Site icon Vistara News

Shivamogga News: ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳ ಸುತ್ತ ಬೇಲಿ ನಿರ್ಮಿಸುವಂತೆ ವಿಶ್ವ ಹಿಂದೂ ಪರಿಷತ್, ಬಜರಂಗ ದಳ ಒತ್ತಾಯ

Demand for fencing around power transformers at soraba

ಸೊರಬ: ಪುರಸಭೆ ವ್ಯಾಪ್ತಿಯಲ್ಲಿ ಅಪಾಯಕ್ಕೆ ಆಹ್ವಾನ ನೀಡುತ್ತಿರುವ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳ (power transformers) ಸುತ್ತ ಬೇಲಿ (Fencing) ನಿರ್ಮಿಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್-ಬಜರಂಗ ದಳದ ವತಿಯಿಂದ ಪಟ್ಟಣದ ಮೆಸ್ಕಾಂ ಕಚೇರಿಗೆ ತೆರಳಿ ಮೆಸ್ಕಾಂ ಎಇಇ ಎಸ್. ಸತ್ಯಪ್ರಕಾಶ್ ಅವರಿಗೆ ಮನವಿ ಸಲ್ಲಿಸಲಾಯಿತು.

ವಿಹಿಂಪ ತಾಲೂಕು ಅಧ್ಯಕ್ಷ ಎಂ.ಎಸ್. ಕಾಳಿಂಗರಾಜ್ ನೇತೃತ್ವ ವಹಿಸಿ ಮಾತನಾಡಿ, ಪುರಸಭೆ ವ್ಯಾಪ್ತಿಯಲ್ಲಿನ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳ ಸುತ್ತ ಬೇಲಿ ಇಲ್ಲದೆ, ಅನೇಕ ಅನಾಹುತಗಳಿಗೆ ಕಾರಣವಾಗುತ್ತಿದೆ. ಮರೂರು ರಸ್ತೆಯಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳ ಬಳಿ ವಿದ್ಯುತ್ ಸ್ಪರ್ಶಿಸಿ ಸುಮಾರು ಒಂದು ಲಕ್ಷ ಮೌಲ್ಯದ ಸೀಮೆ ಹಸುವೊಂದು ಭಾನುವಾರ ಮೃತಪಟ್ಟಿದೆ.

ಇದನ್ನೂ ಓದಿ: Asian Games 2023 : ಏಷ್ಯನ್​ ಗೇಮ್ಸ್​ನ ಕ್ರಿಕೆಟ್​ ವೇಳಾಪಟ್ಟಿಯ ಬಗ್ಗೆ ಇಲ್ಲಿದೆ ಮಾಹಿತಿ

ಇದೇ ಸ್ಥಳದಲ್ಲಿ ಕಳೆದ ವರ್ಷವೂ ಸಹ ಬಿಡಾಡಿ ದನವೊಂದು ಮೃತಪಟ್ಟಿತ್ತು. ಈ ಬಗ್ಗೆ ಮೌಖಿಕವಾಗಿ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಅನೇಕ ಅನಾಹುತಗಳಿಗೆ ಕಾರಣವಾಗುತ್ತಿರುವ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ ಸುತ್ತ ಬೇಲಿ ನಿರ್ಮಿಸುವ ತುರ್ತು ಅಗತ್ಯವಿದೆ ಎಂದರು.

ಮರೂರು ರಸ್ತೆಯ ಟ್ರಾನ್ಸ್‌ಫಾರ್ಮರ್‌ ಬಳಿ ಶಾಲೆ ಇದ್ದು, ನಿತ್ಯ ಸಾವಿರಾರು ಜನ ಇದೇ ಮಾರ್ಗವಾಗಿ ಸಂಚರಿಸುತ್ತಿರುತ್ತಾರೆ. ಮಕ್ಕಳು ಇಲ್ಲೇ ಸುತ್ತ ಮುತ್ತ ಆಟವಾಡುತ್ತಿರುತ್ತಾರೆ. ಮಕ್ಕಳು ಆಟವಾಡುವ ವೇಳೆಯಲ್ಲಿ ಅಪಾಯ ಸಂಭವಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಇದೇ ಮಾದರಿಯಲ್ಲಿ ಪುರಸಭೆ ವ್ಯಾಪ್ತಿಯಲ್ಲಿ ಅನೇಕ ಟ್ರಾನ್ಸ್‌ಫಾರ್ಮರ್‌ಗಳಿವೆ. ಅವುಗಳ ಸುತ್ತ ಬೇಲಿ ನಿರ್ಮಿಸಬೇಕು. ಹಾಗೂ ಮರೂರು ರಸ್ತೆಯಲ್ಲಿ ವಿದ್ಯುತ್ ಸ್ಪರ್ಶದಿಂದ ಮೃತ ಪಟ್ಟಿರುವ ಹಸುವಿನ ಮಾಲಿಕರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ನಂತರ ತಹಶೀಲ್ದಾರ್ ಹಾಗೂ ಪಪಂ ಮುಖ್ಯಾಧಿಕಾರಿಗಳಿಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಲಾಯಿತು.‌

ಇದನ್ನೂ ಓದಿ: Tomato price hike : ಈ ರೈತ ಕೇವಲ ಟೊಮ್ಯಾಟೊ ಮಾರಿ, 2.8 ಕೋಟಿ ರೂ. ಗಳಿಸಿದ್ದು ಹೇಗೆ?

ಈ ಸಂದರ್ಭದಲ್ಲಿ ಬಜರಂಗ ದಳ ತಾಲೂಕು ಸಂಚಾಲಕ ರಂಗನಾಥ ಮೊಗವೀರ್, ಪ್ರಮುಖರಾದ ರವಿ ಗುಡಿಗಾರ್, ನಾಗರಾಜ್ ಆಚಾರ್ ಅಂಬಾರಿ, ಹರೀಶ್, ನಾಗರಾಜ ಗೌಳಿ ಸೇರಿದಂತೆ ಇತರರಿದ್ದರು.

Exit mobile version