ಶಿವಮೊಗ್ಗ: ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ನಾಮಪತ್ರ ಸಲ್ಲಿಕೆ ರ‍್ಯಾಲಿ ವೇಳೆ ಎಲ್ಇಡಿ ಡಿಸ್ಪ್ಲೇ ಬೋರ್ಡ್ ಕುಸಿದು ಬಿದ್ದು ಖಾಸಗಿ ನ್ಯೂಸ್ ಚಾನೆಲ್ ವರದಿಗಾರ, ಮಹಿಳೆ ಸೇರಿ ನಾಲ್ವರು ಗಾಯಗೊಂಡಿರುವ ಘಟನೆ ನಗರದ (Shivamogga News) ಗಾಂಧಿ ಬಜಾರ್‌ನಲ್ಲಿ ಸೋಮವಾರ ನಡೆದಿದೆ.
ಏಕಾಏಕಿ ಕುಸಿದು ಭಾರಿ ಗಾತ್ರದ ಗಾತ್ರದ ಎಲ್ಇಡಿ ಡಿಸ್ಪ್ಲೇ ಬೋರ್ಡ್ ಬಿದ್ದಿದ್ದು, ಇದರಿಂದ ಮೆರವಣಿಗೆಗೆ ಆಗಮಿಸಿದ ವ್ಯಕ್ತಿಗೆ ತೀವ್ರವಾಗಿ ಪೆಟ್ಟು ಬಿದ್ದು, ತಲೆಯಿಂದ ರಕ್ತ ಸುರಿದಿದೆ. ಗಾಯಾಳುಗಳನ್ನು ಕಂಡು ಕಾಣದಂತೆ ಕಾಂಗ್ರೆಸ್ ಮುಖಂಡರು ತೆರಳಿದ್ದಾರೆ ಎನ್ನಲಾಗಿದ್ದು, ಕಣ್ಣೆದುರೇ ಅನಾಹುತ ಸಂಭವಿಸಿದರೂ ಕ್ಯಾರೆ ಎನ್ನದೆ ಕಾಂಗ್ರೆಸ್ ಮುಖಂಡರು ಮುಂದೆ ತೆರಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಗಾಯಾಳುಗಳನ್ನು ಆರೈಕೆ ಮಾಡಿ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಎಲ್‌ಇಡಿ ಬೋರ್ಡ್ ಅಳವಡಿಸಿದ್ದ ವ್ಯಕ್ತಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ | Bridge collapse : ನಿರ್ಮಾಣ ಹಂತದ ಸೇತುವೆ ಕುಸಿದು 7 ಮಂದಿಗೆ ಗಾಯ
ಓವರ್ ಟೇಕ್ ಮಾಡುವಾಗ ಪಲ್ಟಿ ಹೊಡೆದ ಪೊಲೀಸ್ ಜೀಪ್; ಇಬ್ಬರಿಗೆ ಗಾಯ
ರಾಯಚೂರು: ಪೊಲೀಸ್ ವಾಹನವು ಪಲ್ಟಿಯಾಗಿದ್ದು, ಇಬ್ಬರು ಪೇದೆಗಳು ಗಾಯಗೊಂಡಿದ್ದಾರೆ. ರಾಯಚೂರಿನ ಸಿಂಧನೂರು ತಾಲೂಕಿನ ರೈತನಗರ ಕ್ಯಾಂಪ್ ಬಳಿ ಅಪಘಾತ (Road Accident) ಸಂಭವಿಸಿದೆ.
ಮರಳಿನ ಟ್ಯಾಂಕರ್ ಓವರ್ ಟೇಕ್ ಮಾಡಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ಪೊಲೀಸ್ ವಾಹನವು ರಸ್ತೆ ಬದಿಯಿಂದ ಪಕ್ಕದ ಗುಂಡಿಗೆ ಪಲ್ಟಿ ಹೊಡೆದಿದೆ. ಅಪಘಾತದಿಂದಾಗಿ ಪೇದೆಗಳಾದ ಶಕ್ಷವಲಿ (33), ಕರಿಯಪ್ಪ(35) ಎಂಬುವವರು ಗಾಯಗೊಂಡಿದ್ದಾರೆ.
ಇದನ್ನೂ ಓದಿ: Accident Case : ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಬಿದ್ದ; ಎರಡು ಹೋಳಾಯ್ತು ತಲೆ ಬುರುಡೆ
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಣ್ಣ-ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಂಧನೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.
ಯಾದಗಿರಿಯಲ್ಲಿ ಬೆಂಕಿಗೆ ತುತ್ತಾದ ಅಂಗಡಿ
ಯಾದಗಿರಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಂಗಡಿಯೊಂದು ಹೊತ್ತಿ ಉರಿದಿದೆ. ಯಾದಗಿರಿ ನಗರದ ಹೊಸಳ್ಳಿ ಕ್ರಾಸ್ ಬಳಿ ಇರುವ ನಿಸ್ಸಿ ಪ್ಲೈವುಡ್ ಶಾಪ್ ಧಗಧಗನೇ ಹೊತ್ತಿ ಉರಿದಿದ್ದು, ಬೆಂಕಿ ಅವಘಡದಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.
ಅಂದಾಜು 25 ಲಕ್ಷ ಮೌಲ್ಯದ ಮಷೀನ್‌ಗಳು ಬೆಂಕಿಗಾಹುತಿಯಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಯಾದಗಿರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.