Site icon Vistara News

Shivamogga News: ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಅಗತ್ಯ: ಬಿ.ವೈ. ರಾಘವೇಂದ್ರ

B Y Raghavendra shivamogga Blood donation camp

ಶಿವಮೊಗ್ಗ: ಪ್ರಸ್ತುತ ದಿನಗಳಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕಿರುವುದು ಅತ್ಯಂತ ಅಗತ್ಯ. ಸಾರ್ವಜನಿಕರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಸರ್ಕಾರಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಹೇಳಿದರು.

ಡಿಸಿಸಿ ಬ್ಯಾಂಕ್, ಭಾರತೀಯ ರೆಡ್‌ ಕ್ರಾಸ್ ಸಂಸ್ಥೆಯ ಜಿಲ್ಲಾ ಘಟಕದ ಸಹಯೋಗದಲ್ಲಿ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಆವರಣದಲ್ಲಿ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಆಯುಷ್ಮಾನ್ ಭಾರತ್, ಯಶಸ್ವಿನಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಮುಖಾಂತರ ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರಗಳು ಪ್ರಯತ್ನ ನಡೆಸುತ್ತಿವೆ. ಎಲ್ಲರಿಗೂ ಉತ್ತಮ ಆರೋಗ್ಯ ಸೇವೆ ಸಿಗುವಂತಾಗಬೇಕು ಎಂದು ತಿಳಿಸಿದರು.

ಇದನ್ನೂ ಓದಿ | Parakram Diwas 2023: ನೇತಾಜಿ ಸುಭಾಷ್​ ಚಂದ್ರ ಬೋಸ್​ರನ್ನು ಸ್ಮರಿಸಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​​

ಆರೋಗ್ಯ ಕ್ಷೇತ್ರದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮಹತ್ತರ ಅಭಿವೃದ್ಧಿ ಕಾರ್ಯಗಳು ಆಗಿದ್ದು, ಮೂಲಸೌಕರ್ಯ ಸೇರಿದಂತೆ ಎಲ್ಲ ರೀತಿಯ ಅತ್ಯಾಧುನಿಕ ಸೌಲಭ್ಯಗಳು ಜಿಲ್ಲೆಯಲ್ಲಿ ಲಭ್ಯವಿದೆ. ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಕಲ ರೀತಿಯ ನೆರವು ನೀಡಿವೆ ಎಂದರು.

ಭಾರತೀಯ ರೆಡ್‌ ಕ್ರಾಸ್ ಸಂಸ್ಥೆಯ ಜಿಲ್ಲಾ ಸಭಾಪತಿ ಎಸ್.ಪಿ.ದಿನೇಶ್ ಮಾತನಾಡಿ, ಕೊರೊನಾ ಸಂದರ್ಭದಲ್ಲಿ ರಕ್ತದಾನ ಮಾಡಲು ಹಿಂದೇಟು ಹಾಕುತ್ತಿದ್ದರು. ರಕ್ತದ ಕೊರತೆ ಹೆಚ್ಚಾಗಿ ಸಮರ್ಪಕ ಪ್ರಮಾಣದಲ್ಲಿ ರಕ್ತದಾನ ನಡೆದಿರಲಿಲ್ಲ. ರಕ್ತದಾನದಿಂದ ಯಾವುದೇ ಸಮಸ್ಯೆ ಆಗುವುದಿಲ್ಲ. ರಕ್ತದಾನದ ಬಗ್ಗೆ ಹಿಂಜರಿಕೆ ಮಾಡಿಕೊಳ್ಳದೆ ಆರೋಗ್ಯವಂತ ಯುವಜನರು ರಕ್ತದಾನ ಮಾಡಬೇಕು ಎಂದು ಹೇಳಿದರು.

ಇದನ್ನೂ ಓದಿ | Viral Video: ಲಂಡನ್​ ವಿಶ್ವವಿದ್ಯಾಲಯದಲ್ಲಿ ಕರ್ನಾಟಕದ ಬಾವುಟ ಪ್ರದರ್ಶಿಸಿದ ಬೀದರ್​ ಹುಡುಗ; ಕನ್ನಡಿಗರು ಫುಲ್​ ಖುಷ್​​

ಶಿವಮೊಗ್ಗ ಜಿಲ್ಲೆಯ ವಿವಿಧೆಡೆಗಳಲ್ಲಿ ನಡೆದ ರಕ್ತದಾನ ಶಿಬಿರಗಳಲ್ಲಿ 600 ಯೂನಿಟ್ ರಕ್ತದಾನ ಸಂಗ್ರಹ ಆಗಿದ್ದು, ಗರಿಷ್ಠ ಆಗಿತ್ತು. ಇದೀಗ ಡಿಸಿಸಿ ಬ್ಯಾಂಕ್‌ನಲ್ಲಿ ಆಯೋಜಿಸಿರುವ ಶಿಬಿರದಲ್ಲಿ ಸಾವಿರಕ್ಕೂ ಅಧಿಕ ಯೂನಿಟ್ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಎಲ್ಲರೂ ನೋಂದಣಿ ಮಾಡಿಸಿಕೊಂಡಿದ್ದಾರೆ. ನಿರೀಕ್ಷಿತ ಯೂನಿಟ್‌ಗಳಷ್ಟು ರಕ್ತ ಸಂಗ್ರಹ ಆಗಲಿದೆ ಎಂದು ತಿಳಿಸಿದರು.

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪ ಮಾತನಾಡಿ, ಬ್ಯಾಂಕ್ ವತಿಯಿಂದ ಆರ್ಥಿಕ ಚಟುವಟಿಕೆ ಮಾತ್ರವಲ್ಲದೆ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಿಕೊಂಡು ಬರಲಾಗುತ್ತಿದೆ. ಪ್ರಥಮ ಬಾರಿಗೆ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಸಿದ್ದು, ಸಾವಿರಕ್ಕೂ ಅಧಿಕ ಜನರು ರಕ್ತದಾನ ಮಾಡಲು ಮುಂದಾಗಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ | KL Rahul- Athiya Shetty Wedding: ಕೆ.ಎಲ್​. ರಾಹುಲ್​-ಅಥಿಯಾ ಶೆಟ್ಟಿ ಮದುವೆ ಸಮಾರಂಭದ ವಿಶೇಷತೆಗಳೇನು?

ರೆಡ್‌ ಕ್ರಾಸ್ ಸಂಜೀವಿನಿ ಬ್ಲಡ್ ಬ್ಯಾಂಕ್, ಭಾರತೀಯ ರೆಡ್‌ ಕ್ರಾಸ್ ಸಂಸ್ಥೆಯ ಜಿಲ್ಲಾ ಘಟಕ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಸಹಯೋಗದಲ್ಲಿ ಬೃಹತ್ ರಕ್ತ ದಾನ ಶಿಬಿರ ನಡೆಯಿತು. ಸಾವಿರಕ್ಕೂ ಅಧಿಕ ಜನರು ರಕ್ತ ದಾನಕ್ಕೆ ನೋಂದಣಿ ಮಾಡಿಸಿದ್ದರು.

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಭಾರತೀಯ ರೆಡ್‌ ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆಯ ಗೌರವ ಕಾರ್ಯದರ್ಶಿ ಡಾ. ದಿನೇಶ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಚ್.ಎಲ್. ಷಡಕ್ಷರಿ, ಶಿಮುಲ್ ಅಧ್ಯಕ್ಷ ಶ್ರೀಪಾದರಾವ್, ಬೃಹತ್ ರಕ್ತದಾನ ಶಿಬಿರದಲ್ಲಿ ಪ್ರಮುಖರಾದ ವಿಜಯದೇವ್, ಪರಮೇಶ್ವರ್, ಯೋಗೇಶ್, ದುಗ್ಗಪ್ಪ, ಅಶ್ವತ್ಥ ನಾರಾಯಣ ಶೆಟ್ಟಿ, ಗುರುರಾಜ್, ಕೀರ್ತಿರಾಜ್, ವೆಂಕಟೇಶ್, ದಿವಾಕರ ಶೆಟ್ಟಿ, ನಾಗೇಶ ಡೋಂಗ್ರೆ, ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

Exit mobile version