Site icon Vistara News

Shivamogga News: ಕೃಷಿಯಲ್ಲಿ ಆಧುನಿಕತೆ ಅಳವಡಿಸಿಕೊಳ್ಳಿ: ಕೃಷಿ ಅಧಿಕಾರಿ ಸಂಜೀವ್

Agricultural information program for farmers

ಸೊರಬ: ದೇಶವು ವಿಜ್ಞಾನ ಮತ್ತು ತಂತ್ರಜ್ಞಾನ (Science and Technology) ಕ್ಷೇತ್ರದಲ್ಲಿ ಜಗತ್ತಿನ (World) ಗಮನವನ್ನು ತನ್ನತ್ತ ಸೆಳೆಯುತ್ತಿದ್ದು, ರೈತರು (Farmers) ಸಹ ಕೃಷಿಯಲ್ಲಿ (Agriculture) ಆಧುಕನಿಕತೆ ಅಳವಡಿಸಿಕೊಂಡರೆ ಉತ್ತಮ ಇಳುವರಿ ಪಡೆಯಬಹುದು ಎಂದು ಕೃಷಿ ಅಧಿಕಾರಿ ಸಂಜೀವ್ ಹೇಳಿದರು.

ಪಟ್ಟಣದ ಸಮೀಪದ ಕುಣಜಿಬೈಲ್ ಗ್ರಾಮದ ಶಿವಪ್ಪ ಗುರೇನ್ ಅವರ ಜಮೀನಿನಲ್ಲಿ ಶುಕ್ರವಾರ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಹಾಗೂ ಮಲೆನಾಡು ಸಿರಿ ಸೇವಾ ಟ್ರಸ್ಟ್ ವತಿಯಿಂದ ಹಮ್ಮಿಕೊಂಡ ರೈತರೊಂದಿಗೆ ನಾಟಿ ಸಂಭ್ರಮ ಹಾಗೂ ಚಂದ್ರಯಾನ-3ರ ಯಶಸ್ವಿಗೆ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರೈತರಿಗೆ ಸರ್ಕಾರ ಅನೇಕ ಸೌಲಭ್ಯಗಳನ್ನು ಒದಗಿಸುತ್ತಿದೆ. ಇವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಬೆಳೆಗಳಿಗೆ ರೋಗ ತಗುಲದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದ ಅವರು, ಕೃಷಿಯಲ್ಲಿ ಅಧಿಕ ಇಳುವರಿ ಪಡೆಯಲು ಇರುವ ಮಾರ್ಗಸೂಚಿಗಳ ಕುರಿತು ಮಾಹಿತಿ ನೀಡಿದರು.

ಇದನ್ನೂ ಓದಿ: Chandrayaan 3 : ಮಿಷನ್‌ ಚಂದ್ರಯಾನ 3 ಯಶಸ್ಸಿನಲ್ಲಿ ಒಂದೇ ಊರಿನ ಮೂವರು ವಿಜ್ಞಾನಿಗಳು ಭಾಗಿ!

ಮಲೆನಾಡು ಸಿರಿ ಸೇವಾ ಟ್ರಸ್ಟ್ ಪ್ರಮುಖರಾದ ರಾಜು ಹಿರಿಯಾವಲಿ ಮಾತನಾಡಿ, ಇಸ್ರೋ ವಿಜ್ಞಾನಿಗಳ ಕಠಿಣ ಪರಿಶ್ರಮದಿಂದ ಚಂದ್ರಯಾನ-3 ಯಶಸ್ವಿಯಾಗಿದ್ದು, ಜಗತ್ತಿನಲ್ಲಿಯೇ ಭಾರತ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದೆ. ಅವರಿಗೆ ರೈತರ ಮೂಲಕ ಅಭಿನಂದನೆಗಳನ್ನು ಸಲ್ಲಿಸಲಾಗುತ್ತಿದೆ. ಜೊತೆಗೆ ಕೃಷಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರೈತರೊಂದಿಗೆ ನಾಟಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕೃಷಿ ಅಧಿಕಾರಿಗಳು ಗ್ರಾಮೀಣ ಭಾಗದ ರೈತರಿಗೆ ಸಮಗ್ರ ಮಾಹಿತಿ ನೀಡಲು ಹೋಬಳಿ ಮಟ್ಟದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.

ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಡಿ.ಎಸ್. ಶಂಕರ್ ಶೇಟ್ ಮಾತನಾಡಿದರು.

ಇದೇ ಸಂದರ್ಭದಲ್ಲಿ ಕೃಷಿ ಅಧಿಕಾರಿ ಸಂಜೀವ್, ರೈತ ಮಹಿಳೆಯರಾದ ನಾಗರತ್ನ ಮತ್ತು ರತ್ನಮ್ಮ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಹಿರೇಶಕುನ ಗ್ರಾಮ ಸಲಹಾ ಸಮಿತಿ ಅಧ್ಯಕ್ಷ ಎಂ. ಗುರುಮೂರ್ತಿ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: Govt School : ಕಾಸರಗೋಡು ಕನ್ನಡ ಶಾಲೆಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಕೇರಳ ಹೈಕೋರ್ಟ್‌ ನಿರ್ದೇಶನ

ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಈರೇಶ್ ಮೇಸ್ತ್ರಿ, ಗ್ರಾಮದ ಪ್ರಮುಖರಾದ ರಾಮಪ್ಪ ಮಂಚಿ, ಹನುಮಂತಪ್ಪ, ಶಿವಪ್ಪ ಗುರೇನ್, ರೋಹಿತ್, ಸಂತೋಷ್ ನಡಹಳ್ಳಿ, ಚಿದಂಬರ ಹಿರೇಶಕುನ, ಸೇರಿದಂತೆ ಇತರರು ಉಪಸ್ಥಿತರಿದ್ದರು.

Exit mobile version