Site icon Vistara News

Shivamogga News: ವಿಸ್ತಾರ ನ್ಯೂಸ್ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ: ಪೂರ್ವಭಾವಿ ಸಭೆ

International Yoga Day at shivamogga

ಶಿವಮೊಗ್ಗ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ (International Yoga Day) ಅಂಗವಾಗಿ ನಗರದ ಸವಳಂಗ ರಸ್ತೆಯಲ್ಲಿರುವ ರೋಟರಿ ಯುವ ಕೇಂದ್ರದಲ್ಲಿ ರಾಷ್ಟ್ರ ಮತ್ತು ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಯೋಗಾಚಾರ್ಯ ಪತಂಜಲಿ ಜೆ.ನಾಗರಾಜ್ ಅವರಿಂದ ಯೋಗದ (Yoga) ಬಗ್ಗೆ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಅಧ್ಯಕ್ಷ ನಾಗಪತಿ.ವಿ.ಭಟ್ ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ, ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ, ಪತಂಜಲಿ ಯೋಗ ಕೇಂದ್ರ, ವಿಸ್ತಾರ ನ್ಯೂಸ್ ಸಹಯೋಗದೊಂದಿಗೆ ಏರ್ಪಡಿಸಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ: Mayor Election: ಹುಬ್ಬಳ್ಳಿ ಧಾರವಾಡ ಪಾಲಿಕೆ ಮತ್ತೆ ಬಿಜೆಪಿ ತೆಕ್ಕೆಗೆ; ಶತಪ್ರಯತ್ನ ನಡೆಸಿದ ಶೆಟ್ಟರ್‌ ಟೀಮ್‌ಗೆ ಮುಖಭಂಗ

ಜೂ. 21ರ ಸಂಜೆ 7 ಗಂಟೆಗೆ ರೋಟರಿ ಯುವ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ “ಮಧ್ಯ ವಯಸ್ಕರು ಹಾಗೂ ಹಿರಿಯ ನಾಗರೀಕರಿಗೆ ಯೋಗ” ಎಂಬ ವಿಷಯದ ಬಗ್ಗೆ ಯೋಗಾಚಾರ್ಯ ಪತಂಜಲಿ ಜೆ.ನಾಗರಾಜ್ ಅವರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ ಎಂದರು.

ಪತಂಜಲಿ ಜೆ. ನಾಗರಾಜ್‌ ಅವರು ಕಳೆದ 25 ವರ್ಷಗಳಿಂದ ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆಯನ್ನು ಸ್ಥಾಪಿಸಿ ನಿರಂತರವಾಗಿ ಯೋಗ ಕ್ಷೇತ್ರದಲ್ಲಿ ಗಣನೀಯ ಸೇವೆಯನ್ನು ಸಲ್ಲಿಸುತ್ತಾ ಬಂದಿದ್ದಾರೆ. ಭಾರತ ಸರ್ಕಾರದ ಸಂಸ್ಕೃತಿ ಇಲಾಖೆಯಿಂದ ಯೋಗ ಚಿಕಿತ್ಸೆ ಒಂದು ಸಮಗ್ರ ದೃಷ್ಠಿ ಕೋನ ಎಂಬ ವಿಷಯದ ಬಗ್ಗೆ ಎರಡು ವರ್ಷಗಳ ಸಂಶೋಧನೆಯನ್ನು ಮಾಡಿ ರಾಷ್ಟ್ರಮಟ್ಟದ ರಾಷ್ಟ್ರೀಯ ಜ್ಯೂನಿಯರ್ ಫೆಲೋಷಿಪ್ ರಾಷ್ಟ್ರ ಪ್ರಶಸ್ತಿಯನ್ನು ಪಡೆದ ಕರ್ನಾಟಕದ ಏಕೈಕ ಯೋಗ ಸಾಧಕರಾಗಿದ್ದಾರೆ.

ಯೋಗ ಕ್ಷೇತ್ರದಲ್ಲಿ ಇವರು ಸಲ್ಲಿಸಿದ ಗಣನೀಯ ಸಮಾಜಸೇವೆಯನ್ನು ಗುರುತಿಸಿ ಭಾರತ ಸರ್ಕಾರದ ನೆಹರು ಯುವ ಕೇಂದ್ರದಿಂದ ಜಿಲ್ಲಾ ಮಟ್ಟದ ಅತ್ಯುತ್ತಮ ಯುವ ಪ್ರಶಸ್ತಿ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ರಾಜ್ಯಮಟ್ಟದ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ, ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್‌ ನಿಂದ ಅಂತರರಾಷ್ಟ್ರೀಯ ಮಟ್ಟದ ವೃತ್ತಿ ಶ್ರೇಷ್ಠ ಪ್ರಶಸ್ತಿ, ಪ್ರವಾಸೋದ್ಯಮ ಇಲಾಖೆಯಿಂದ ಅತ್ಯುತ್ತಮ ಬೆಸ್ಟ್ ಟೂರಿಸ್ಟ್ ಗೈಡ್ ರಾಜ್ಯ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪ್ರಶಸ್ತಿ ಗೌರವಗಳಿಗೆ ಭಾಜನರಾಗಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Congress Protest: ಅಕ್ಕಿ ಕೊಡದ ಕೇಂದ್ರದ ವಿರುದ್ಧ ಕಾಂಗ್ರೆಸ್‌ ಗರಂ: ಮೇಕಪ್‌ ಲೆಕ್ಕಿಸದೆ ಮಳೆಯಲ್ಲಿ ಪ್ರತಿಭಟಿಸಿದ್ದಕ್ಕೆ ಡಿಸಿಎಂ ಖುಷ್‌ ಹುವಾ!

ರೋಟರಿ ಸದಸ್ಯರು, ಸಾರ್ವಜನಿಕರು, ಯೋಗ ಬಂಧುಗಳು, ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ರೋಟರಿ ಕ್ಲಬ್ ಶಿವಮೊಗ್ಗ ಅಧ್ಯಕ್ಷ ನಾಗಪತಿ ವಿ.ಭಟ್, ಕಾರ್ಯದರ್ಶಿ ಲಕ್ಷ್ಮೀನಾರಾಯಣ ಭಟ್ ಕೋರಿದರು.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ ಮೊ: 9448171923, 9731160675 ಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಲಾಗಿದೆ.

Exit mobile version