ರಿಪ್ಪನ್‌ಪೇಟೆ: ಹೊಸನಗರ ತಾಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿಯಾಗಿರುವ ರಿಪ್ಪನ್‌ಪೇಟೆ (Ripponpet) ಗ್ರಾಮ ಪಂಚಾಯಿತಿಗೆ 2ನೇ ಅವಧಿಗೆ ನಡೆದ ಅಧ್ಯಕ್ಷ (President) ಮತ್ತು ಉಪಾಧ್ಯಕ್ಷ (Vice President) ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಬೆಂಬಲಿತ ಅಭ್ಯರ್ಥಿ ಧನಲಕ್ಷ್ಮಿ ಅಧ್ಯಕ್ಷರಾಗಿ, ಬಿಜೆಪಿ (BJP) ಬೆಂಬಲಿತ ಅಭ್ಯರ್ಥಿ ಸುಧೀಂದ್ರ ಪೂಜಾರಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಒಟ್ಟು 21 ಸದಸ್ಯರ ಬಲವುಳ್ಳ ಗ್ರಾಪಂನಲ್ಲಿ ಅಧ್ಯಕ್ಷ ಸ್ಥಾನ ಮಹಿಳಾ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗಕ್ಕೆ ಮೀಸಲಾಗಿತ್ತು.
ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಧನಲಕ್ಷ್ಮಿ, ಬಿಜೆಪಿಯಿಂದ ದೀಪ ಸುಧೀರ್ ಸ್ಪರ್ಧಿಸಿದ್ದರು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಆಸಿಫ್ ಭಾಷಾ ಸಾಬ್, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸುಧೀಂದ್ರ ಪೂಜಾರಿ ಸ್ಪರ್ಧಿಸಿದ್ದರು.
ಇದನ್ನೂ ಓದಿ: IND vs WI: 4ನೇ ಟಿ20; ಹಾರ್ದಿಕ್ ಪಡೆಗೆ ಮಸ್ಟ್ ವಿನ್ ಗೇಮ್
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಧನಲಕ್ಷ್ಮಿ ಅಧ್ಯಕ್ಷರಾಗಿ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಧೀಂದ್ರ ಪೂಜಾರಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿ ಮಲ್ಲಿಕಾರ್ಜುನ್ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು ಹಾಗೂ ಗ್ರಾಪಂ ಅಭಿವೃದ್ಧಿ ಅಧಿಕಾರಿ ಎನ್ ಮಧುಸೂದನ್ ಸಹಕರಿಸಿದರು.
ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ನೂತನ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಮಾತನಾಡಿ, ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಮೊದಲು ಆದ್ಯತೆ ನೀಡುತ್ತೇನೆ. ನನಗೆ ಅಧ್ಯಕ್ಷ ಸ್ಥಾನ ಲಭಿಸಲು ಕಾರಣೀಕರ್ತರಾದ ಬೇಳೂರು ಗೋಪಾಲಕೃಷ್ಣ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಂಡಿ ರಾಮಚಂದ್ರ ಹಾಗೂ ಕಾಂಗ್ರೆಸ್ ಮುಖಂಡರು ಮತ್ತು ಗ್ರಾಪಂ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಇದನ್ನೂ ಓದಿ: Prithvi Shaw: ಆಯ್ಕೆ ಸಮಿತಿ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ; ಪೃಥ್ವಿ ಶಾ
ಈ ಸಂದರ್ಭದಲ್ಲಿ ಹೊಸನಗರ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ನಾಗರಾಜ್, ಫ್ಯಾನ್ಸಿ ರಮೇಶ್, ಪಿ.ಎನ್.ಟಿ. ಶ್ರೀಧರ್, ರವೀಂದ್ರ ಕೆರೆಹಳ್ಳಿ, ಉಲ್ಲಾಸ್, ಕೆಂಚನಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಬೆದುಲ್ಲ ಶರೀಫ್ ಸೇರಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು.