Site icon Vistara News

Shivamogga News | ಫೆ.8ರಂದು ಮುಖ್ಯಮಂತ್ರಿಯಿಂದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ: ಕೆ.ಎಸ್.ಈಶ್ವರಪ್ಪ

KS Eshwarappa shivamogga

ಶಿವಮೊಗ್ಗ: ನಗರದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 8ರಂದು ನೆರವೇರಿಸುವರು ಎಂದು ಶಾಸಕ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ (ಜ.೧೯) ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆ ಹಾಗೂ ಪ್ರಮುಖ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಗುವುದು. ಎಲ್ಲ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕಾಮಗಾರಿಗಳ ವಿವರಗಳನ್ನು ಜಿಲ್ಲಾಧಿಕಾರಿಗೆ ತಕ್ಷಣ ಸಲ್ಲಿಸುವಂತೆ ಸೂಚನೆ ನೀಡಿದರು.

ಇದನ್ನೂ ಓದಿ | Rakhi Sawant Arrested | ಮದುವೆ ವಿಚಾರಕ್ಕೆ ಸುದ್ದಿಯಾದ ಬೆನ್ನಲ್ಲೇ ರಾಖಿ ಸಾವಂತ್‌ ಬಂಧನ, ಏನಿದು ಪ್ರಕರಣ?

ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ 23 ಶಾಲೆಗಳಲ್ಲಿ ಸ್ಮಾರ್ಟ್ ತರಗತಿಗಳನ್ನು ಅನುಷ್ಠಾನಗೊಳಿಸಲಾಗಿದೆ. ವಿವೇಕ ಶಾಲೆ ಯೋಜನೆಯಡಿ 14 ಕಾಮಗಾರಿಗಳ ಶಂಕುಸ್ಥಾಪನೆ, ಪಾಲಿಕೆ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ 10 ಅಂಗನವಾಡಿಗಳ ಉದ್ಘಾಟನೆ ಹಾಗೂ ಇನ್ನೂ 11 ಅಂಗನವಾಡಿಗಳಿಗೆ ಶಂಕುಸ್ಥಾಪನೆ, ಈಗಾಗಲೇ ಪೂರ್ಣಗೊಂಡಿರುವ 300 ಆಶ್ರಯ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರ, ನಿರ್ಮಿತಿ ಕೇಂದ್ರದ ವತಿಯಿಂದ ಕೈಗೊಳ್ಳಲಾಗಿರುವ 24 ಸಮುದಾಯ ಭವನಗಳ ಉದ್ಘಾಟನೆ ಹಾಗೂ ಪ್ರಾದೇಶಿಕ ಲಸಿಕಾ ಕೇಂದ್ರಕ್ಕೆ ಶಂಕುಸ್ಥಾಪನೆ ಸೇರಿದಂತೆ ಎಲ್ಲ ಪ್ರಮುಖ ಕಾಮಗಾರಿಗಳ ವಿವರಗಳನ್ನು ಒದಗಿಸಬೇಕು ಎಂದು ಹೇಳಿದರು.

ಇದನ್ನೂ ಓದಿ | PM Narendra Modi | ಸಿನಿಮಾಗಳ ವಿರುದ್ದ ಅನಗತ್ಯ ಟೀಕೆ! ಪಿಎಂ ಮೋದಿ ಮಾತುಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಚಿತ್ರೋದ್ಯಮ

ಈಗಾಗಲೇ 300 ಆಶ್ರಯ ಮನೆಗಳು ಪೂರ್ಣಗೊಂಡಿದ್ದು, ಅದಕ್ಕೆ ನೀರು, ವಿದ್ಯುತ್ ಮತ್ತು ಒಳಚರಂಡಿ ಸಂಪರ್ಕಗಳನ್ನು ತಕ್ಷಣ ಕಲ್ಪಿಸಿ ಫಲಾನುಭವಿಗಳಿಗೆ ಹಕ್ಕುಪತ್ರ ಒದಗಿಸಲು ಕ್ರಮ ಕೈಗೊಳ್ಳಬೇಕು. ಎನ್‍ಇಎಸ್ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಆರ್.ಸೆಲ್ವಮಣಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್, ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ | College campus | ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ಕಾಂಡೋಮ್‌, ಬಿಯರ್‌ ಬಾಟಲಿ ಪತ್ತೆ: ಏನಾಗುತ್ತಿದೆ ಇಲ್ಲಿ?

Exit mobile version