Site icon Vistara News

Shivamogga News: ಸವಳಂಗ ರಸ್ತೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬ; ಕಾಲೇಜು ವಿದ್ಯಾರ್ಥಿಗಳು, ನಾಗರಿಕರಿಂದ ಪ್ರತಿಭಟನೆ

ailway overbridge Law college students protest shivamogga

#image_title

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಸವಳಂಗ ರಸ್ತೆಯ ರೈಲ್ವೆ ಮೇಲ್ಸೇತುವೆ (railway overbridge) ಕಾಮಗಾರಿ ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿದ್ದು, ನಿರ್ಮಾಣ ವಿಳಂಬವಾಗುತ್ತಿದೆ ಎಂದು ಆಪಾದಿಸಿ ಕಾನೂನು ಕಾಲೇಜು ವಿದ್ಯಾರ್ಥಿಗಳು ಮತ್ತು ನಾಗರಿಕರು ಸೋಮವಾರ (ಫೆ.೨೦) ಪ್ರತಿಭಟನೆ ನಡೆಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, “ರೈಲ್ವೆ ಮೇಲ್ಸೇತುವೆ ವಿಳಂಬ ನಿರ್ಮಾಣದಿಂದಾಗಿ, ಸಾರ್ವಜನಿಕರ ಜೀವ ಮತ್ತು ಜೀವನಕ್ಕೆ ತೊಂದರೆ ಆಗುತ್ತಿದೆ. ಸವಳಂಗ ರಸ್ತೆಯಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ತುಂಬಾ ಮಂದಗತಿಯಲ್ಲಿ ಸಾಗುತ್ತಿದೆ. ಇಲ್ಲಿ ಸಾಗುವ ವಾಹನಗಳಿಗೆ ಬದಲಿ ಸೇವಾ ರಸ್ತೆ ಕಲ್ಪಿಸಿಲ್ಲ. ಇದರಿಂದ ರೈಲ್ವೆ ಗೇಟ್ ಹಾಕಿದ ಸಂದರ್ಭದಲ್ಲಿ ಗಂಟೆಗಟ್ಟಲೆ ವಾಹನ ದಟ್ಟಣೆ ಉಂಟಾಗುತ್ತದೆ” ಎಂದು ದೂರಿದ್ದಾರೆ.

ಇದನ್ನೂ ಓದಿ: Viral Video: ಕಾಶ್ಮೀರದ ಗುಲ್ಮಾರ್ಗದ ಹಿಮದಲ್ಲಿ ರಾಹುಲ್-ಪ್ರಿಯಾಂಕ ಸ್ನೋಮೊಬೈಲ್ ಸವಾರಿ!

“ಕಾಮಗಾರಿಗಾಗಿ ದೊಡ್ಡ ದೊಡ್ಡ ಗುಂಡಿಗಳನ್ನು ತೆಗೆಯಲಾಗಿದೆ. ಅಲ್ಲಿಯೇ ದ್ವಿಚಕ್ರ ವಾಹನಗಳು ಓಡಾಡುವುದರಿಂದ ತೊಂದರೆಯಾಗುತ್ತಿದೆ. ಎಚ್ಚರಿಕೆಯ ಸೂಚನಾ ಫಲಕಗಳನ್ನು ಕೂಡ ಅಳವಡಿಸಿಲ್ಲ. ರೈಲ್ವೆ ಗೇಟ್ ಹಾಕಿದಾಗ ಅಕಸ್ಮಾತ್ ಆಂಬುಲೆನ್ಸ್‌ ಗಳು ಬಂದರೆ ಯಾವುದೇ ಕಾರಣಕ್ಕೂ ರೈಲ್ವೆ ಗೇಟ್ ತೆರೆದಾಗ ತುರ್ತಾಗಿ ಸಾಗಲು ಸಾಧ್ಯವಿಲ್ಲ. ಈ ಹಿಂದೆ ರೋಗಿಯೊಬ್ಬರನ್ನು ಆಂಬುಲೆನ್ಸ್‌ ನಲ್ಲಿ ಕರೆದೊಯ್ಯುವಾಗ ಅರ್ಧ ಗಂಟೆಗೂ ಹೆಚ್ಚು ಕಾಲ ಕಾಯುವ ಪರಿಸ್ಥಿತಿ ನಿರ್ಮಾಣವಾಗಿ ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಸಾಗಿಸಲಾಗದೆ ಮೃತಪಟ್ಟರು. ಈ ಅವ್ಯಸ್ಥೆಗೆ ಕಾರಣವಾದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: INDvsAUS : ಕೆ ಎಲ್​ ರಾಹುಲ್​ ವಿರುದ್ಧ ಮಗದೊಮ್ಮೆ ಟೀಕೆಗಳ ಪ್ರಹಾರ ನಡೆಸಿದ ವೆಂಕಟೇಶ್​ ಪ್ರಸಾದ್​

Exit mobile version