Site icon Vistara News

Shivamogga News: ಪ್ರಧಾನಿ ಕೈಯಲ್ಲೇ ಶರಾವತಿ ಸಂತ್ರಸ್ತರಿಗೆ ಹಕ್ಕು ಪತ್ರ ವಿತರಿಸಲಿ: ತೀ.ನಾ. ಶ್ರೀನಿವಾಸ್

TN Srinivas shivamogga

#image_title

ಶಿವಮೊಗ್ಗ: ಶರಾವತಿ ಸಂತ್ರಸ್ತರ ಸಮಸ್ಯೆ ಬಗೆಹರಿಸದ ಹಾಲಿ ಹಾಗೂ ಮಾಜಿ ಮುಖ್ಯಮಂತ್ರಿಯವರು ಜನರಿಗೆ ದ್ರೋಹ ಬಗೆದಿದ್ದಾರೆ ಎಂದು ಮಲೆನಾಡು ರೈತ ಹೋರಾಟ ಸಮಿತಿಯ ಸಂಚಾಲಕ ತೀ.ನಾ. ಶ್ರೀನಿವಾಸ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಶನಿವಾರ (ಫೆ.೪) ಸುದ್ದಿಗೋಷ್ಠಿಯಲ್ಲಿ ಆರೋಪ ಮಾಡಿದ ಅವರು, ರಾಜ್ಯ ಮುಖ್ಯಮಂತ್ರಿ ಇಲ್ಲಿಯವರೆಗೆ 3 ಲಕ್ಷ ಬ‌ಗರ್ ಹುಕುಂ ಸಾಗುವಳಿ ಅರ್ಜಿಗಳನ್ನು ವಜಾ ಮಾಡಿದ್ದಾರೆ. ಬಗರ್ ಹುಕುಂಗೆ ಅರ್ಜಿ ಸಲ್ಲಿಸಿದ ರೈತರಿಗೆ ದಾಖಲೆ ಸಂಗ್ರಹಿಸಲು ಅಧಿಕಾರಿಗಳ ಸಹಾಯ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಆದರೆ, ಅಧಿಕಾರಿಗಳು ಅದನ್ನು ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: Hit and Run case : ಕಾರು ಡಿಕ್ಕಿ ಹೊಡೆಸಿ ಇಬ್ಬರ ಸಾವಿಗೆ ಕಾರಣನಾದ ಮಂಗಳೂರಿನ ಯೂಟ್ಯೂಬರ್‌ ಅರೆಸ್ಟ್‌

ಸಂಸತ್ ಹಾಗೂ ವಿಧಾನ ಸಭೆಯಲ್ಲಿ ಶರಾವತಿ ಸಂತ್ರಸ್ತರ ಸಮಸ್ಯೆಯನ್ನು ಪ್ರಸ್ತಾಪಿಸಿದ ಮಾತ್ರಕ್ಕೆ ಅದು ಬಗೆಹರಿಯುವುದಿಲ್ಲ. ಅದರ ಬಗ್ಗೆ ಚರ್ಚೆಯಾಗಿ ಒಂದು ನಿರ್ದಿಷ್ಟ ತೀರ್ಮಾನಕ್ಕೆ ಬರಬೇಕು. ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂತ್ರಸ್ತರ ಬಗ್ಗೆ ಕನಿಕರವಿದ್ದರೆ, ಜಿಲ್ಲೆಗೆ ಆಗಮಿಸಲಿರುವ ಪ್ರಧಾನಿಯವರ ಕೈಯಲ್ಲಿ ಹಕ್ಕುಪತ್ರ ವಿತರಣೆ ಮಾಡಿಸಬೇಕು ಎಂದು ಸವಾಲು ಹಾಕಿದ್ದಾರೆ.

Exit mobile version