪುರ ವಸತಿ ಯೋಜನೆಯಡಿ ಈಗಾಗಲೇ 600 ಮನೆಗಳನ್ನು ಲಾಟರಿ ಮೂಲಕ ಹಂಚಿದ್ದು, ಫಲಾನುಭವಿಗಳಿಗೆ ಬ್ಯಾಂಕ್‍ಗಳಿಂದ ಸಾಲ ಮಂಜೂರಾದಲ್ಲಿ ಮನೆಗೆ ಪ್ರವೇಶಿಸಲು ಸಿದ್ದರಿದ್ದಾರೆ. ಹಾಗೂ ಇನ್ನೂ 600 ಮನೆಗಳು ಸಿದ್ದವಿದ್ದು ಅವರ ಅರ್ಜಿಗಳು ಬ್ಯಾಂಕಿನಲ್ಲಿ ಬಾಕಿ ಇವೆ. ಫಲಾನುಭವಿ ಸಾಲಕ್ಕೆ ಸಂಬಂಧಿಸಿದಂತೆ ಅವರ ವಯಸ್ಸಿನ ಆಧಾರದಲ್ಲಿ ನಿಗದಿತ ಸಾಲ ದೊರೆಯುವಲ್ಲಿ ಕಷ್ಟವಾಗುತ್ತಿದೆ. ಆದ್ದರಿಂದ ಕೋವಾಲೆಂಟ್ ಸಾಲ ನೀಡಿದಲ್ಲಿ ಸಮಸ್ಯೆಗೆ ಪರಿಹಾರ ಒದಗಬಹುದು ಎಂದರು.

ಕೆನರಾ ಬ್ಯಾಂಕ್ ಎಜಿಎಂ ವೆಂಕಟರಾಮುಲು ಪ್ರಾಸ್ತಾವಿಕವಾಗಿ ಮಾತನಾಡಿ, ಲೀಡ್ ಬ್ಯಾಂಕ್‍ನಡಿ 325 ಶಾಖೆಗಳಿದ್ದು, 2023 ನೇ ಸಾಲಿನ ಮಾರ್ಚ್ 31 ರವರೆಗೆ 38,149 ಕೋಟಿ ವ್ಯವಹಾರ ನಡೆದಿದೆ. ಕಳೆದ ಬಾರಿ ಜಿಲ್ಲೆಯ ಸಿಡಿ ಅನುಪಾತ ಶೇ.67 ಇದ್ದು ಈ ಬಾರಿ ಶೇ.73 ಕ್ಕೆ ಏರಿಕೆಯಾಗಿದ್ದು ಶೇ.6 ಪ್ರಗತಿಯಾಗಿದೆ. ಕೃಷಿ ರಂಗದಲ್ಲಿ 2022 ರ ಮಾರ್ಚ್ ರಿಂದ 2023 ರ ಮಾರ್ಚ್‍ವರೆಗೆ ಶೇ. 78 ಗುರಿ ಸಾಧಿಸಲಾಗಿದೆ. ಎಂಎಸ್‍ಎಂಇ ಕ್ಷೇತ್ರದಲ್ಲಿ 116.24, ಶಿಕ್ಷಣದಲ್ಲಿ 8.76, ವಸತಿ ಶೇ12.49 ಇತರೆ ಆದ್ಯತಾ ವಲಯದಲ್ಲಿ ಶೇ. 13.84, ಒಟ್ಟು ಆದ್ಯತಾ ವಲಯದಲ್ಲಿ ಶೇ73.01 ಸೇರಿದಂತೆ ಎಲ್ಲ ವಲಯಗಳು ಸೇರಿ ಶೇ.78.87 ಪ್ರಗತಿ ಸಾಧಿಸಲಾಗಿದೆ ಎಂದು ವಿವರಣೆ ನೀಡಿದರು.

ಇದನ್ನೂ ಓದಿ: KREDL Dividends : ರಾಜ್ಯ ಸರ್ಕಾರಕ್ಕೆ 20.96 ಕೋಟಿ ಡಿವಿಡೆಂಡ್‌ ಸಲ್ಲಿಸಿದ ಕ್ರೆಡಲ್

ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಮಾತನಾಡಿ, ಕೃಷಿ, ಎಂಎಸ್‍ಎಂಇ, ವಸತಿ, ಶಿಕ್ಷಣ, ಆದ್ಯತಾ ವಲಯಗಳಲ್ಲಿ ಸೌಲಭ್ಯ ನೀಡುವಲ್ಲಿ ಕಡಿಮೆ ಪ್ರಗತಿ ಸಾಧಿಸಿರುವ ಬ್ಯಾಂಕುಗಳು ಮುಂದಿನ ತ್ರೈಮಾಸಿಕದೊಳಗೆ ನಿಗದಿತ ಗುರಿಯನ್ನು ಸಾಧಿಸಬೇಕು. ಶೈಕ್ಷಣಿಕ ಸಾಲಕ್ಕೆ ಸಂಬಂಧಿಸಿದಂತೆ ಪ್ರಗತಿ ತೀರ ಕಡಿಮೆ ಇದೆ. ದಾಖಲಾತಿಗಳು ಸಮರ್ಪಕವಾಗಿಲ್ಲವೆಂದು ಹೇಳಿ ಅರ್ಜಿ ತಿರಸ್ಕರಿಸುವುದು ಸೂಕ್ತವಲ್ಲ. ನಿಯಮಗಳನ್ನು ಕೊಂಚ ಸಡಿಲಗೊಳಿಸಿ ವಿದ್ಯಾರ್ಥಿಗಳಿಗೆ ಸಾಲ ನೀಡಬೇಕು. ಮತ್ತು ಎಂಎಸ್‍ಎಂಇ ಗುರಿ ಸಾಧನೆ ಕಡೆ ಗಮನ ಹರಿಸಬೇಕು. ಜಿಲ್ಲೆಯಲ್ಲಿ 11 ಸಾವಿರ ಸ್ವಸಹಾಯ ಗುಂಪುಗಳಿದ್ದು, ಮಹಿಳೆಯರೇ ನಡೆಸಿಕೊಂಡು ಹೋಗುತ್ತಿದ್ದಾರೆ. ಪ್ರತಿ ಗ್ರಾ.ಪಂ ಮಟ್ಟದಲ್ಲಿ ಇಂತಹ ಗುಂಪುಗಳು ಸ್ವಉದ್ಯೋಗಕ್ಕಾಗಿಕೆಲವು ಪ್ರಾಜೆಕ್ಟ್‍ಗಳನ್ನು ಹಾಕಿಕೊಂಡಿದ್ದು, ಬ್ಯಾಂಕುಗಳು ಇವುಗಳನ್ನು ಪರಿಶೀಲಿಸಿ ಸಾಲವನ್ನು ನೀಡಿ ಸಹಕರಿಸಬೇಕೆಂದು ವಿನಂತಿಸಿದರು.

ಆರ್‌ಬಿಐ ಎಲ್‍ಡಿಓ ಬಿಸ್ವಾಸ್ ಮಾತನಾಡಿ, ಜಿಲ್ಲೆಯ 5 ಬ್ಯಾಂಕುಗಳು ಪ್ರಗತಿಯಲ್ಲಿ ಹಿಂದಿವೆ. ನಿಗದಿತ ಪ್ರಗತಿ ಸಾಧಿಸಲು ಕ್ರಮಗಳನ್ನು ಕೈಗೊಂಡು ಪ್ರಗತಿ ಸಾಧಿಸಬೇಕು. ಎಲ್‍ಡಿಎಂ ಈ ಕುರಿತು ಪರಿಶೀಲಿಸಬೆಕು. ಹಾಗೂ ಪ್ರತಿ ಗ್ರಾಮೀಣ ಬ್ಯಾಂಕುಗಳು ಪ್ರತಿ ತಿಂಗಳು ಎಫ್‍ಎಲ್ ಸಿ ಶಿಬಿರಗಳನ್ನು ಮಾಡಿ ಜನರಿಗೆ ಮಾಹಿತಿ ನೀಡಬೇಕು. ವಿವಿಧ ಯೋಜನೆಗಳಡಿ ಬಾಕಿ ಇರುವ ಅರ್ಜಿಗಳನ್ನು ವಿಲೇವಾರಿ ಮಾಡಬೇಕೆಂದು ಸೂಚಿಸಿದರು.

ಇದನ್ನೂ ಓದಿ: Weather Report : ಕರಾವಳಿಯಲ್ಲಿ ನಾಳೆ ಮಳೆ ವೈಲೆಂಟ್‌; ದಕ್ಷಿಣ ಒಳನಾಡಿನಲ್ಲಿ ಫುಲ್‌ ಸೈಲೆಂಟ್‌!

ನಬಾರ್ಡ್ ಡಿಡಿಎಂ ಶರತ್ ಗೌಡ ಮಾತನಾಡಿದರು. ಲೀಡ್ ಬ್ಯಾಂಕ್ ಮ್ಯಾನೇಜರ್ ಅಮರ್ ನಾಥ್ ಸ್ವಾಗತಿಸಿದರು. ಜಿಲ್ಲೆಯ ವಿವಿಧ ಬ್ಯಾಂಕುಳ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Gruha Lakshmi: ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಖಾತೆಗೆ ಇಂದು ಅಥವಾ ನಾಳೆ ಹಣ ಜಮೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸ್ಪಷ್ಟನೆ

Gruha Lakshmi: ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀಯ ಹಣ ಯಜಮಾನಿಯ ಖಾತೆಗೆ ಇಂದು ಅಥವಾ ನಾಳೆ ಕ್ರೆಡಿಟ್‌ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ ನೀಡಿದ್ದಾರೆ. ಜತೆಗೆ ಗೃಹ ಲಕ್ಷ್ಮೀ ಸೇರಿದಂತೆ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಎನ್ನುವ ವದಂತಿಯನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.

VISTARANEWS.COM


on

Gruha Lakshmi
Koo

ಬೆಳಗಾವಿ: ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ (Gruha Lakshmi)ಯ ಹಣ ಯಜಮಾನಿಯ ಖಾತೆಗೆ ಇಂದು ಅಥವಾ ನಾಳೆ ಕ್ರೆಡಿಟ್‌ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ (Lakshmi Hebbalkar) ಭರವಸೆ ನೀಡಿದ್ದಾರೆ.

ಎರಡು ತಿಂಗಳಿನಿಂದ ಗೃಹಲಕ್ಷ್ಮೀ ಹಣ ಬಾರದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮಹಿಳೆಯರು ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ʼʼಮೇ, ಜೂನ್‌ ತಿಂಗಳ ಹಣ ಹಾಕಿದ್ದೇವೆ. ಇಂದು ಅಥವಾ ನಾಳೆ ಜಮೆ ಆಗಲಿದೆʼʼ ಎಂದು ವಿವರಿಸಿದ್ದಾರೆ.

ಯೋಜನೆಯನ್ನು ನಿಲ್ಲಿಸುವುದಿಲ್ಲ

ಗೃಹ ಲಕ್ಷ್ಮೀ ಸೇರಿದಂತೆ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಎನ್ನುವ ವದಂತಿಯನ್ನು ಸ್ಪಷ್ಟವಾಗಿ ನಿರಾಕರಿಸಿದ ಅವರು, ʼʼರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗೃಹಲಕ್ಷ್ಮೀ ಯೋಜನೆ ನಿಲ್ಲುವುದಿಲ್ಲ. ಐದು ವರ್ಷಗಳವರೆಗೂ ಇದು ಮುಂದುವರಿಯಲಿದೆ. ಬಿಜೆಪಿಯವರು ಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆʼʼ ಎಂದು ಹೇಳಿದ್ದಾರೆ.

ಆಧಾರ್‌ ಸೀಡಿಂಗ್

ಇನ್ನೂ ಸಾಕಷ್ಟು ಫಲಾನುಭವಿಗಳು ಬ್ಯಾಂಕ್‌ನಲ್ಲಿ ಖಾತೆ ಹೊಂದಿದ್ದರು ಕೂಡ ಆಧಾರ್‌ ಸೀಡಿಂಗ್ (Aadhar seeding) ಮಾಡಿಕೊಂಡಿಲ್ಲ. ಹೀಗಾಗಿ ಅವರಿಗೆ ಹಣ ಬರುತ್ತಿಲ್ಲ. ಗೃಹಲಕ್ಷ್ಮೀ ಯೋಜನೆಯಡಿ ನೋಂದಾಯಿಸಿಕೊಂಡರೂ ಸಹಾಯಧನ ಪಾವತಿಯಾಗದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್‌ಗಳಲ್ಲಿ ಪರಿಹರಿಸಿಕೊಳ್ಳಬೇಕು. ಬಳಿಕ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ, ಇ-ಕೆವೈಸಿ ಅಪ್‌ಡೇಟ್‌ ಮಾಡಿಸಿ, ದೃಢೀಕರಣ ಪಡೆದು ಅವುಗಳನ್ನು ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿ ಕೇಂದ್ರಗಳ ಕಾರ್ಯಕರ್ತೆಯರಿಗೆ ಒದಗಿಸಿದರೆ, ಸಹಾಯಧನ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆ ನಿಲ್ಲಲ್ಲ ಎಂದ ಸಿದ್ದರಾಮಯ್ಯ

ಇತ್ತೀಚೆಗೆ ಮೈಸೂರಿನಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಐದು ಗ್ಯಾರಂಟಿಗಳೂ (Congress Guarantee) ಮುಂದುವರಿಯಲಿವೆ. ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಗ್ಯಾರಂಟಿಗಳನ್ನು ಮರು ಪರಿಶೀಲಿಸಲಾಗುವುದೇ ಎಂಬ ಪ್ರಶ್ನೆಗೆ ನಗರದ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿ, ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ನಿಲ್ಲಿಸುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ: Congress Guarantee Scheme: ಗ್ಯಾರಂಟಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಲ್ಲ: ಸಿಎಂ ಸಿದ್ದರಾಮಯ್ಯ

ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂಬ ನ್ಯಾಯಾಲಯದ ಆದೇಶದ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ಹಾಗೂ ಜೆಡಿಎಸ್ ಈ ಪ್ರಕರಣದಲ್ಲಿ ಕಾಂಗ್ರೆಸ್‍ನದ್ದು ರಾಜಕೀಯ ಷಡ್ಯಂತ್ರ ಎಂದು ಆರೋಪಿಸುತ್ತಿದ್ದಾರೆ. ಆದರೆ ದೂರು ನೀಡಿರುವವರು ಯಾರು? ಸರ್ಕಾರವೇ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುವುದಿಲ್ಲ. ಕಾನೂನು ರೀತಿ ಕೆಲಸ ಮಾಡುವ ಪೊಲೀಸರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಒಪ್ಪಿ ಅದರಂತೆ ನಡೆದುಕೊಳ್ಳಬೇಕಾಗುತ್ತದೆ ಎಂದಿದ್ದರು.

ದೇವೇಗೌಡರ ಕುಟುಂಬವನ್ನು ನಾಶ ಮಾಡುವುದರಲ್ಲಿ ಯಶಸ್ಸು ಕಂಡಿರುವ ಕಾಂಗ್ರೆಸ್ ಈಗ ಯಡಿಯೂರಪ್ಪ ಅವರನ್ನು ನಾಶ ಮಾಡಲು ಹೊರಟಿದೆ ಎಂಬ ಎಚ್‌ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನಾವು ದ್ವೇಷದ ರಾಜಕಾರಣ ಮಾಡುವುದಿಲ್ಲ. ಈ ನೆಲದ ಕಾನೂನನ್ನು ನಾವು ಗೌರವಿಸುತ್ತೇವೆ. ಕಾನೂನು ಹೇಳಿದಂತೆ ನಡೆದುಕೊಳ್ಳುತ್ತೇವೆ ಹಾಗೂ ಕಾನೂನನ್ನು ಪಾಲಿಸುತ್ತೇವೆ ಎಂದು ತಿಳಿಸಿದ್ದರು.

Continue Reading

ಕ್ರೈಂ

Road Accident: ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಬೈಕ್‌ನಿಂದ ಬಿದ್ದು ನವ ವಿವಾಹಿತೆ ಸಾವು

Road Accident : ಪ್ರತ್ಯೇಕ ಕಡೆಗಳಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, ಸವಾರ ಹಾಗೂ ಹಿಂಬದಿ ಸವಾರರು ಪ್ರಾಣ ಕಳೆದುಕೊಂಡಿದ್ದಾರೆ. ಮತ್ತೊಂದು ಕಡೆ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಆಕಳ ಕರುವೊಂದು ಮೃತಪಟ್ಟಿದೆ.

VISTARANEWS.COM


on

By

Road Accident
Koo

ಉಡುಪಿ: ವಾಹನಗಳಿಗೆ ನಾಯಿಗಳು ಅಡ್ಡ ಬಂದು ಅಪಘಾತ (Road Accident) ಸಂಭವಿಸುವ ಪ್ರಕರಣಗಳು ಹೆಚ್ಚುತ್ತಿವೆ. ಹಠಾತ್ತಾಗಿ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋದಾಗ ಬೈಕ್‌ನಿಂದ ಕೆಳಗೆ ಬಿದ್ದು ನವವಿವಾಹಿತೆ ಮೃತಪಟ್ಟಿದ್ದಾಳೆ. ಕಾರ್ಕಳ ತೆಳ್ಳಾರು ನಿವಾಸಿ ನೀಕ್ಷಾ ಮೃತಪಟ್ಟವರು.

ಎರಡು ತಿಂಗಳ ಹಿಂದಷ್ಟೇ ವಿಶಾಲ್ ಎಂಬುವರೊಂದಿಗೆ ನೀಕ್ಷಾ ಮದುವೆಯಾಗಿದ್ದರು. ಮಂಗಳೂರು ತೆರಳುವ ಖಾಸಗಿ ಬಸ್ ಏರಲು ಪತಿಯೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಉಡುಪಿಯ ಈದು ಗ್ರಾಮದ ಹೊಸ್ಮಾರು ಸೇತುವೆ ಬಳಿ ಬೈಕ್‌ಗೆ ಅಚಾನಕ್‌ ಆಗಿ ಶ್ವಾನ ಅಡ್ಡ ಬಂದಿದೆ.

ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋದಾಗ ಬೈಕ್‌ನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮುಗುಚಿ ಬಿದ್ದಿದ್ದಾರೆ. ಬೈಕ್ ಹಿಂಭಾಗದಲ್ಲಿದ್ದ ನೀಕ್ಷಾ, ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆಗೆ ಗಂಭೀರವಾಗಿದೆ. ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ವಿಶಾಲ್‌ ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident: ಭೀಕರ ರಸ್ತೆ ಅಪಘಾತ; 2 ಕಾರು ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ಸಾವು

ಸವಾರನ ಬಲಿ ಪಡೆದ ಬೊಲೆರೋ ವಾಹನ

ಚಿಕ್ಕಬಳ್ಳಾಪುರ: ಬೊಲೆರೋ ವಾಹನಕ್ಕೆ ಬೈಕ್ ಸವಾರ ಬಲಿಯಾಗಿದ್ದಾನೆ. ಚಿಕ್ಕಬಳ್ಳಾಪುರದ ಗುಡಿಬಂಡೆ – ಪೆರೇಸಂದ್ರ ಮಾರ್ಗದ ಕಮ್ಮಗುಟ್ಟಹಳ್ಳಿ ಕ್ರಾಸ್‌ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ನಾಗೇಶ್(21) ಮೃತ ದುರ್ದೈವಿ.

ಗುಡಿಬಂಡೆ ತಾಲೂಕಿನ ಗರುಡಾಚಾರ್ಲಹಳ್ಳಿ ಗ್ರಾಮದ ನಾಗೇಶ್‌ ಬೈಕ್‌ನಲ್ಲಿ ಬರುವಾಗ ಜಿಲಿಟಿನ್ ಸ್ಫೋಟಕ ತುಂಬಿದ್ದ ಬೊಲೆರೋ ವಾಹನದ ನಡುವೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ನಾಗೇಶ್‌ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ.

Road Accident

ಇತ್ತ ಅಪಘಾತ ಸಂಭವಿಸುತ್ತಿದ್ದಂತೆ ವಾಹನ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಹಿರೇನಾಗವಲ್ಲಿ ಬೆಟ್ಟ ಸುತ್ತಮುತ್ತ ಕಲ್ಲು ಗಣಿಗಾರಿಕೆಗೆ ಸ್ಫೋಟಗಳನ್ನು ವಾಹನದಲ್ಲಿ ಸಾಗಿಸುತ್ತಿದ್ದರು. ಅತಿ ವೇಗದಿಂದ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದಾನೆ.

ಇತ್ತೀಚೆಗೆ ಟಿಪ್ಪರ್‌ಗಳು, ಜಿಲೆಟಿನ್ ವಾಹನಗಳಿಗೆ ಹತ್ತಾರು ಜನ ಬಲಿಯಾಗಿದೆ. ಕಲ್ಲು ಗಣಿಗಾರಿಕೆಯಿಂದ ಸಾಕಷ್ಟು ಅವಾಂತರವೇ ಸೃಷ್ಟಿಯಾಗಿದೆ. ಘಟನಾ ಸ್ಥಳಕ್ಕೆ ಪೆರೇಸಂದ್ರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪರಾರಿ ಆದ ಚಾಲಕನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಬಳ್ಳಾರಿಯಲ್ಲಿ ಬಸ್‌ ಡಿಕ್ಕಿಗೆ ಕರು ಸಾವು

ಚಾಲಕನ ನಿರ್ಲಕ್ಷ್ಯಕ್ಕೆ ಕರುವೊಂದು ಮೃತಪಟ್ಟಿದೆ. ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕರು ಜೀವ ಬಿಟ್ಟಿದೆ. ಬಳ್ಳಾರಿ ನಗರದ ಮೋಕಾ ರಸ್ತೆಯ ಬಸವೇಶ್ವರ ಸರ್ಕಲ್ ಬಳಿ ಘಟನೆ ನಡೆದಿದೆ. ಹಸುಗಳು ರಸ್ತೆ ದಾಟುವ ವೇಳೆ ಆಕಳು ಕರುವಿಗೆ ಜಿಂದಾಲ್ ಕಾರ್ಖಾನೆಯ ಬಸ್ ಡಿಕ್ಕಿ ಹೊಡೆದಿದೆ. ತೀವ್ರ ರಕ್ತಸ್ರಾವದಿಂದ ಕರು ರಸ್ತೆಯಲ್ಲೇ ಪ್ರಾಣ ಬಿಟ್ಟಿದೆ. ಇತ್ತ ಸತ್ತ ಕರುವನ್ನು ನೋಡಿ ತಾಯಿ ಹಸು ರೋಧಿಸುತ್ತಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Karnataka CM Row: ‘ಗೌಡ’ ಸಿಎಂ ಆಯ್ತು, ಈಗ ‘ಲಿಂಗಾಯತ’ ಸಿಎಂ ಕೂಗು; ರಂಭಾಪುರಿ ಶ್ರೀ ಹೇಳಿದ ಹೆಸರಿದು!

Karnataka CM Row: ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ನೀಡಬೇಕು ಎಂದು ಬಾಳೆಹೊನ್ನೂರು‌ಶ್ರೀ ರಂಭಾಪುರಿ ಡಾ.ವೀರ‌ಸೋಮೇಶ್ವರ ಜಗದ್ಗುರು ಎಂದು ಆಗ್ರಹಿಸಿರುವುದು ಹೊಸ ಚರ್ಚೆಗೆ ಕಾರಣವಾಗಿದೆ. ಈಗಾಗಲೇ ಚಂದ್ರಶೇಖರ ಸ್ವಾಮೀಜಿ ಅವರು ಒಕ್ಕಲಿಗ ಸಮುದಾಯದ ಡಿಕೆಶಿ ಅವರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇದರಿಂದಾಗಿ ಸಿಎಂ ಬದಲಾವಣೆಯ ಚರ್ಚೆಯು ಇನ್ನಷ್ಟು ಕಾವು ಪಡೆದುಕೊಂಡಿದೆ.

VISTARANEWS.COM


on

Karnataka CM Row
Koo

ಕಲಬುರಗಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ತೀವ್ರ ಚರ್ಚೆಗಳು (Karnataka CM Row) ನಡೆಯುತ್ತಿದ್ದು, ಆಯಾ ಸಮುದಾಯಗಳ ಸ್ವಾಮೀಜಿಗಳು ಒಂದೊಂದು ಹೆಸರನ್ನು ಸೂಚಿಸುತ್ತಿದ್ದಾರೆ. ಒಕ್ಕಲಿಗ ಸಮುದಾಯದ ಡಿ.ಕೆ.ಶಿವಕುಮಾರ್‌ (DK Shivakumar) ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಒತ್ತಾಯಿಸಿದ್ದಾರೆ. ಇದರ ಬೆನ್ನಲ್ಲೇ, ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ನೀಡಬೇಕು ಎಂದು ಬಾಳೆಹೊನ್ನೂರು‌ಶ್ರೀ ರಂಭಾಪುರಿ ಡಾ.ವೀರ‌ಸೋಮೇಶ್ವರ ಜಗದ್ಗುರು ಆಗ್ರಹಿಸಿದ್ದಾರೆ. ಇದು ಈಗ ಸಿಎಂ ಬದಲಾವಣೆ ಚರ್ಚೆಗೆ ಹೊಸ ತಿರುವು ನೀಡಿದಂತಾಗಿದೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿವೆ. ಹಾಗಾಗಿ, ವೀರಶೈವ ಲಿಂಗಾಯತ ಸಮುದಾಯದ ನಾಯಕರಿಗೆ ಸಿಎಂ ಸ್ಥಾನ ಕೊಟ್ಟರೂ ತಪ್ಪಿಲ್ಲ. ಬಹುಸಂಖ್ಯಾತ ವೀರಶೈವ ಲಿಂಗಾಯತ ಸಮುದಾಯ‌ವು ಕಾಂಗ್ರೆಸ್‌ಗೆ ಬೆಂಬಲ ಕೊಟ್ಟಿದೆ. ಇದರಿಂದಾಗಿಯೇ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ಕೊಟ್ಟರೆ ರಾಜ್ಯದಲ್ಲಿ ಒಳ್ಳೆಯ ಅಭಿವೃದ್ಧಿಯಾಗುತ್ತದೆ. ಸಿಎಂ ಸ್ಥಾನ ಅಲ್ಲದಿದ್ದರೂ ಡಿಸಿಎಂ ಸ್ಥಾನವನ್ನಾದರೂ ಕೊಡಬೇಕು” ಎಂದು ಹೇಳಿದರು.

Shamanur Shivashankarappa

“ರಾಜ್ಯದಲ್ಲಿ ವೀರೇಂದ್ರ ಪಾಟೀಲ್‌ ಅವರಿಗೆ ಬಿಟ್ಟರೆ ಬೇರೆಯವರು ಸಿಎಂ ಆಗಿಲ್ಲ. ಹಾಗಾಗಿ, ಈಗ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರಿಗೆ ಸಿಎಂ ಸ್ಥಾನ ಕೊಡಿ. ಶಾಮನೂರು ಶಿವಶಂಕರಪ್ಪ, ಎಂ.ಬಿ. ಪಾಟೀಲ್, ಈಶ್ವರ್ ಖಂಡ್ರೆ ಅವರು ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಇವರಲ್ಲಿ ಯಾರಿಗಾದರೂ ಮುಖ್ಯಮಂತ್ರಿ ಹುದ್ದೆ ನೀಡಿದರೆ ರಾಜ್ಯದಲ್ಲಿ ಇನ್ನಷ್ಟು ಒಳ್ಳೆಯ ಆಡಳಿತ ಸಿಕ್ಕು ರಾಜ್ಯವು ಅಭಿವೃದ್ಧಿಯಾಗುತ್ತದೆ” ಎಂದು ರಂಭಾಪುರಿ ಶ್ರೀಗಳು ಹೇಳಿದ್ದಾರೆ.

ಚಂದ್ರಶೇಖರ ಸ್ವಾಮೀಜಿ ಹೇಳಿದ್ದೇನು?

ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅವರು ಕೆಲ ದಿನಗಳ ಹಿಂದೆ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇದಿಕೆ ಮೇಲೆಯೇ ಡಿ.ಕೆ.ಶಿವಕುಮಾರ್‌ ಅವರ ಪರವಾಗಿ ಬ್ಯಾಟಿಂಗ್‌ ಮಾಡಿದ್ದರು. “ಎಲ್ಲರೂ ಮುಖ್ಯಮಂತ್ರಿಗಳಾಗಿ ತಮ್ಮ ತಮ್ಮ ಅಧಿಕಾರ ಅನುಭವಿಸಿದ್ದಾರೆ. ಆದರೆ ಡಿ.ಕೆ. ಶಿವಕುಮಾರ್ ಒಬ್ಬರು ಮುಖ್ಯಮಂತ್ರಿ ಆಗಿಲ್ಲ. ಸಿದ್ದರಾಮಯ್ಯ ಅವರು ಈಗಾಗಲೇ ಸಿಎಂ ಸ್ಥಾನ ಅನುಭವಿಸಿದ್ದಾರೆ. ಆ ಕಾರಣಕ್ಕಾಗಿ ಇನ್ನು ಮುಂದೆ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕು” ಹೇಳಿದ್ದರು.

Bangalore Rain

ಚರ್ಚೆಯೇ ಬೇಡ ಎಂದ ಡಿಕೆಶಿ

ಸಿಎಂ, ಡಿಸಿಎಂ ಕುರಿತು ಕಾಂಗ್ರೆಸ್‌ನ ಯಾವ ಎಂಎಲ್‌ಎ ಕೂಡ ಚರ್ಚಿಸಬಾರದು ಎಂಬುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. “ಪಕ್ಷವನ್ನು ಕಟ್ಟಲು ಬಹಳ ಕಷ್ಟಪಟ್ಟಿದ್ದೇವೆ. ಪಕ್ಷವನ್ನು ಅಧಿಕಾರಕ್ಕೆ ತರಲು ಎಷ್ಟು ಕಷ್ಟ ಪಟ್ಟಿದ್ದೇವೆ ಎಂಬುದು ನಮಗೆ ಗೊತ್ತಿದೆ. ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ನಿಮ್ಮ ಬಾಯಿಗೆ ಬೀಗ ಹಾಕಿಕೊಂಡು ಇದ್ದರೆ ಒಳ್ಳೆಯದಾಗುತ್ತದೆ. ಚಂದ್ರಶೇಖರ ಸ್ವಾಮೀಜಿ ಅವರು ನನ್ನ ಮೇಲಿನ ಅಭಿಮಾನಕ್ಕಾಗಿ ಹಾಗೆ ಮಾತನಾಡಿದ್ದಾರೆ. ಬೇರೆ ಯಾವ ಸ್ವಾಮೀಜಿಗಳೂ ಮಾತನಾಡಿಲ್ಲ. ಎಲ್ಲರಿಗೂ ಕೈ ಮುಗಿಯುತ್ತೇನೆ. ನಮ್ಮ ರಾಜಕಾರಣದ ಸುದ್ದಿಗೆ ನೀವು ಬರಬೇಡಿ” ಎಂದಿದ್ದಾರೆ.

ಇದನ್ನೂ ಓದಿ: DK Shivakumar: ಸಿಎಂ, ಡಿಸಿಎಂ ಚರ್ಚೆ ಇಲ್ಲ, ಬಾಯಿಗೆ ಬೀಗ ಹಾಕಿಕೊಂಡಿರಿ; ಡಿಕೆಶಿ ಖಡಕ್‌ ಎಚ್ಚರಿಕೆ

Continue Reading

ಚಿಕ್ಕಮಗಳೂರು

Dengue Fever : ಡೆಂಗ್ಯೂ ಮಹಾಮಾರಿಗೆ ಚಿಕ್ಕಮಗಳೂರಿನಲ್ಲಿ ಬಾಲಕಿ ಬಲಿ; ಈವರೆಗೆ ಐವರು ಸಾವು

Dengue Fever : ಪ್ರಸಕ್ತ ವರ್ಷ ರಾಜ್ಯದಲ್ಲಿ ಡೆಂಗ್ಯೂ ಜ್ವರಕ್ಕೆ ಐವರು ಬಲಿಯಾಗಿದ್ದಾರೆ. ಚಿಕ್ಕಮಗಳೂರಿನಲ್ಲಿ ಬಾಲಕಿಯೊಬ್ಬಳು ಮಹಾಮಾರಿಗೆ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ.

VISTARANEWS.COM


on

By

Dengue Fever
Koo

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಡೆಂಗ್ಯೂ ಮಹಾಮಾರಿಗೆ (Dengue Fever) ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಸಾನಿಯಾ (6) ಮೃತ ದುರ್ದೈವಿ. ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಘಟನೆ ನಡೆದಿದೆ.

ಡೆಂಗ್ಯೂ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಾನಿಯಾಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಬಾಲಕಿ ಮೃತಪಟ್ಟಿದ್ದಾಳೆ. ರಾಜ್ಯ ಸರ್ಕಾರದ ವಿರುದ್ಧ ಮೃತ ಬಾಲಕಿ ತಂದೆ ಆಸಿಫ್‌ ಬೇಸರ ವ್ಯಕ್ತಪಡಿಸಿದ್ದಾರೆ. ನನಗೆ ಯಾವುದೇ ಸಹಾಯ ಬೇಡ, ಸರ್ಕಾರಿ ಆಸ್ಪತ್ರೆ ಅಭಿವೃದ್ಧಿ ಮಾಡಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಡೆಂಗ್ಯೂ ಕಾಯಿಲೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸ ಸಿಗುತ್ತಿಲ್ಲ. ಸರಕಾರಿ ಆಸ್ಪತ್ರೆಯಲ್ಲಿ ಬಡವರಿಗೆ ಹೆಚ್ಚಿನ ಸೌಲಭ್ಯ ಸಿಗಬೇಕು. ನನ್ನ ಮಗಳಿಗಾದ ಸ್ಥಿತಿ ಯಾರಿಗೂ ಆಗುವುದು ಬೇಡ ಎಂದು ಸರ್ಕಾರಿ ಆಸ್ಪತ್ರೆಗಳ ನಿರ್ಲಕ್ಷಕ್ಕೆ ಹಾಗೂ ಸರ್ಕಾರಕ್ಕೆ ಛೀಮಾರಿ ಹಾಕಿದರು.

4 ಸಾವಿರ ಗಡಿ ದಾಟಿದ ಡೆಂಗ್ಯೂ; ಐವರು ಸಾವು

ಹವಾಮಾನ ವೈಪರೀತ್ಯ ಮತ್ತು ಮಳೆಯಿಂದಾಗಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದು ಆತಂಕ ಮೂಡಿಸಿದೆ. 2024ರಲ್ಲಿ ಈ ವರೆಗೆ (ಜೂನ್‌) 93,012 ಶಂಕಿತವಾಗಿದ್ದು, ಇದರಲ್ಲಿ 40,918 ಮಂದಿಯ ರಕ್ತ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಆ ಪ್ರಕಾರ 4364 ಮಂದಿಗೆ ಡೆಂಗ್ಯೂ ಜ್ವರ ದೃಢಪಟ್ಟಿದೆ. ಡೆಂಗ್ಯೂ ಜ್ವರಕ್ಕೆ ಚಿಕಿತ್ಸೆ ಫಲಿಸದೇ ಐವರು ಮೃತಪಟ್ಟಿದ್ದಾರೆ. ಶಿವಮೊಗ್ಗ, ಬಾಗಲಕೋಟೆ, ಗದಗದಲ್ಲಿ ತಲಾ ಒಬ್ಬರು ಹಾಗೂ ಹಾಸನದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: Dengue Prevention: ರಾಜ್ಯದಲ್ಲಿ 6000ಕ್ಕೂ ಡೆಂಗ್ಯೂ ಪ್ರಕರಣ; ಇದರಿಂದ ಪಾರಾಗಲು ಹೀಗೆ ಮಾಡಿ

ಡೆತ್‌ ಆಡಿಟಿಂಗ್‌ಗೆ ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು ವಿಪರೀತ ಏರಿಕೆ ಆಗಿವೆ. ಬೆಂಗಳೂರಲ್ಲಿ ಜನವರಿಯಿಂದ ಈವರೆಗೆ 1,385 ಮಂದಿಗೆ ಡೆಂಗ್ಯೂ ಜ್ವರ ಕಂಡು ಬಂದಿದೆ. ಈವರೆಗೆ ಡೆಂಗ್ಯೂನಿಂದ ಮೃತಪಟ್ಟ ವರದಿ ಆಗಿಲ್ಲ. ಆದರೆ ಇಬ್ಬರು ಡೆಂಗ್ಯೂ ಜ್ವರದಿಂದ ಮೃತಪಟ್ಟಿರುವ ಶಂಕೆ ಇದ್ದು, ಸಾವಿಗೆ ಕಾರಣ ತಿಳಿಯುವ ಸಲುವಾಗಿ ಡೆತ್ ಆಡಿಟ್‌ಗೆ ಬಿಬಿಎಂಪಿ ಮುಂದಾಗಿದೆ.

ಇನ್ನೂ 3,470 ಲಾರ್ವಾ ಉತ್ಪತ್ತಿ ತಾಣ ಪತ್ತೆಯಾಗಿದ್ದು, ಇದರಲ್ಲಿ 2,004 ತಾಣಗಳ ನಾಶ ಮಾಡಲಾಗಿದೆ ಎಂದು ಬಿಬಿಎಂಪಿ ಆರೋಗ್ಯ ವಿಭಾಗ ಮಾಹಿತಿ ನೀಡಿದೆ. ಪಾಲಿಕೆಯ ಆರೋಗ್ಯ ಸಿಬ್ಬಂದಿ ನಿನ್ನೆವರೆಗೂ 17,877 ಮನೆಗಳ ಸಮೀಕ್ಷೆ ನಡೆಸಿದ್ದಾರೆ. ಆಡಿಟ್ ಬಳಿಕ ವರದಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರವಾನೆ ಮಾಡಲಾಗುತ್ತದೆ.

ಡೆಂಗ್ಯೂ ಹೇಗೆ ಹರಡುತ್ತದೆ?

ಡೆಂಗ್ಯೂ ಜ್ವರ ಸೊಳ್ಳೆಯಿಂದ ಹರಡುವ ವೈರಲ್ ಸೋಂಕು ಆಗಿದೆ. ಇದು ಈಡಿಪಸ್‌ ಎಂಬ ಹೆಣ್ಣು ಸೊಳ್ಳೆಗಳ ಕಡಿತದಿಂದ ಹರಡುತ್ತದೆ. ಸೊಳ್ಳೆ ಕಚ್ಚಿದ 4-7 ದಿನಗಳ ನಂತರ ರೋಗ ಲಕ್ಷಣಗಳು ಸಾಮಾನ್ಯವಾಗಿ ಕಂಡು ಬರುತ್ತವೆ. ಇದರ ಪ್ರಭಾವ 10 ದಿನಗಳವರೆಗೆ ಇರುತ್ತದೆ. ಹೀಗಾಗಿ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು, ಸ್ವಚ್ಛತೆಗೆ ಆದ್ಯತೆ ನೀಡುವುದು ಉತ್ತಮವಾಗಿದೆ.

ಡೆಂಗ್ಯೂ ಜ್ವರ ತಲೆನೋವಿನಂತಹ ರೋಗಲಕ್ಷಣಗಳನ್ನು ಉಂಟು ಮಾಡಬಹುದು. ಡೆಂಗ್ಯೂವನ್ನು ಹೆಮರಾಜಿಕ್ ಜ್ವರ ಎಂದೂ ಕರೆಯಲಾಗುತ್ತದೆ. ಡೆಂಗ್ಯೂ ಜ್ವರದ ತೀವ್ರ ಸ್ವರೂಪವು ತೀವ್ರ ರಕ್ತಸ್ರಾವ, ರಕ್ತದೊತ್ತಡ ಹಾಗೂ ರಕ್ತಕಣಗಳ ಸಂಖ್ಯೆಯಲ್ಲಿ ಭಾರಿ ಕುಸಿತವಾಗಿ ವ್ಯಕ್ತಿಯ ಸಾವಿಗೂ ಕಾರಣವಾಗಬಹುದು. ಅಧಿಕ ಜ್ವರ, ತೀವ್ರ ತಲೆನೋವು, ವಾಂತಿ, ದೇಹದ ವಿವಿಧ ಭಾಗಗಳಲ್ಲಿ ದದ್ದುಗಳು, ಗ್ರಂಥಿಗಳಲ್ಲಿ ಊತ, ಮೂಳೆ ಮತ್ತು ಕೀಲು ನೋವು, ರಕ್ತಸ್ರಾವವಾಗವುದು ರೋಗ ಲಕ್ಷಣಗಳಾಗಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Gruha Lakshmi
ಕರ್ನಾಟಕ9 mins ago

Gruha Lakshmi: ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಖಾತೆಗೆ ಇಂದು ಅಥವಾ ನಾಳೆ ಹಣ ಜಮೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸ್ಪಷ್ಟನೆ

Road Accident
ಕ್ರೈಂ9 mins ago

Road Accident: ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಬೈಕ್‌ನಿಂದ ಬಿದ್ದು ನವ ವಿವಾಹಿತೆ ಸಾವು

INDW vs SAW
ಕ್ರೀಡೆ10 mins ago

INDW vs SAW: ವಿಶ್ವ ದಾಖಲೆ ನಿರ್ಮಿಸಿದ ಭಾರತ ಮಹಿಳಾ ತಂಡ

Karnataka CM Row
ಪ್ರಮುಖ ಸುದ್ದಿ13 mins ago

Karnataka CM Row: ‘ಗೌಡ’ ಸಿಎಂ ಆಯ್ತು, ಈಗ ‘ಲಿಂಗಾಯತ’ ಸಿಎಂ ಕೂಗು; ರಂಭಾಪುರಿ ಶ್ರೀ ಹೇಳಿದ ಹೆಸರಿದು!

Dengue Fever
ಚಿಕ್ಕಮಗಳೂರು43 mins ago

Dengue Fever : ಡೆಂಗ್ಯೂ ಮಹಾಮಾರಿಗೆ ಚಿಕ್ಕಮಗಳೂರಿನಲ್ಲಿ ಬಾಲಕಿ ಬಲಿ; ಈವರೆಗೆ ಐವರು ಸಾವು

Aiden Markram
ಕ್ರೀಡೆ54 mins ago

Aiden Markram: ಧೋನಿಯಂತೆ ಮಾರ್ಕ್ರಮ್​ ಕೂಡ ಲಕ್ಕಿ ಕ್ಯಾಪ್ಟನ್​; ಸಾಧನೆ ಹೀಗಿದೆ

Fahadh Faasil in trouble faces Human Rights Commission action
ಮಾಲಿವುಡ್59 mins ago

Fahadh Faasil: ಮಲಯಾಳಂ ಸ್ಟಾರ್ ಫಹಾದ್ ಫಾಸಿಲ್ ವಿರುದ್ಧ ದೂರು ದಾಖಲು

Viral Video
ವೈರಲ್ ನ್ಯೂಸ್1 hour ago

Viral Video: ಖೈದಿ ಜೊತೆಗೆ ಮಹಿಳಾ ಪೊಲೀಸ್‌ ಅಧಿಕಾರಿ ಲೈಂಗಿಕ ಕ್ರಿಯೆ; ಭಾರೀ ವೈರಲ್‌ ಆಗ್ತಿದೆ ಈ ವಿಡಿಯೋ

5 Soldiers Killed
ದೇಶ1 hour ago

5 Soldiers Killed: ಲಡಾಕ್‌ನ ನದಿಯಲ್ಲಿ ಸೇನಾ ವಾಹನ ಮಗುಚಿ ಭೀಕರ ದುರಂತ; ಐವರು ಯೋಧರು ಹುತಾತ್ಮ

DK Shivakumar
ಕರ್ನಾಟಕ1 hour ago

DK Shivakumar: ಸಿಎಂ, ಡಿಸಿಎಂ ಚರ್ಚೆ ಇಲ್ಲ, ಬಾಯಿಗೆ ಬೀಗ ಹಾಕಿಕೊಂಡಿರಿ; ಡಿಕೆಶಿ ಖಡಕ್‌ ಎಚ್ಚರಿಕೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ19 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

ಟ್ರೆಂಡಿಂಗ್‌