ಕರ್ನಾಟಕ
Shivamogga News: ಶಿವಮೊಗ್ಗ ಲೋಕೋಪಯೋಗಿ ಭವನ ಉದ್ಘಾಟಿಸಿದ ಬಿ.ಎಸ್. ಯಡಿಯೂರಪ್ಪ
Shivamogga News: ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ಲೋಕೋಪಯೋಗಿ ಭವನ’ವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಲೋಕಾರ್ಪಣೆಗೊಳಿಸಿದರು.
ಶಿವಮೊಗ್ಗ: ಲೋಕೋಪಯೋಗಿ ಇಲಾಖೆಯಿಂದ ನಗರದ ಬಾಲರಾಜ್ ಅರಸ್ ರಸ್ತೆ ಬಳಿ ನೂತನವಾಗಿ ನಿರ್ಮಿಸಲಾಗಿರುವ ‘ಲೋಕೋಪಯೋಗಿ ಭವನ’ವನ್ನು (Public Works Bhavan) ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶನಿವಾರ (ಮಾ.18) ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಲೋಕೋಪಯೋಗಿ ಇಲಾಖೆಯ ಮುಖ್ಯ ಎಂಜಿನಿಯರ್ ಬಿ.ಟಿ. ಕಾಂತರಾಜು, ಅಧೀಕ್ಷಕ ಎಂಜಿನಿಯರ್ ಕೆ.ಜಿ. ಜಗದೀಶ್, ಕಾರ್ಯಪಾಲಕ ಎಂಜಿನಿಯರ್‌ಗಳಾದ ಸಂಪತ್ ಕುಮಾರ್ ಪಿಂಗ್ಳೆ, ಕಿರಣ್ ಎಸ್. ಸೇರಿದಂತೆ ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ಇದನ್ನೂ ಓದಿ: Arshdeep Singh: ಕೌಂಟಿ ಕ್ರಿಕೆಟ್ನತ್ತ ಮುಖ ಮಾಡಿದ ಎಡಗೈ ವೇಗಿ ಅರ್ಶ್ದೀಪ್ ಸಿಂಗ್
ಕರ್ನಾಟಕ
Reservation: ಒಬಿಸಿ ಮೀಸಲಾತಿ ಪುನರ್ ವರ್ಗೀಕರಿಸಿ ರಾಜ್ಯ ಸರ್ಕಾರ ಆದೇಶ; 2ಸಿ ಪ್ರವರ್ಗಕ್ಕೆ ಶೇ.6, 2ಡಿ ಪ್ರವರ್ಗಕ್ಕೆ ಶೇ.7 ಮೀಸಲಾತಿ
Reservation: ಒಕ್ಕಲಿಗರು ಮತ್ತು ಇತರ ಜಾತಿಗಳಿರುವ ಪ್ರವರ್ಗ 2ಸಿಗೆ ಶೇ.6 ಮತ್ತು ಲಿಂಗಾಯತರು, ವೀರಶೈವ ಪಂಚಮಸಾಲಿ ಹಾಗೂ ಇತರೆ ಜಾತಿಗಳಿರುವ ಪ್ರವರ್ಗ 2ಡಿಗೆ ಶೇ.7ರಷ್ಟು ಮೀಸಲಾತಿ ನಿಗದಿ ಮಾಡಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಒಕ್ಕಲಿಗ ಮತ್ತು ವೀರಶೈವ ಪಂಚಮಸಾಲಿ ಮೀಸಲಾತಿ ಪ್ರಮಾಣವನ್ನು ತಲಾ ಶೇ.2ರಷ್ಟು ಹೆಚ್ಚಿಸಲು ಸಚಿವ ಸಂಪುಟ ನಿರ್ಧಾರ ಕೈಗೊಂಡ ಬೆನ್ನಲ್ಲೇ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು (Reservation) ಪುನರ್ ವರ್ಗೀಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅತ್ಯಂತ ಹಿಂದುಳಿದ ಒಬಿಸಿ ಪ್ರವರ್ಗ-1ಕ್ಕೆ ಶೇ.4, ಪ್ರವರ್ಗ-2ಎ ಶೇ.15, ಪ್ರವರ್ಗ 2ಬಿ ಶೇ.0, ಅತೀ ಹಿಂದುಳಿದ ಪ್ರವರ್ಗ 2ಸಿಗೆ ಶೇ.6 ಹಾಗೂ ಪ್ರವರ್ಗ 2ಡಿಗೆ ಶೇ.7 ಮೀಸಲಾತಿ ಸೇರಿ ಒಟ್ಟು ಶೇ. 32ರಷ್ಟು ಮೀಸಲಾತಿ ನೀಡಿ ಆದೇಶ ಹೊರಡಿಸಲಾಗಿದೆ. ರಾಜ್ಯದ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ದೃಷ್ಟಿಯಿಂದ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ಪುನರ್ ವರ್ಗೀಕರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಇಲಾಖೆ ತಿಳಿಸಿದೆ.
ಈ ಹಿಂದೆ ಒಕ್ಕಲಿಗರು ಮತ್ತು ಪಂಚಮಸಾಲಿಗಳಿಗೆ 2ಸಿ ಮತ್ತು 2 ಡಿ ಎಂಬ ಎರಡು ಹೊಸ ಪ್ರವರ್ಗಗಳನ್ನು ಸೃಷ್ಟಿಸಲಾಗಿತ್ತು. ಇವರಿಗೆ ಕೇಂದ್ರ ಸರ್ಕಾರ ಮೇಲ್ವರ್ಗದ ಬಡವರಿಗೆ ನಿಗದಿಪಡಿಸಿದ ಇಡಬ್ಲ್ಯುಎಸ್ ಶೇ. 10 ಮೀಸಲಾತಿಯಲ್ಲಿ ಅವಕಾಶ ನೀಡಲು ನಿರ್ಧರಿಸಲಾಗಿತ್ತು. ಆದರೆ, ಮಾ.24ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಕ್ಕಲಿಗರಿಗೆ ಮತ್ತು ವೀರಶೈವ ಪಂಚಮಸಾಲಿಗಳಿಗೆ ಮೀಸಲಾತಿಯನ್ನು ತಲಾ ಶೇ.2ರಷ್ಟು ಹೆಚ್ಚಿಸಲು ತೀರ್ಮಾನಿಸಲಾಗಿತ್ತು. ಜತೆಗೆ ಇತರ ಹಿಂದುಳಿದ ವರ್ಗದಲ್ಲಿ ಧಾರ್ಮಿಕ ಅಲ್ಪ ಸಂಖ್ಯಾತರಿಗೆ ಮೀಸಲಾತಿ ನೀಡುತ್ತಿದ್ದ 2ಬಿ ಪ್ರವರ್ಗ ರದ್ದು ಮಾಡಲಾಗಿತ್ತು.
ಹೊಸ ಮಾದರಿಯಲ್ಲಿ ಒಬಿಸಿಯಲ್ಲಿ 4 ಪ್ರವರ್ಗಗಳನ್ನು ಮಾಡಲಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರಿಗೆ ಇದ್ದ ಮೀಸಲಾತಿಯನ್ನು ರದ್ದು ಮಾಡಿ ಅವರಿಗಿದ್ದ ಶೇ.4ರಷ್ಟು ಮೀಸಲಾತಿಯನ್ನು ಒಕ್ಕಲಿಗ ಮತ್ತು ಲಿಂಗಾಯತರಿಗೆ ಹಂಚಲಾಗಿದೆ. ಹೀಗಾಗಿ ಧಾರ್ಮಿಕ ಅಲ್ಪಸಂಖ್ಯಾತರು ಇನ್ನು ಮುಂದೆ ಮೇಲ್ವರ್ಗದ ಬಡವರಿಗೆ ಮೀಸಲಿಟ್ಟ ʼಆರ್ಥಿಕವಾಗಿ ಹಿಂದುಳಿದ ವರ್ಗʼಗಳ (ಇಡಬ್ಲ್ಯುಎಸ್) ಶೇ.10 ಮೀಸಲಾತಿಯಲ್ಲಿ ಅವಕಾಶಗಳನ್ನು ಪಡೆಯಬೇಕಾಗಿದೆ.
ಸಂತಸ ವ್ಯಕ್ತಪಡಿಸಿದ ವಚನಾನಂದ ಸ್ವಾಮೀಜಿ
ಮೂರು ದಶಕಗಳ ಪಂಚಮಸಾಲಿ ಸಮುದಾಯದ ಹೋರಾಟಕ್ಕೆ ಮತ್ತೊಂದು ಸ್ಪಷ್ಟತೆ ದೊರೆತಿದೆ. 2ಡಿ ಪ್ರವರ್ಗಕ್ಕೆ ಶೇ. 7 ರಷ್ಟು ಮೀಸಲಾತಿಯನ್ನು ನೀಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದ್ದು ಒಂದು ಹಂತವಾದರೆ, ಮೀಸಲಾತಿಯನ್ನು ಪುನರ್ ವರ್ಗೀಕರಿಸಿ ಮೀಸಲಾತಿ ಪ್ರಮಾಣದ ಬಗ್ಗೆ ಅಧಿಕೃತ ಆದೇಶವನ್ನು ಸರ್ಕಾರ ಹೊರಡಿಸಿದೆ ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠಾಧ್ಯಕ್ಷರಾದ ಶ್ರೀ ವಚನಾನಂದ ಸ್ವಾಮೀಜಿ ತಿಳಿಸಿದ್ದಾರೆ.
ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ನೇತೃತ್ವದ ಹೋರಾಟಕ್ಕೆ ಮತ್ತೊಂದು ಯಶಸ್ಸು ದೊರೆತಿರುವುದು ಸಂತಸದ ವಿಷಯ. ಹರಿಹರ ಪೀಠ ಇದನ್ನು ತುಂಬು ಹೃದಯದಿಂದ ಸ್ವಾಗತಿಸುತ್ತದೆ. ಹಾಗೆಯೇ, ಕೇಂದ್ರ ಓಬಿಸಿ ಪಟ್ಟಿಯಲ್ಲಿ ಸ್ಥಾನ ದೊರಕಿಸಿ ಕೊಡುವ ನಿಟ್ಟಿನಲ್ಲಿ ಪ್ರಯತ್ನ ಮುಂದುವರೆಯಲಿದೆ ಎಂದು ಹೇಳಿದ್ದಾರೆ.
ಕರ್ನಾಟಕ
Road Accident: ನೆಲಮಂಗಲದ ಬಳಿ ಲಾರಿ ಹರಿದು ಯುವತಿ ಸ್ಥಳದಲ್ಲೇ ಸಾವು
Road Accident: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಲಕ್ಕೂರು ಬಳಿ ಅಪಘಾತ ನಡೆದಿದೆ. ಲಾರಿಯು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ.
ನೆಲಮಂಗಲ: ಟಿಪ್ಪರ್ ಹರಿದು ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ (Road Accident) ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಲಕ್ಕೂರು ಬಳಿ ನಡೆದಿದೆ. ನರಸೀಪುರ ಗ್ರಾಮದ ಹೇಮಾವತಿ (27) ಮೃತ ಯುವತಿ. ಈಕೆ ದ್ವಿಚಕ್ರ ವಾಹನದಲ್ಲಿ ತರಕಾರಿ ತೆಗೆದುಕೊಂದು ಮನೆಗೆ ತೆರಳುವಾಗ ಲಾರಿ ಡಿಕ್ಕಿ ಹೊಡೆದಿದ್ದು, ಈ ವೇಳೆ ಕೆಳಗೆ ಬಿದ್ದಾಗ ಲಾರಿ ಹರಿದಿದೆ. ಇದರಿಂದ ಗಂಭೀರ ಗಾಯಗಳಾಗಿ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಚಾಲಕನನ್ನು ಡಾಬಸ್‌ಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನೇಣು ಬಿಗಿದುಕೊಂಡು ಇಬ್ಬರು ಪ್ರೇಮಿಗಳು ಆತ್ಮಹತ್ಯೆಗೆ ಶರಣು
ಧಾರವಾಡ: ನೇಣುಬಿಗಿದುಕೊಂಡು ಇಬ್ಬರು ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಹೆಬ್ಬಳ್ಳಿ ಗ್ರಾಮದ ಮೈಲಾರಿ ಕಾಲಾಳದ (22), 16 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಮನೆಯಲ್ಲಿ ಇಬ್ಬರ ಪ್ರಿತಿಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಇಬ್ಬರು ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಮಗಳು ನಾಪತ್ತೆ ಆಗಿರುವ ಬಗ್ಗೆ ಬಾಲಕಿ ಮನೆಯವರು ಧಾರವಾಡ ಗ್ರಾಮೀಣ ಠಾಣೆಗೆ ದೂರು ನೀಡಿದ್ದರು. ಆದರೆ, ಮಂಗಳವಾರ ನಿರ್ಮಾಣ ಹಂತದಲ್ಲಿರುವ ಯುವಕನ ಮನೆಯಲ್ಲಿ ಇಬ್ಬರು ಪ್ರೇಮಿಗಳು ನೇಣಿಗೆ ಶರಣಾಗಿದ್ದಾರೆ.
ಪರವಾನಗಿ ಇಲ್ಲದೇ ಜಾನುವಾರು ಸಾಗಾಟ; ಮೂವರ ಬಂಧನ, 11 ಜಾನುವಾರು ರಕ್ಷಣೆ
ಕಾರವಾರ: ಪರವಾನಗಿ ಇಲ್ಲದೇ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿ 11 ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಳದೀಪುರ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ | 10 ಅಡಿ ಸುರಂಗ ಕೊರೆದು ಮಳಿಗೆಯಲ್ಲಿ ಆಭರಣ ಕದ್ದರು, ಬಳಿಕ ಕ್ಷಮಾಪಣೆ ಪತ್ರ ಬರೆದಿಟ್ಟು ಹೋದರು
ಧಾರವಾಡ ಮೂಲದ ಚಾಲಕ ಸಂತೋಷ ಮಂಟೂರು, ಕ್ಲೀನರ್ ಮಣಿಕಂಠ ದೇಸಾಯಿ, ಬೈಂದೂರು ಮೂಲದ ನಾಗರಾಜ ಮೊಗೇರ್ ಬಂಧಿತ ಆರೋಪಿಗಳು. 4 ಹಸು, 7 ಕರು ಸೇರಿ 11 ಜಾನುವಾರುಗಳ ರಕ್ಷಣೆ ಮಾಡಲಾಗಿದೆ. ಲಾರಿಯಲ್ಲಿ ಹಿಂಸಾತ್ಮಕವಾಗಿ ಜಾನುವಾರುಗಳನ್ನು ತುಂಬಿ ಬೈಂದೂರಿನಿಂದ ಪುಣೆಗೆ ಸಾಗಿಸಲಾಗುತ್ತಿತ್ತು. ಕಸಾಯಿಖಾನೆಯಲ್ಲಿ ವಧೆ ಮಾಡುವ ಉದ್ದೇಶದಿಂದ ಜಾನುವಾರುಗಳ ಸಾಗಾಟ ಯತ್ನ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಕರ್ನಾಟಕ
Highway robbery : ಯುವಕ-ಯುವತಿಯನ್ನು ಅಡ್ಡಗಟ್ಟಿ ಬೈಕ್, ಐಫೋನ್ ಕಿತ್ತುಕೊಂಡು ಹೋದ ಮೂವರು ಸುಲಿಗೆಕೋರರು ಅರೆಸ್ಟ್
ಹೆದ್ದಾರಿಯಲ್ಲಿ ಸಾಗುತ್ತಿದ್ದ ಜೋಡಿಯನ್ನು ಅಡ್ಡಗಟ್ಟಿ(Highway robbery) ಬೈಕ್ ಮತ್ತು ಐಫೋನ್ ಕಿತ್ತುಕೊಂಡಿದ್ದ ಮೂವರು ಕ್ರಿಮಿನಲ್‌ಗಳು ಸೆರೆ ಸಿಕ್ಕಿದ್ದಾರೆ. ಉಳ್ಳಾಲ ಪೊಲಿಸರ ಕಾರ್ಯಾಚರಣೆಯನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ.
ಉಳ್ಳಾಲ(ಮಂಗಳೂರು): ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಯನ್ನು ಅಡ್ಡಗಟ್ಟಿ, ಐ-ಪೋನ್ ಮತ್ತು ಬೈಕನ್ನ ದೋಚಿದ್ದ ಮೂವರು ಖದೀಮರನ್ನು ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ (Highway robbery) ನಡೆಸಿ ಬಂಧಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಬಳಿ ಈ ಘಟನೆ ನಡೆದಿತ್ತು.
ಸೋಮವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಯುವಕ ಮತ್ತು ಯುವತಿ ಬೈಕಲ್ಲಿ ಜತೆಯಾಗಿ ತೆರಳುತ್ತಿದ್ದರು. ಈ ವೇಳೆ ಎರಡು ಸ್ಕೂಟರಲ್ಲಿ ಬಂದ ಮೂವರು ಖದೀಮರು ಉಚ್ಚಿಲದ ಜಿಯೋ ಪೆಟ್ರೋಲ್ ಪಂಪ್ ಬಳಿ ಅವರನ್ನು ಅಡ್ಡಗಟ್ಟಿದರು.
ಯುವಕ ಮತ್ತು ಯುವತಿಯನ್ನು ಬೆದರಿಸಿದ ಸುಲಿಗೆಕೋರರು ಯುವತಿ ಕೈಯಲ್ಲಿದ್ದ ಬೆಲೆ ಬಾಳುವ ಐ-ಫೋನ್ ಕಿತ್ತುಕೊಂಡಿದ್ದರು. ಮೋಟಾರು ಬೈಕನ್ನೂ ಕೂಡಾ ಕಸಿದುಕೊಂಡು ಪರಾರಿಯಾಗಿದ್ದರು.
ಈ ಬಗ್ಗೆ ಬೈಕ್ ಸವಾರ ಅಬ್ದುಲ್ಲ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.
ಉಳ್ಳಾಲ ಬಸ್ತಿಪಡ್ಪು ನಿವಾಸಿ ಝಾಕೀರ್ ಹುಸೇನ್ ಅಲಿಯಾಸ್ ಶಾಕೀರ್-ಜಾಹೀರ್(27), ಸೋಮೇಶ್ವರ ಗ್ರಾಮದ ಪಿಲಾರು ನಿವಾಸಿ ಮಹಮ್ಮದ್ ಉಬೈದುಲ್ಲಾ ಅಲಿಯಾಸ್ ಉಬ್ಬಿ (33), ಉಳ್ಳಾಲ ಮೇಲಂಗಡಿ ನಿವಾಸಿ ಇಬ್ರಾಹಿಮ್ ಖಲೀಲ್ ಅಲಿಯಾಸ್ ಖಲೀಲ್(22) ಬಂಧಿತ ಆರೋಪಿಗಳು.
ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಲಾಗಿದ್ದ 2 ಸ್ಕೂಟರ್ ಗಳು, ಸುಲಿಗೆ ನಡೆಸಿದ್ದ ಐಫೋನ್ ಮತ್ತು ಯಮಹಾ ಮೋಟಾರು ಬೈಕನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು ಆರೋಪಿಗಳನ್ನು ನಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಕುಲದೀಪ್ ಜೈನ್ ಮಾರ್ಗದರ್ಶನದ ಮೇರೆಗೆ ಉಳ್ಳಾಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಸಂದೀಪ್ ಜಿ.ಎಸ್ ಮತ್ತು ಉಪನಿರೀಕ್ಷಕರಾದ ಕೃಷ್ಣ ಕೆ.ಎಚ್ ,ಸಂತೋಷ್ ಮತ್ತು ಪಿಸಿಗಳಾದ ಪ್ರವೀಣ ಶೆಟ್ಟಿ, ಅಶೋಕ್, ವಾಸುದೇವ ಸಿಬ್ಬಂದಿಗಳ ತಂಡ ಪ್ರಕರಣವನ್ನು ಶೀಘ್ರದಲ್ಲಿ ಭೇದಿಸುವಲ್ಲಿ ಯಶಸ್ವಿಯಾಗಿದೆ.
ಈ ಭಾಗದಲ್ಲಿ ಇತ್ತೀಚೆಗೆ ವಾಹನಗಳ ಕಳ್ಳತನ ಹೆಚ್ಚಾಗಿದ್ದು, ಅದಕ್ಕೆ ಹೆದ್ದಾರಿ ದರೋಡೆಯೂ ಸೇರಿಕೊಂಡಂತಾಗಿದೆ. ಪೊಲೀಸರು ಈ ದರೋಡೆ ಪ್ರಕರಣವನ್ನು ತ್ವರಿತವಾಗಿ ಪತ್ತೆ ಹಚ್ಚಿದ್ದನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ. ಈ ಭಾಗದಲ್ಲಿ ಹೈವೇ ಪ್ಯಾಟ್ರೋಲಿಂಗ್ ಹೆಚ್ಚಿಸುವಂತೆ, ಬೈಕ್ ಕಳವು ಪ್ರಕರಣಗಳನ್ನು ಕೂಡಾ ಪತ್ತೆ ಹಚ್ಚುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ : Bike theft : ಉಳ್ಳಾಲದಲ್ಲಿ ಸರಣಿ ಬೈಕ್ ಕಳ್ಳತನ, ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳರಿಗಾಗಿ ಪೊಲೀಸರ ಹುಡುಕಾಟ!
ಕರ್ನಾಟಕ
Vinay kulkarni: ಧಾರವಾಡಕ್ಕೆ ಪ್ರವೇಶ ನಿರ್ಬಂಧ; ವಿನಾಯಿತಿ ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ
Vinay kulkarni: ಬಿಜೆಪಿ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದ ನಂತರ ಧಾರವಾಡ ಜಿಲ್ಲೆ ಪ್ರವೇಶಕ್ಕೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕೋರ್ಟ್ ನಿರ್ಬಂಧವಿತ್ತು. ಇದಕ್ಕೆ ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.
ಧಾರವಾಡ: ಚುನಾವಣೆ ಹೊಸ್ತಿಲಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ. ಧಾರವಾಡ ಜಿಲ್ಲೆ ಪ್ರವೇಶ ನಿರ್ಬಂಧಕ್ಕೆ ವಿನಾಯಿತಿ ಕೋರಿ ವಿನಯ್ ಕುಲಕರ್ಣಿ (Vinay kulkarni) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿರುವುದರಿಂದ ತೀವ್ರ ಹಿನ್ನಡೆಯಾಗಿದೆ.
ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನವಾಗಿದ್ದರು. 9 ತಿಂಗಳು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದು, ಬಿಡುಗಡೆಯಾದ ಬಳಿಕ ಅವರಿಗೆ ಧಾರವಾಡ ಜಿಲ್ಲೆ ಪ್ರವೇಶಕ್ಕೆ ಕೋರ್ಟ್ ನಿರ್ಬಂಧ ವಿಧಿಸಿತ್ತು. ಹೀಗಾಗಿ ಧಾರವಾಡ ಜಿಲ್ಲೆ ಪ್ರವೇಶಕ್ಕಿರುವ ನಿರ್ಬಂಧ ತೆರವುಗೊಳಿಸಲು ಕೋರಿ 2 ತಿಂಗಳ ಹಿಂದೆ ಮಾಜಿ ಸಚಿವ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ತಿರಸ್ಕರಿಸಿದೆ.
ಇದನ್ನೂ ಓದಿ | Karnataka Election 2023: ಕಾಂಗ್ರೆಸ್ ತೊರೆದ ಎಂ.ಎಂ. ಹಿರೇಮಠಗೆ ಶಾಕ್; ಎಸ್‌ಸಿ ಜಾತಿ ಪ್ರಮಾಣಪತ್ರ ರದ್ದು
ಇನ್ನು ಟ್ರಯಲ್ ಕೋರ್ಟ್ (ವಿಚಾರಣಾ ನ್ಯಾಯಾಲಯದಲ್ಲಿ) ನ್ಯಾಯಾಲಯದಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿಗೆ ಸೂಚನೆ ನೀಡಿದ್ದು, ಯಾವ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದೆಯೋ ಅದೇ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದೆ.
2016 ಜೂನ್ 15 ರಂದು ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ, ಬಿಜೆಪಿ ಮುಖಂಡ ಯೋಗೀಶಗೌಡ ಅವರ ಕೊಲೆಯಾಗಿತ್ತು. ನಂತರ ಆರೋಪಿಗಳು ತಾವೇ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡು ಪೊಲೀಸರುಗೆ ಶರಣಾಗಿದ್ದರು. ಆದರೆ ಯೋಗೇಶಗೌಡ ಗೌಡರ ಕುಟುಂಬಸ್ಥರು ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಪಟ್ಟುಹಿಡಿದಿದ್ದರು. ನಂತರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಪ್ರಕರಣವನ್ನು ಸಿಬಿಐಗೆ ವಹಿಸಿತು. ತನಿಖೆಯಲ್ಲಿ ಯೋಗಶ್‌ಗೌಡ ಹತ್ಯೆ ಸಂಚಿನಲ್ಲಿ ಕಾಂಗ್ರೆಸ್ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಕೈವಾಡವಿದೆ ಇದೆ ಎಂದು ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.
ಪ್ರಕರಣದಲ್ಲಿ ಬಂಧನವಾಗಿ 9 ತಿಂಗಳು ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕಾಲ ಕಳೆದಿದ್ದ ಮಾಜಿ ಸಚಿವ, ಷರತ್ತು ಬದ್ಧ ಜಾಮೀನಿನ ಮೇಲೆ ಹೊರ ಬಂದಿದ್ದರು. ಆದರೆ ವಿನಯ್ ಕುಲಕರ್ಣಿಗೆ ಧಾರವಾಡ ಜಿಲ್ಲೆ ಪ್ರವೇಶಕ್ಕೆ ಕೋರ್ಟ್ ನಿರ್ಬಂಧ ವಿಧಿಸಿತ್ತು. ಇದೀಗ ನಿರ್ಬಂಧ ವಿನಾಯಿತಿಗೆ ಸಲ್ಲಿಸಿದ್ದ ಅರ್ಜಿಯನ್ನೂ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಇದನ್ನೂ ಓದಿ | Karnataka Election: ಎಎಪಿಯಿಂದ 300 ಯೂನಿಟ್ ವಿದ್ಯುತ್ ಉಚಿತ, 3000 ರೂ. ನಿರುದ್ಯೋಗ ಭತ್ಯೆ, ಒಪಿಎಸ್ ಜಾರಿ ಗ್ಯಾರಂಟಿ
ಶಿಗ್ಗಾಂವಿಯಿಂದ ವಿನಯ್ ಕುಲಕರ್ಣಿ ಸ್ಪರ್ಧೆ?
ಧಾರವಾಡ ಗ್ರಾಮೀಣ ಕ್ಷೇತ್ರದ ಮಾಜಿ ಶಾಸಕರೂ ಆಗಿರುವ ವಿನಯ್ ಕುಲಕರ್ಣಿಗೆ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ಇರುವುದರಿಂದ ಕ್ಷೇತ್ರದ ರಾಜಕೀಯದಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರು ಹಾವೇರಿ ಜಿಲ್ಲೆಯ ಸಿಎಂ ಬಸವರಾಜ ಬೊಮ್ಮಾಯಿ ಅವರ ಕ್ಷೇತ್ರ ಶಿಗ್ಗಾಂವಿಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಂಗ್ರೆಸ್‌ನ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಶಿಗ್ಗಾಂವಿ ಕ್ಷೇತ್ರಕ್ಕೆ 2ನೇ ಪಟ್ಟಿಯಲ್ಲಿ ಅಭ್ಯರ್ಥಿ ಘೋಷಣೆಯಾಗಲಿದ್ದು, ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಟಿಕೆಟ್ ಸಿಗುವುದೋ, ಇಲ್ಲವೋ ಎಂಬ ಬಗ್ಗೆ ಕುತೂಹಲ ಮೂಡಿದೆ.
-
ಕರ್ನಾಟಕ13 hours ago
Karnataka Election: ಮೇ 10ರಂದು ಕರ್ನಾಟಕ ಚುನಾವಣೆ; ಮೇ 13ಕ್ಕೆ ಫಲಿತಾಂಶ ಎಂದು ಘೋಷಿಸಿದ ಚುನಾವಣಾ ಆಯೋಗ
-
ಕರ್ನಾಟಕ14 hours ago
Karnataka Election 2023 LIVE: ಕರ್ನಾಟಕದಲ್ಲಿ ಮೇ 10ಕ್ಕೆ ಮತದಾನ, 13ಕ್ಕೆ ರಿಸಲ್ಟ್, ಒಂದೇ ಹಂತದ ಎಲೆಕ್ಷನ್
-
ಕರ್ನಾಟಕ17 hours ago
Karnataka Election: ಕರ್ನಾಟಕ ಚುನಾವಣೆ ದಿನಾಂಕ ಇಂದು ಘೋಷಣೆ, ಇಂದಿನಿಂದಲೇ ನೀತಿ ಸಂಹಿತೆ ಜಾರಿ
-
ಕರ್ನಾಟಕ12 hours ago
Karnataka Election: ನೀತಿ ಸಂಹಿತೆಗೆ ಮೊದಲೇ ತುಂಬಿತು ಅಕ್ರಮದ ಪಾತ್ರೆ: 2018ರ ಹಣದ ಹೊಳೆಯನ್ನು ಈಗಲೇ ಮೀರಿಸಿದ ಕರ್ನಾಟಕ !
-
ಪ್ರಮುಖ ಸುದ್ದಿ8 hours ago
UPI transactions : ಯುಪಿಐ ಬಳಕೆ ಗ್ರಾಹಕರಿಗೆ ಸಂಪೂರ್ಣ ಉಚಿತ ಎಂದ ಎನ್ಪಿಸಿಐ, ಹಾಗಾದರೆ 1.1% ಶುಲ್ಕ ಯಾರಿಗೆ?
-
ಗ್ಯಾಜೆಟ್ಸ್9 hours ago
Google: ಗೂಗಲ್ಗೆ 1337 ಕೋಟಿ ರೂ. ದಂಡ, 30 ದಿನದಲ್ಲಿ ಪಾವತಿಸಲು ನ್ಯಾಯಮಂಡಳಿ ಆದೇಶ!
-
ಕರ್ನಾಟಕ11 hours ago
Karnataka Elections 2023 : ವಲಸಿಗ ಸಚಿವರ ಮೇಲೆ ಬೊಮ್ಮಾಯಿ ನಿಗಾ; ಹೆಬ್ಬಾರ್, ಮುನಿರತ್ನ ಕರೆಸಿಕೊಂಡು ಚರ್ಚೆ
-
ಕರ್ನಾಟಕ15 hours ago
Karnataka Elections 2023 : 8 ಸಚಿವರ ಸಹಿತ 35 ಶಾಸಕರಿಗೆ ಸೋಲಿನ ಭೀತಿ, ಈ ಬಾರಿ ಬಿಜೆಪಿಯಲ್ಲಿ 50 ಹೊಸ ಮುಖ?