Site icon Vistara News

Vistara News Impact : ರಿಪ್ಪನ್‌ಪೇಟೆ ಕಟ್ಟಡ ಕಾರ್ಮಿಕ ಸಂಘದಿಂದ ಬಡ ಮಹಿಳೆಯ ಕುಟುಂಬಕ್ಕೆ ಆರ್ಥಿಕ ನೆರವು

Shivamogga News Financial assistance to poor woman s family at Ripponpet

ರಿಪ್ಪನ್‌ಪೇಟೆ: ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡ ಮಹಿಳೆಯ (Poor Woman’s family) ಕುಟುಂಬಕ್ಕೆ ರಿಪ್ಪನ್‌ಪೇಟೆಯ ಕಟ್ಟಡ ಕಾರ್ಮಿಕ ಸಂಘದವರು ಆರ್ಥಿಕ ನೆರವು (Financial Assistance) ನೀಡಿದ್ದಾರೆ.

“ವಾಸಿಸಲು ಮನೆಯಿಲ್ಲದೇ ಬುದ್ಧಿಮಾಂದ್ಯ ಮಗಳೊಂದಿಗೆ ಕತ್ತಲಲ್ಲೇ ಈ ಮಹಿಳೆಯ ಬದುಕು” ಎಂಬ ಶೀರ್ಷಿಕೆಯೊಂದಿಗೆ ವಿಸ್ತಾರ ನ್ಯೂಸ್‌ನಲ್ಲಿ (Vistara News Impact) ಸುದ್ದಿ ಪ್ರಕಟವಾಗಿತ್ತು.

ಇದನ್ನು ಗಮನಿಸಿದ ರಿಪ್ಪನ್‌ಪೇಟೆಯ ಕಟ್ಟಡ ಕಾರ್ಮಿಕ ಸಂಘದವರು ಮಹಿಳೆಯನ್ನು ಸಂಪರ್ಕಿಸಿ ನೆರವು ನೀಡಿದ್ದಾರೆ. ನಗದು ಪರಿಹಾರವನ್ನು ನೀಡುವುದರ ಜತೆಗೆ ದಿನಸಿ ವಸ್ತುಗಳ ಕಿಟ್ ಸಹ ನೀಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ

ಇದನ್ನೂ ಓದಿ: Chandrayaan 3: ಚಂದ್ರನ ಅಂಗಳದಲ್ಲಿ ವಿಕ್ರಮನ ಬೆನ್ನತ್ತಿದ ನಾಸಾ; ಲ್ಯಾಂಡಿಂಗ್ ಫೋಟೊಗಳೂ ರಿಲೀಸ್

ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಲಿನಸಂಪಳ್ಳಿ ಗ್ರಾಮದ ಶಶಿಕಲಾ ಎಂಬ ಮಹಿಳೆ ಕೆಲ ವರ್ಷಗಳ ಹಿಂದೆ ತಮ್ಮ ಪತಿಯನ್ನು ಕಳೆದುಕೊಂಡಿದ್ದರು. ಅವರಿಗೆ ಇರುವ ಏಕೈಕ ಮಗಳಾದ ಪೂಜಾ ಬುದ್ಧಿಮಾಂದ್ಯ ಹಾಗೂ ವಿಕಲಚೇತನಳಾಗಿದ್ದು, ತಾಯಿ ಶಶಿಕಲಾ ಅವರಿಗೂ ಕಿವಿ ಸರಿಯಾಗಿ ಕೇಳಿಸದು. ಜೋಪಡಿಯಂತಿದ್ದ ಮನೆ ಕೆಲ ವರ್ಷಗಳ ಹಿಂದೆ ಸಂಪೂರ್ಣ ಶಿಥಿಲಗೊಂಡು ಗ್ರಾಮದ ಸಮುದಾಯ ಭವನದಲ್ಲೇ ತಾಯಿ ಮಗಳು ವಾಸ ಮಾಡುತ್ತಿದ್ದಾರೆ. ಆದರೆ ಈ ಕುಟುಂಬಕ್ಕೆ ಸರ್ಕಾರದ ಯಾವ ಯೋಜನೆಗಳೂ ಸಹ ಇದುವರೆಗೆ ಸಿಕ್ಕಿಲ್ಲ.

ಇದನ್ನೂ ಓದಿ: Asia Cup 2023: ಭಾರತ-ಪಾಕ್ ನಡುವಣ​ ಸೂಪರ್​-4 ಪಂದ್ಯಕ್ಕೆ ಮಳೆ ಬಂದರೆ ಮೀಸಲು ದಿನ ಇದೆಯೇ?

ಈ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಮೊಹಮ್ಮದ್ ಹುಸೇನ್, ಗೌರವ ಅಧ್ಯಕ್ಷ ರಮೇಶ್ ಬಿ. ಆರ್. ಹಾಗೂ ಪದಾಧಿಕಾರಿಗಳಾದ ಗಣೇಶ್ ಎ. ಆರ್., ಮಂಜುನಾಥ್ ಆಚಾರ್, ಸೀನ ಆಚಾರ್, ರಾಘು ಬಿ. ಎನ್. ಸೇರಿದಂತೆ ಇತರರು ಉಪಸ್ಥಿತರಿದ್ದರು.

Exit mobile version